ಜೆಡಿಎಸ್-ಬಿಜೆಪಿ ಒಳ ಒಪ್ಪಂದ ಕಾಂಗ್ರೆಸ್ ಮಾಜಿ ಸಂಸದ ಆರೋಪ
Recommended Video

ಕೊಪ್ಪಳ, ಆಗಸ್ಟ್ 10: ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿವೆ ಮಾಡಿಕೊಂಡು ಬಿಜೆಪಿಯ ಹಣಿಯಲು ಸಜ್ಜಾಗಿರುವ ಸಮಯದಲ್ಲಿ ಕಾಂಗ್ರೆಸ್ ಮಾಜಿ ಸಂಸದರೊಬ್ಬರು ಜೆಡಿಎಸ್, ಬಿಜೆಪಿಯೊಂದಿಗೆ ಒಳ ಒಪ್ಪಂದ ಮಾಡಿಕೊಂಡಿದೆ ಎಂಬ ಮಾಡಿದ್ದಾರೆ.
ಕಾಂಗ್ರೆಸ್ ಮಾಜಿ ಸಂಸದ ಶಿವರಾಮೇಗೌಡ ಈ ಆರೋಪ ಮಾಡಿದ್ದು, ನಗರಸಭೆ ಚುನಾವಣೆ ಸಿದ್ಧತೆಗಾಗಿ ಕೊಪ್ಪಳದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಜೆಡಿಎಸ್-ಬಿಜೆಪಿ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದಿದ್ದಾರೆ.
ಈಗಾಗಲೇ ವಿಧಾನಸಭೆ ಚುನಾವಣೆಯನ್ನು ನಾವು ಕಳೆದುಕೊಂಡಿದ್ದೇವೆ, ನಗರಸಭೆಯನ್ನೂ ಕಳೆದುಕೊಳ್ಳುವುದು ಬೇಡ ಎಂದು ಅವರು ಕಾರ್ಯಕರ್ತರಿಗೆ ಕಿವಿಮಾತು ಹೇಳಿದ್ದಾರೆ.

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಪ್ರತ್ಯೇಕವಾಗಿ ಸ್ಪರ್ಧೆ ಮಾಡುತ್ತಿದ್ದು, ಮೊನ್ನೆಯಷ್ಟೆ ಸಿದ್ದರಾಮಯ್ಯ ಅವರು, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಜೆಡಿಎಸ್ ಜೊತೆ ಫ್ರೆಂಡ್ಲಿ ಫೈಟ್ ಮಾಡಲಿದ್ದು, ಬಿಜೆಪಿ ಜತೆ ಜಿದ್ದಾಜಿದ್ದಿನ ಹೋರಾಟ ಮಾಡಲಿದೆ ಎಂದಿದ್ದರು.











Click it and Unblock the Notifications