ಕೊಪ್ಪಳ: ಮೇ 22ರಂದು ಗವಿಮಠ ಕ್ಯಾಂಪಸ್‌ನಲ್ಲಿ ಬೃಹತ್ ಉದ್ಯೋಗ ಮೇಳ
ಕೊಪ್ಪಳ, ಮೇ 20: ಕೊಪ್ಪಳ ಜಿಲ್ಲೆಯಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಪ್ರಮುಖವಾದ ಮಾಹಿತಿ ಇದೆ. ಕೊಪ್ಪಳದಲ್ಲಿ ಮೇ 22ರಂದು ಬೃಹತ್ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಆಸಕ್ತ, ಅರ್ಹ ಅಭ್ಯರ್ಥಿಗಳು ನಿಗದಿತ ದಾಖಲಾತಿಗಳ ಜೊತೆ ಈ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದು.
ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಬಳ್ಳಾರಿಯ ಸಮರ್ಥನಂ ಅಂಗವಿಕಲರ ಸಂಸ್ಥೆ ಹಾಗೂ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಕಾಲೇಜ್ ಆಫ್ ಎಜ್ಯುಕೇಶನ್ ಇವರ ಸಂಯುಕ್ತಾಶ್ರಯದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ.

ಗವಿಮಠ ಕ್ಯಾಂಪಸ್‌ನಲ್ಲಿ ಮೇ 22ರ ಗುರುವಾರ ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಉದ್ಯೋಗ ಮೇಳ ನಡೆಯಲಿದೆ. ಈ ಬೃಹತ್ ಉದ್ಯೋಗ ಮೇಳದಲ್ಲಿ ಕೊಪ್ಪಳ, ಹುಬ್ಬಳ್ಳಿ, ಬೆಂಗಳೂರು, ಬೆಳಗಾವಿ, ಬಳ್ಳಾರಿ, ಹಾಸನ, ಶಿವಮೊಗ್ಗ ಹಾಗೂ ಇತರ ಜಿಲ್ಲೆಗಳ ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿದ್ದು, ತಮ್ಮಲ್ಲಿನ ಖಾಲಿ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ.
ಈ ಉದ್ಯೋಗ ಮೇಳದಲ್ಲಿ 18 ರಿಂ 35 ವರ್ಷದ ಆಸಕ್ತ ನಿರುದ್ಯೋಗ ಪುರುಷ, ಮಹಿಳಾ ಹಾಗೂ ವಿಕಲಚೇತನ ಅಭ್ಯರ್ಥಿಗಳು ಭಾಗವಹಿಸಬಹುದು. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಕೊಪ್ಪಳ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವನ್ನು ಸಂಪರ್ಕಿಸಿ, ದೂರವಾಣಿ ಸಂಖ್ಯೆ 9353515518.
ಉದ್ಯೋಗ ಮೇಳದಲ್ಲಿ ಎಸ್.ಎಸ್.ಎಲ್.ಸಿ, ಪಿಯುಸಿ, ತತ್ಸಮಾನ, ಐಟಿಐ, ಡಿಪ್ಲೋಮಾ, ಕಂಪ್ಯೂಟರ್ ತರಬೇತಿ ಹಾಗೂ ಯಾವುದೇ ಪದವಿ ಪಡೆದ ಅಭ್ಯರ್ಥಿಗಳು, ತಮ್ಮ ವಿದ್ಯಾರ್ಹತೆಯ ಎಲ್ಲಾ ಪ್ರಮಾಣ ಪತ್ರಗಳ 10 ಪ್ರತಿ ಮತ್ತು ಆಧಾರ್ ಕಾರ್ಡ್ ಪ್ರತಿ, ರೆಸ್ಯೂಮ್ ಹಾಗೂ ಪಾಸ್ ಪೋರ್ಟ್ ಅಳತೆಯ 2 ಭಾವಚಿತ್ರಗಳೊಂದಿಗೆ ಭಾಗವಹಿಸಬಹುದು.
