ಮುಸ್ಲಿಂ ಯುವತಿಯನ್ನ ವಿವಾಹ ಆಗುವ ಹಿಂದೂ ಯುವಕರಿಗೆ ₹5,OO,OOO ಘೋಷಣೆ: ಯತ್ನಾಳ್
ಹಿಂದೂ ಫೈಯರ್ ಬ್ರಾಂಡ್ ಅಂತಲೇ ಹೆಸರುವಾಸಿಯಾಗಿರುವ ಬಸನಗೌಡ ಪಾಟೀಲ್ ಯತ್ನಾಳ್ ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಾಗುತ್ತಲಿರುತ್ತಾರೆ. ಹಿಂದೂಗಳ ಪರ ಧ್ವನಿ ಎತ್ತಯವುದರಲ್ಲಿ ಎತ್ತಿದ ಕೈ ಇವರು. ಇದೀಗ ಹಿಂದೂ ಯುವಕರು ಮುಸ್ಲಿಂ ಯುವತಿಯನ್ನು ವಿವಾಹ ಆದ್ರೆ ಅವರಿಗೆ 5,OO,OOO ರೂಪಾಯಿ ಕೊಡುತ್ತೇನೆ ಎಂದು ಹೇಳಿ ಗಮನ ಸೆಳೆದಿದ್ದಾರೆ. ಹಾಗಾದ್ರೆ, ಹೀಗೆ ಹೇಳಲು ಕಾರಣ ಏನು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಕೊಪ್ಪಳದಲ್ಲಿ ಹತ್ಯೆಯಾದ ಗವಿಸಿದ್ದಪ್ಪ ನಾಯಕ್ ಅವರ ಮನೆಗೆ ಬಸನಗೌಡ ಪಾಟೀಲ್ ಯತ್ನಾಳ್ ಕೆ.ಎಸ್.ಈಶ್ವರಪ್ಪ ಅವರ ಜೊತೆ ಭೇಟಿ ನೀಡಿ ಸಾಂತ್ವನ ಹೇಳಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡುವಾಗ ಅವರು ಈ ಘೋಷಣೆ ಮಾಡಿದ್ದಿ, ಇದು ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್ ಅವರು, ರಾಜ್ಯದಲ್ಲಿ ಹಿಂದೂ ಯುವಕರಿಗೆ ರಕ್ಷಣೆ ಇಲ್ಲದಂತೆ ಆಗಿದೆ. ಯಾಕಂದ್ರೆ ರಾಜ್ಯದಲ್ಲಿ ಇರುವುದು ಮುಸ್ಲಿಂ ಪರ ಸರ್ಕಾರ. ಕಾಂಗ್ರೆಸ್ ಸರ್ಕಾರ ಅಹಿಂದ ಸರ್ಕಾರ ಆಗಿದೆ. ಆದರೆ, ರಾಜ್ಯದಲ್ಲಿ ಅಹಿಂದ ಅಲ್ಲ, ಅಲ್ಪಸಂಖ್ಯಾತರನ್ನು ರಕ್ಷಿಸುವ ಕೆಲಸವನ್ನು ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹಿಂದೂ ಯುವಕ ಗವಿಸಿದ್ದಪ್ಪ ನಾಯಕ್ ಕೊಲೆ ಪ್ರಕರಣವನ್ನ ರಾಜ್ಯದ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಸರ್ಕಾರ ಪೊಲೀಸರಿಗೆ ಸ್ವಾತಂತ್ರ್ಯ ನೀಡಬೇಕು. ನಾವು ಆ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಹೋರಾಟ ಮಾಡಲಿದ್ದೇವೆ. ಇದನ್ನು ಗಂಭೀರವಾಗಿ ಪರಿಗಣಿಸದಿದ್ದರೆ, ಸಿಎಂ ಸಿದ್ದರಾಮಯ್ಯ ಸರಕಾರವನ್ನ ಅಧಿವೇಶನದಲ್ಲಿ ತರಾಟೆಗೆ ತೆಗೆದುಕೊಳ್ಳುತ್ತೇವೆ ಎಂದು ಆಕ್ರೋಶ ಹೊರಹಾಕಿದರು.
