ರಾಣೇಬೆನ್ನೂರಿನಲ್ಲಿ ಜೆಡಿಎಸ್ ಪಂಚರತ್ನ ಯಾತ್ರೆ: ರೈತರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ಜೆಡಿಎಸ್‌ನ ಅಭಿವೃದ್ಧಿ ಕಾರ್ಯಗಳನ್ನು ನಾಡಿನ ಪ್ರತಿ ಹಳ್ಳಿಗೂ ತಲುಸುವ ಉದ್ದೇಶವೇ ಪಂಚರತ್ನ ಯಾತ್ರೆ. ಈ ಹಿನ್ನಲೆ ಕುಮಾರಸ್ವಾಮಿ ಬುಧವಾರ ಉತ್ತರ ಕರ್ನಾಟಕದ ಹೆಬ್ಬಾಗಿಲು ರಾಣೇಬೆನ್ನೂರು ಹಲಗೇರಿಯಲ್ಲಿ ಪಂಚರತ್ನ ಯಾತ್ರೆ ಕೈಗೊಂಡಿದ್ದರು.
ಹಾವೇರಿ, ಫೆಬ್ರವರಿ 15: ಉತ್ತರ ಕರ್ನಾಟಕದ ಹೆಬ್ಬಾಗಿಲು ರಾಣೇಬೆನ್ನೂರಿನಲ್ಲಿ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಪಂಚರತ್ನ ಯಾತ್ರೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.
ಮಾಜಿ ಸಿಎಂ ಕುಮಾರಸ್ವಾಮಿ ಕರ್ನಾಟಕದಾದ್ಯಂತ ಪಂಚರತ್ನ ಯಾತ್ರೆಯ ಮೂಲಕ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ನಾಯಕರಿಗೆ ಟಕ್ಕರ್ ನೀಡಲು ಸಜ್ಜಾಗಿದ್ದಾರೆ. ರಾಣೇಬೆನ್ನೂರು ಕ್ಷೇತ್ರದಿಂದ ಈ ಬಾರಿ ಜೆಡಿಎಸ್ ಗೆಲುವು ಸಾಧಿಸಬೇಕು ಎನ್ನುವ ಹಂಬಲದಿಂದ ಮಾಜಿ ಕುಮಾರಸ್ವಾಮಿ, ಜೆಡಿಎಸ್ ಅಭ್ಯರ್ಥಿ ಮಂಜುನಾಥ್ ಗೌಡಶಿವಣ್ಣನವರ ಪರ ಅದ್ಧೂರಿ ಪ್ರಚಾರ ನಡೆಸಿದರು.
ಜೆಡಿಎಸ್‌ನ ಅಭಿವೃದ್ಧಿ ಕಾರ್ಯಗಳನ್ನು ನಾಡಿನ ಪ್ರತಿ ಹಳ್ಳಿಗೂ ತಲುಸುವ ಉದ್ದೇಶವೇ ಪಂಚರತ್ನ ಯಾತ್ರೆ. ಈ ಹಿನ್ನಲೆ ಕುಮಾರಸ್ವಾಮಿ ಬುಧವಾರ ಉತ್ತರ ಕರ್ನಾಟಕದ ಹೆಬ್ಬಾಗಿಲು ರಾಣೇಬೆನ್ನೂರು ಹಲಗೇರಿಯಲ್ಲಿ ಪಂಚರತ್ನ ಯಾತ್ರೆ ಕೈಗೊಂಡಿದ್ದರು. ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಜೆಡಿಎಸ್ ಅಭ್ಯರ್ಥಿ ಮಂಜುನಾಥ್ ಗೌಡಶಿವಣ್ಣನವರ ಪರ ಪಂಚರತ್ನ ಯಾತ್ರೆ ಮೂಲಕ ಪ್ರಚಾರ ನಡೆಸಿದರು.

