ನೀವು ಸರ್ಕಾರದ ಗುಲಾಮರಾಗಿ ಕೆಲಸ ಮಾಡಬೇಡಿ: ಎಚ್ಡಿಕೆ

Posted By: Nayana
Subscribe to Oneindia Kannada

ಕೊಪ್ಪಳ, ಏಪ್ರಿಲ್ 11: ಚುನಾವಣಾಧಿಕಾರಿಗಳ ವಿರುದ್ದ ಗರಂ ಆಗಿರುವ ಮಾಜಿ ಸಿಎಂ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ ಕುಮಾರಸ್ವಾಮಿ, ನೀವು ಸರ್ಕಾರದ ಗುಲಾಮರಾಗಿ ಕೆಲಸ ಮಾಡಬೇಡಿ. ಬದಲಾಗಿ 6.5 ಕೋಟಿ ಜನರ ಪರ ಕೆಲಸ ಮಾಡಿ ಎಂದು ಖಾರವಾಗಿ ಸಲಹೆ ನೀಡಿದ್ದಾರೆ.

ಕೃಷ್ಣ ಜೆಡಿಎಸ್‌ಗೆ ಬಂದರೆ ಸ್ವಾಗತ: ಎಚ್‌.ಡಿ. ಕುಮಾರಸ್ವಾಮಿ

ಕೊಪ್ಪಳದಲ್ಲಿ ಮಂಗಳವಾರ ನಡೆದ ವಿಕಾಸಪರ್ವ ಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ ಚುನಾವಣಾ ನೀತಿಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ರಿಟರ್ನಿಂಗ್ ಆಫಿಸರ್ ಗಳು ನಮಗೆ ತೊಂದರೆ ಕೊಡುತ್ತಿದ್ದಾರೆ.

ಬಳ್ಳಾರಿಯಲ್ಲಿ ಏ.11, 12ರಂದು ಎಚ್ಡಿಕೆ ಚುನಾವಣಾ ಪ್ರಚಾರ

ಕೊಪ್ಪಳ ಜಿಲ್ಲೆಯ ತಾವರಗೇರಾ ಸಮೀಪದಲ್ಲಿ ನಮ್ಮ ವಾಹನ ಸೀಜ್ ಮಾಡಿದ್ದಾರೆ. ಚಾಲಕರಿಗೆ ಕೊಟ್ಟ ಸಂಬಳ ಹಣವಿದ್ದ ಕಾರಣಕ್ಕೆ ವಾಹನ್ ಸೀಜ್ ಮಾಡಿದ್ದಾರೆ. ಜತೆಗೆ ಕೂಡ್ಲಗಿ ಬಳಿ ಸಮಾವೇಶ ನಡೆಸಲು ಅನುಮತಿ ನೀಡುತ್ತಿಲ್ಲ. ಇದ್ಯಾವ ಸೀಮೆ ಚುನಾವಣಾ ಆಯೋಗ ಎಂದು ಕಿಡಿಕಾರಿದರು.

HDK dares election crews dont be slaves of state govt

ಇದೇ ವೇಳೆ ಸಿಎಂ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದ ಹೆಚ್.ಡಿ ಕುಮಾರಸ್ವಾಮಿ, ಸಿಎಂ ಬರೀ ದೌರ್ಭಾಗ್ಯಗಳನ್ನೇ ನೀಡಿದ್ದಾರೆ. ಅದನ್ನ ನಾನು ಸರಿಪಡಿಸುತ್ತೇನೆ, ಸಾಲಮನ್ನಾ ಹೆಸರಿನಲ್ಲಿ ರೈತರಿಗೆ ಸಿದ್ದರಾಮಯ್ಯ ಮೋಸ ಮಾಡಿದ್ದಾರೆ ಎಂದು ಆರೋಪಿಸಿದರು.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಬಿಜೆಪಿ ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿ ಪ್ರಕಟ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ 120 ಸ್ಥಾನಗಳನ್ನು ಗಳಿಸುವ ಮೂಲಕ ಅಧಿಕಾರಕ್ಕೆ ಬರಲಿದೆ. ಅಧಿಕಾರಕ್ಕೆ ಬಂದ 24 ಗಂಟೆಗಳ ಅವಧಿಯಲ್ಲಿ ರೈತರ ಸಾಲ ಮನ್ನಾ ಮಾಡುವುದಾಗಿ ಈಗಾಗಲೇ ನಾನು ಘೋಷಿಸಿರುವಂತೆ ಮಾತಿಗೆ ಬದ್ಧನಾಗಿರುತ್ತೇನೆ. ಈ ಹಿನ್ನೆಲೆಯಲ್ಲಿ ರಾಜ್ಯದ ರೈತಾಪಿ ವರ್ಗ ಜೆಡಿಎಸ್ ಗೆ ಬಹುದೊಡ್ಡ ಬೆಂಬಲ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Former chief minister H.D. KumaraSwamy has warned electoral officer to work honestly and impartially rather behave like slaves of the state government.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