ಅಪ್ರೆಂಟೀಸ್ ತರಬೇತಿಗೆ ಆಯ್ಕೆ: ಬಳ್ಳಾರಿ ನಗರದ ರೇಡಿಯೋ ಪಾರ್ಕ್ ಹತ್ತಿರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಮೇ 21ರಂದು ಬೆಳಗ್ಗೆ 9 ಗಂಟೆಗೆ ಅಪ್ರೆಂಟೀಸ್ ತರಬೇತಿಗಾಗಿ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ಭಾಗವಹಿಸಬಹುದು.
ಬೆಂಗಳೂರಿನ ಟೊಯೋಟಾ, ಕಿರ್ಲೋಸ್ಕರ್, ಹೊಂಡಾ ಮೋಟಾರ್ ಸೈಕಲ್ ಕಂಪನಿಯಲ್ಲಿ ಅಪ್ರೆಂಟಿಸ್ ತರಬೇತಿ ಆಯ್ಕೆಗಾಗಿ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನ ನಡೆಸಲಾಗುತ್ತದೆ.
ಆಸಕ್ತ ಅಭ್ಯರ್ಥಿಗಳು 18 ವರ್ಷ ಪೂರೈಸಿರಬೇಕು. ಆಧಾರ್ ಕಾರ್ಡ್ ಪ್ರತಿ, ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಐ.ಟಿ.ಐ ಅಂಕಪಟ್ಟಿ, ಎರಡು ಭಾವಚಿತ್ರ ಹಾಗೂ ಸ್ವ-ವಿವರದ ಪ್ರತಿ ಜೊತೆ ಹಾಜರಾಗಬೇಕಿದೆ.
ಫಿಟ್ಟರ್, ಟರ್ನರ್, ಎಲೆಕ್ಟ್ರಿಷಿಯನ್, ವೆಲ್ಡರ್, ಇ.ಎಂ., ಎಂ.ಎಂ.ವಿ., ಮೆಕ್ಯಾನಿಕ್ ಡೀಸೆಲ್ ವೃತ್ತಿಗಳ ಅಂತಿಮ ವರ್ಷದ ವಿದ್ಯಾರ್ಥಿಗಳು ಹಾಗೂ ಐ.ಟಿ.ಐ ಪಾಸಾದ ಆಸಕ್ತಿಯುಳ್ಳ ಅಭ್ಯರ್ಥಿಗಳು ಹಾಜರಾಗಬಹುದು.
ಗೌರವಧನದ ಆಧಾರದ ಮೇಲೆ ತಾತ್ಕಾಲಿಕ ಸೇವೆಗೆ ಅರ್ಜಿ ಆಹ್ವಾನ: ದಾವಣಗೆರೆ ಜಿಲ್ಲೆಯ ಮಲೇಬೆನ್ನೂರು ಪುರಸಭೆಯ ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ ಮಿಷನ್ (ನ)-2.0 ಯೋಜನೆಯ ಮಾಹಿತಿ ಶಿಕ್ಷಣ ಮತ್ತು ಸಂವಹನ ಘಟಕದಡಿಯಲ್ಲಿ ಘನತ್ಯಾಜ್ಯ ಮತ್ತು ದ್ರವ ತ್ಯಾಜ್ಯ ನಿರ್ವಹಣೆಯ ಕುರಿತಂತೆ ನಗರ ಸ್ಥಳೀಯ ಸಂಸ್ಥೆಗಳ ಮಟ್ಟದಲ್ಲಿ ವಿವಿಧ ಬಗೆಯ ಚಟುವಟಿಕೆಗಳನ್ನು ಕೈಗೊಳ್ಳಲು ಸ್ವ-ಸಹಾಯ ಗುಂಪುಗಳ ಸದಸ್ಯೇತರ ನೇಮಕಾತಿ (ಘನತ್ಯಾಜ್ಯ, ಪಾರಂಪರಿಕ ತ್ಯಾಜ್ಯ, ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ಸಿಡಿ ತ್ಯಾಜ್ಯ ನಿರ್ವಹಣೆ ಸ್ವಚ್ಛ-ಸರ್ವೇಕ್ಷಣ, ನಗರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಓಡಿಎಫ್, ಓಡಿಎಫ್, ಸ್ಟಾರ್ ರೇಟಿಂಗ್ಸ್ ಮತ್ತು ಇತರೆ ವಿಷಯಗಳ ಕುರಿತು ಮನೆ ಮನೆಗೂ ಭೇಟಿ ನೀಡಿ ನೇರವಾಗಿ ಮಾತನಾಡುವುದರ ಮೂಲಕ ಐ.ಇ.ಸಿ ಚಟುವಟಿಕೆಗಳನ್ನು ಕೈಗೊಳ್ಳಲು ಮಹಿಳಾ ಸ್ವ-ಸಹಾಯ ಗುಂಪುಗಳಿಂದ 2 ಸದಸ್ಯರುಗಳನ್ನು ಮಾಸಿಕ ಗೌರವಧನ ಆಧಾರದ ಮೇಲೆ ತಾತ್ಕಾಲಿಕ ಸೇವೆ ಪಡೆದುಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಮಹಿಳಾ ಅಭ್ಯರ್ಥಿಗಳು ಅಗತ್ಯ ದಾಖಲಾತಿಯೊಂದಿಗೆ ಮೇ 23ರೊಳಗಾಗಿ ನಿಗದಿತ ಅರ್ಜಿ ನಮೂನೆಯನ್ನು ಕಛೇರಿಯಿಂದ ಪಡೆದು ಮುಖ್ಯಾಧಿಕಾರಿಗಳು, ಪುರಸಭೆ, ಮಲೇಬೆನ್ನೂರು ವಿಳಾಸಕ್ಕೆ ದ್ವಿ-ಪ್ರತಿಯಲ್ಲಿ ಸಲ್ಲಿಸಬೇಕು ಎಂದು ಸೂಚನೆ ನೀಡಲಾಗಿದೆ.
-
ಬೆಂಗಳೂರಲ್ಲಿ ಹೆಚ್ಚಾದ ಏಪ್ರಿಲ್ ಬಿಸಿಲಿನ ಕಾವು: 37°C ತಾಪಮಾನ ದಾಖಲು, 40 ಡಿಗ್ರಿ ತಲುಪುವ ನಿರೀಕ್ಷೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಆರ್ಸಿಬಿ ಗೆಲುವಿನ ಸಂಭ್ರಮದಲ್ಲಿ ಮುಳುಗಿದ ಅನುಷ್ಕಾ-ಅನನ್ಯಾ ಬಿರ್ಲಾ: ನೆಟ್ಟಿಗರ ಮನಗೆದ್ದ ಆ ಹ್ಯಾಂಡ್ಶೇಕ್ ವಿಡಿಯೋ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಕ್ವಿಂಟಾಲ್ ಅಡಿಕೆ ಧಾರಣೆ ಎಷ್ಟಿದೆ? ಇಲ್ಲಿದೆ ಏಪ್ರಿಲ್ 13ರ ದರಪಟ್ಟಿ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
AI Wife: ಇಹಲೋಕ ಬಿಟ್ಟು ಡಿಜಿಟಲ್ ಲೋಕಕ್ಕೆ ಬಾ, ನನ್ನ ಸೇರು: ಎಐ ಪತ್ನಿಯ ಪ್ರೇಮಪಾಶಕ್ಕೆ ಸಿಲುಕಿ ಅಮೆರಿಕ ವ್ಯಕ್ತಿ ಆತ್ಮಹತ್ಯೆ












Click it and Unblock the Notifications