ಕೊಪ್ಪಳ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊಪ್ಪಳದಲ್ಲಿ ಸ್ಥಾಪನೆಯಾಗಲಿದೆ ಬೃಹತ್ ಗೊಂಬೆ ತಯಾರಿಕಾ ಕ್ಲಸ್ಟರ್

|
Google Oneindia Kannada News

ಕೊಪ್ಪಳ, ಆಗಸ್ಟ್ 30: ಕೇಂದ್ರ ಸರ್ಕಾರದ ಆತ್ಮನಿರ್ಭರ್ ಭಾರತ್ ಯೋಜನೆಯಡಿ ಬೃಹತ್ ಗೊಂಬೆಗಳ ತಯಾರಿಕಾ ಕ್ಲಸ್ಟರ್ ನ್ನು ಕೊಪ್ಪಳದಲ್ಲಿ ಸ್ಥಾಪನೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.

Recommended Video

CSK ತಂಡದ ಮಾಲಿಕ Srinivasan , Raina ಬಗ್ಗೆ ಹೇಳಿದ್ದೇ ಬೇರೆ | Oneindia Kannada

ಕೇಂದ್ರ ಸರ್ಕಾರದ ಆತ್ಮನಿರ್ಭರ್ ಭಾರತ್ ಯೋಜನೆಯಡಿ ಕೊಪ್ಪಳದಲ್ಲಿ ಬೃಹತ್ ಗೊಂಬೆ ತಯಾರಿಕಾ ಕ್ಲಸ್ಟರ್ ತಲೆ ಎತ್ತಲಿದ್ದು, ಈ ಬಗ್ಗೆ ಟ್ವೀಟ್ ಮಾಡುವ ಮೂಲಕ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮಾಹಿತಿ ನೀಡಿದ್ದಾರೆ.

ನರೇಂದ್ರ ಮೋದಿ ಮನ್ ಕೀ ಬಾತ್; ಮುಖ್ಯಾಂಶಗಳುನರೇಂದ್ರ ಮೋದಿ ಮನ್ ಕೀ ಬಾತ್; ಮುಖ್ಯಾಂಶಗಳು

ಮೊದಲನೆಯದಾಗಿ "ಸ್ವಾವಲಂಬಿ ರಾಷ್ಟ್ರ ನಿರ್ಮಾಣದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ #VocalForLocal ಪರಿಕಲ್ಪನೆಗೆ ಅನುಗುಣವಾಗಿ, ಆಟಿಕೆ ತಯಾರಿಕೆ ಮೂಲಕ ಆರ್ಥಿಕತೆ ಹಾಗೂ ಉದ್ಯೋಗ ಸೃಷ್ಟಿಗೆ ಬಲ ತುಂಬಲು ದೇಶದ ಮೊದಲ ಆಟಿಕೆ ಉತ್ಪಾದನಾ ಕ್ಲಸ್ಟರ್ ಕೊಪ್ಪಳದಲ್ಲಿ ಪ್ರಾರಂಭಿಸಲಾಗುತ್ತಿದೆ. ಇಲ್ಲಿ ದೇಶ-ವಿದೇಶಗಳ ಆಟಿಕೆ ತಯಾರಕರಿಗೆ ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು" ಎಂದು ತಿಳಿಸಿದ್ದಾರೆ.

A Huge Doll Manufacturing Cluster Is To Be Set Up In Koppala: CM Yediyurappa

ಕೊಪ್ಪಳದಲ್ಲಿ 400 ಎಕರೆ ಜಮೀನಿನಲ್ಲಿ ವಿಶೇಷ ಆರ್ಥಿಕ ವಲಯದಲ್ಲಿ ಸ್ಥಾಪನೆ ಮಾಡಲಾಗುತ್ತಿದ್ದು, ಇದು ಮುಂದಿನ ಐದು ವರ್ಷಗಳಲ್ಲಿ 40 ಸಾವಿರ ಉದ್ಯೋಗವನ್ನು ಸೃಷ್ಟಿಸುವ ನಿರೀಕ್ಷೆ ಇದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

English summary
The state government has come forward to set up a huge toy manufacturing cluster in Koppala under the central government's Atmanirbhar Bharat project.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X