ಮುಸ್ಲಿಂ ಯುವತಿಯರನ್ನ ಪ್ರೀತಿ ಮಾಡಬಾರ್ದಾ? ಅವರನ್ನು ಮದುವೆ ಆಗಬಾರ್ದು ಅಂತಾ ಎಲ್ಲಿ ಬರೆದಿದೆ? ಇನ್ಮುಂದೆ ನಾವು ಹಿಂದೂ ಯುವಕರು ಮುಸ್ಲಿಂ ಯುವತಿಯನ್ನು ಮದುವೆ ಆದ್ರೆ, 5,00,000 ರೂಪಾಯಿ ಕೊಡುವೆವು ಎಂಬ ಅಭಿಯಾನ ಆರಂಭ ಮಾಡಲಿದ್ದೇವೆ ಎಂದು ಹೇಳಿ ಗಮನ ಸೆಳದರು. ಈ ಹೇಳಿಕೆ ನೀಡುತ್ತಿದ್ದಂತೆ ಅವರ ಅಕ್ಕಪಕ್ಕದಲ್ಲಿ ನಿಂತಿದ್ದ ಯುವಕ, ಯುವತಿಯರು ಶಿಳ್ಳೆ ಹೊಡೆದು ಯತ್ನಾಳ್ ಅವರಿಗೆ ಜೈಕಾರ ಹಾಕಿದರು.
ಯತ್ನಾಳ್ ಆಕ್ರೋಶ: ಹಿಂದೂಗಳನ್ನು ಕೊಲೆ ಮಾಡುವ ಮನಸ್ಥಿತಿ ಮುಸ್ಲಿಮರಲ್ಲಿ ಇದೆ. ರಿಲ್ಸ್‌ನಲ್ಲಿ ಮಚ್ಚು ತೋರಿಸಿದ್ದಾನೆ, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಗವಿಸಿದ್ದಪ್ಪ ಪ್ರೀತಿ ಮಾಡಿದ್ದ ಹುಡುಗಿಯನ್ನೂ ಬಂಧಿಸಬೇಕು. ಲವ್ ಜಿಹಾದ್ ಮಾಡಿದಾಗ ಮುಸ್ಲಿಮರಿಗೆ ರಕ್ಷಣೆ ಕೊಡುವ ಕೆಲಸ ಆಗುತ್ತದೆ. ಈ ಸರ್ಕಾರ ಬಂದಾಗಿನಿಂದ ಹಿಂದೂಗಳಿಗೆ ರಕ್ಷಣೆಯಿಲ್ಲದಂತಾಗಿದೆ. ಮಚ್ಚು ತೆಗೆದುಕೊಂಡು ಓಡಾಡುವವರಿಗೆ ರಾಜ್ಯ ಸರ್ಕಾರದ ಬೆಂಬಲ ನೀಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದೇ ಮೊದಲೇನಲ್ಲ ಹಿಂದೂಗಳ ವಿಚಾರ ಬಂದಾಗಲೆಲ್ಲ ಯತ್ನಾಲ್ ಅವರು ತಮ್ಮ ಧ್ವನಿಯಲ್ಲಿ ಆಡಳಿತ ಸರ್ಕಾರದ ವಿರುದ್ಧ ಘರ್ಜಿಸುವ ಕೆಲಸವನ್ನು ಮಾಡುತ್ತಲೇ ಬಂದಿದ್ದಾರೆ. ಹಾಗೆಯೇ ಇದೀಗ ಹಿಮದೂ ಯುವಕನ ಹತ್ಯೆ ಕುರಿತು ಪ್ರತಿಕ್ರಿಯಿಸಿ, ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಘರ್ಜಿಸಿದ್ದಾರೆ. ಅಲ್ಲದೆ, ಇದೇ ವೇಳೆ ಹಿಂದೂ ಯುವಕರು ಮುಸ್ಲಿಂ ಯುವತಿಯನ್ನು ಮದುವೆಯಾದ್ರೆ ಹಣ ಕೊಡುವುದಾಗಿಯೂ ಘೋಷಣೆ ಮಾಡುವ ಅಭಿಯಾನ ಆರಂಭಿಲಸಲಾಗುತ್ತದೆ ಎಂದು ಹೇಳಿ ಗಮನ ಸೆಳೆದಿದ್ದಾರೆ.












Click it and Unblock the Notifications