ತಾಲೂಕಿನ ಹಲಗೇರಿ ಗ್ರಾಮದಿಂದ ಮೆಡ್ಲೇರಿವರೆಗೂ ಕುಮಾರಸ್ವಾಮಿ ರೋಡ್ ಶೋ ನಡೆಸಿದರು. ಜೆಡಿಎಸ್ ಕಾರ್ಯಕರ್ತರು ಪನ್ನೀರ ಎಲೆ ಹಾರ ಹಾಕಿ ಅದ್ಧೂರಿಯಾಗಿ ಸ್ವಾಗತಿಸಿಕೊಂಢರು. ಇನ್ನು ಪಂಚರತ್ನ ಯಾತ್ರೆಯ ನಡುವೆ ಕುಮಾರಸ್ವಾಮಿ ರಾಣೇಬೆನ್ನೂರು ತಾಲೂಕಿನ ಅಂತರವಳ್ಳಿ ಗ್ರಾಮದ ಹೊಲದಲ್ಲಿ ರೈತ ಕಾರ್ಮಿಕರನ್ನು ಮಾತನಾಡಿಸಿ ಅವರ ಸಮಸ್ಯೆ ಆಲಿಸಿದರು.
ಇನ್ನು ಪಂಚ ರತ್ನಯಾತ್ರೆ ಯೋಜನೆ ಉದ್ದೇಶವನ್ನು ಕುಮಾರಸ್ವಾಮಿ ಜನರಿಗೆ ವಿವರಿಸಿದರು. ಇನ್ನೊಂದೆಡೆ ರಾಜ್ಯದಲ್ಲಿರುವ ಬಿಜೆಪಿ ಸರ್ಕಾರ ತಮ್ಮ ಆಡಳಿತವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಬಿಜೆಪಿ ಸರ್ಕಾರ ಹಾಗೂ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ವಿರೋಧ ಪಕ್ಷಗಳ ಮುಖಂಡರ ಮೇಲೆ ಐಟಿ ದಾಳಿ ಪ್ರತಿ ಸಾರಿ ಚುನಾವಣೆ ಬಂದಾಗ ಪ್ರಾರಂಭ ಆಗುತ್ತದೆ. ರಾಜ್ಯದಲ್ಲಿ ವಿರೋಧ ಪಕ್ಷಗಳ ಮುಖಂಡರ ಮೇಲೆ ದಾಳಿ ನಡೆಯುತ್ತದೆ. ಬಿಜೆಪಿ ಸರ್ಕಾರ ಬಂದ ಮೇಲೆ ಇದು ನಡೆದುಕೊಂಡು ಬಂದಿದೆ ಎಂದು ಕಿಡಿಕಾರಿದರು.
ಇನ್ನು ರಾಣೇಬೆನ್ನೂರು ತಾಲೂಕಿನಲ್ಲಿ ರಾಷ್ಟೀಯ ಪಕ್ಷಗಳು ಬಲಗೊಳ್ಳದ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ರಾಣೇಬೆನ್ನೂರು ಕ್ಷೇತ್ರದಿಂದ ಪಂಚರತ್ನ ಯಾತ್ರೆ ಕೈಗೊಂಡಿದ್ದಾರೆ. ಈ ಬಾರಿ ರಾಣೇಬೆನ್ನೂರು ಕ್ಷೇತ್ರದಲ್ಲಿ ಜಿಡಿಎಸ್ ಅಭ್ಯರ್ಥಿ ಮಂಜುನಾಥ್ ಗೌಡಶಿವಣ್ಣನವರ ಭರ್ಜರಿ ಜಯ ಸಾಧಿಸುತ್ತಾರೆ ಎನ್ನುವ ನಿರೀಕ್ಷೆಯಲ್ಲಿ ಕುಮಾರಸ್ವಾಮಿ ಪ್ರಚಾರ ನಡೆಸಿದ್ದಾರೆ.

ಬಿಜೆಪಿ ಶಾಸಕನೇ ಟೆಂಡರ್‌ನಲ್ಲಿ ಸಾವಿರಾರು ಕೋಟಿ ಅವ್ಯವಹಾರ ಆಗಿದೆ ಅಂತ ಚರ್ಚೆ ಮಾಡಿದ ಮೇಲೆ ಈ ಸರ್ಕಾರದ ಮೇಲೆ ಏನು ಚರ್ಚೆ ಮಾಡಲಾಗುತ್ತದೆ. ಇನ್ನು ಎರಡೂ ಪಕ್ಷಗಳ ಬಗ್ಗೆ ಜನರಿಗೆ ಭ್ರಮ ನಿರಸ ಆಗಿದೆ. ರಾಜಕೀಯ ಬ್ರಹ್ಮಾಸ್ರ್ರ ನಮ್ಮ ಮೇಲೆ ಬಿಟ್ಟರೂ ಜನತಾ ದಳವನ್ನು ತೆಗೆಯೋಕೆ ಆಗಲ್ಲ ಎಂದರು.
ನಟಿ ರಮ್ಯಾ ಚನ್ನಪಟ್ಟಣದಲ್ಲಿ ಸ್ಫರ್ಧೆ ವಿಚಾರವಾಗಿ ಮಾತನಾಡಿದ ಅವರು, ರಮ್ಯಾ ನನ್ನ ಸಹೋದರಿ ಸಮಾನ, ನನ್ನ ವಿರುದ್ಧ ನಿಲ್ಲಬೇಕು ಎಂದಿದ್ದರೆ ನಿಲ್ಲಬಹುದು. ಯಾರು ಎಲ್ಲಿ ಬೇಕಾದರೂ ನಿಲ್ಲಬಹುದು. ನಿಲ್ಲಬೇಡಿ ಎಂದು ಹೇಳಲು ಆಗಲ್ಲ. ಆದರೆ ಜನ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಕುಮಾರಸ್ವಾಮಿ ಹೇಳಿದರು.
ಮಾಜಿ ಸಿಎಂ ಕುಮಾರಸ್ವಾಮಿ ರಾಣೇಬೆನ್ನೂರು ತಾಲೂಕಿನ ಮೆಡ್ಲೇರಿ ಗ್ರಾಮದಲ್ಲಿ ಬುಧವಾರ ಗ್ರಾಮವಾಸ್ತವ್ಯ ಮಾಡಲಿದ್ದಾರೆ. ಈ ವೇಳೆ ಜನರ ಜೊತೆ ಬೆರೆತು ಅವರ ಸಮಸ್ಯೆ ಆಲಿಸಲಿದ್ದಾರೆ. ಜೆಡಿಎಸ್ ಅಭ್ಯರ್ಥಿ ಮಂಜುನಾಥ್ ಗೌಡಶಿವಣ್ಣನವರ ಗೆಲುವು ಸಾಧಿಸುತ್ತಾರೆ ಎನ್ನುವ ನಿರೀಕ್ಷೆಯಲ್ಲಿ ಉತ್ತರ ಕರ್ನಾಟಕದ ಹೆಬ್ಬಾಗಿಲಿನಿಂದ ಪಂಚರತ್ನ ಯಾತ್ರೆ ಪ್ರಾರಂಭವಾಗಿದೆ. ಈ ಯಾತ್ರೆ ಜನರ ಮೇಲೆ ಎಷ್ಟು ಪರಿಣಾಮ ಬೀರುತ್ತದೆ ಎನ್ನುವುದು ಚುನಾವಣೆ ಬಳಿಕವೇ ತಿಳಿದು ಬರಲಿದೆ.












Click it and Unblock the Notifications