ಕರ್ನಾಟಕ ಚುನಾವಣೆ; ಕೊಪ್ಪಳದ ಮತಗಟ್ಟೆ, ಒಟ್ಟು ಮತದಾರರ ಮಾಹಿತಿ

ಕೊಪ್ಪಳ, ಮಾರ್ಚ್ 30; ಕರ್ನಾಟಕ ವಿಧಾನಸಭೆ ಚುನಾವಣೆ 2023ರ ವೇಳಾಪಟ್ಟಿ ಪ್ರಕಟವಾಗಿದೆ. ರಾಜ್ಯದಲ್ಲಿ ತಕ್ಷಣದಿಂದಲೇ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ. ರಾಜ್ಯದ 224 ಕ್ಷೇತ್ರಗಳಿಗೆ ಮೇ 10ರ ಬುಧವಾರ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮೇ 13ರ ಶನಿವಾರ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

ಕೊಪ್ಪಳ ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಎಂ. ಸುಂದರೇಶ ಬಾಬು ಪತ್ರಿಕಾಗೋಷ್ಠಿ ನಡೆಸಿದರು. ಕೊಪ್ಪಳ ಜಿಲ್ಲೆಯಲ್ಲಿ 5 ವಿಧಾನಸಭಾ ಕ್ಷೇತ್ರಗಳಿವೆ. ಮಾರ್ಚ್‌ 29ರ ಬೆಳಗ್ಗೆ 11.30 ರಿಂದ ಅನ್ವಯವಾಗುವಂತೆ ಮಾದರಿ ನೀತಿ ಸಂಹಿತೆ ಜಾರಿಗೊಳಿಸಲಾಗಿದೆ. ಮಾದರಿ ನೀತಿ ಸಂಹಿತೆ ಅನುಷ್ಠಾನಗೊಳಿಸಲು ಜಿಲ್ಲಾಮಟ್ಟದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳನ್ನು ಮತ್ತು ಆಯಾ ವಿಧಾನಸಭಾ ಕ್ಷೇತ್ರಗಳಲ್ಲಿ ಆಯಾ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಿಗೆ ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ ಎಂದರು.

Karnataka assembly elections 2023 Koppal Voters And Polling Booth Details

ಕೊಪ್ಪಳ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 1,322 ಮತಗಟ್ಟೆಗಳಿವೆ. 5,62,376 ಪುರುಷರು ಮತ್ತು 5,66,341 ಮಹಿಳೆಯರು ಹಾಗೂ ಇತರೆ 47 ಸೇರಿ ಒಟ್ಟು 11,28,764 ಮತದಾರರಿದ್ದಾರೆ. 11,28,764 ಮತದಾರರ ಪೈಕಿ 26,867 ಯುವ ಮತದಾರರು, 14,030 ವಿಕಲಚೇತನ ಮತದಾರರು ಇದ್ದಾರೆ. 80 ವರ್ಷ ಮೇಲ್ಪಟ್ಟ ಮತದಾರರ ಸಂಖ್ಯೆ 18,301 ಇದೆ ಎಂದು ಮಾಹಿತಿ ನೀಡಿದರು.

ವಿಧಾನಸಭೆ ಚುನಾವಣೆಗೆ ಸಂಬಂಧಿತ ಎಲ್ಲಾ ರೀತಿಯ ದೂರುಗಳನ್ನು ಸಲ್ಲಿಸಲು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ 1950 ಟೋಲ್ ಫ್ರೀ ಸಂಖ್ಯೆಯೊಂದಿಗೆ ಸಹಾಯವಾಣಿ ಸ್ಥಾಪಿಸಲಾಗಿದೆ. ಸಾರ್ವಜನಿಕರು ಈ ದೂರವಾಣಿ ಸಂಖ್ಯೆಗೆ 24*7 ದೂರುಗಳನ್ನು ಸಲ್ಲಿಸಬಹುದಾಗಿದೆ. ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣಾಧಿಕಾರಿಗಳಿಗೆ, ಮಾದರಿ ನೀತಿ ಸಂಹಿತೆ ಕುರಿತು ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲ್ಲೂಕು ಪಂಚಾಯತಿ ಇವರಿಗೆ ದೂರುಗಳನ್ನು ಸಲ್ಲಿಸಬಹುದಾಗಿದೆ.

ಚುನಾವಣಾ ಆಯೋಗವು ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ನಿಗಾವಹಿಸಲು ಸಿ-ವಿಜಿಲ್ ಮೊಬೈಲ್ ಆಪ್ಲಿಕೇಶನ್ ಪರಿಚಯಿಸಿದ್ದು, ಮತದಾರರು ಮೊಬೈಲ್‌ನಲ್ಲಿ ಈ ಇದನ್ನು ಡೌನ್‌ಲೋಡ್ ಮಾಡಿಕೊಂಡು ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಕಂಡುಬಂದಲ್ಲಿ ಈ ಮೂಲಕ ದೂರುಗಳನ್ನು ದಾಖಲಿಸಬಹುದು.

Karnataka assembly elections 2023 Koppal Voters And Polling Booth Details

ಚೆಕ್ ಪೋಸ್ಟ್ ಸ್ಥಾಪನೆ: ಚುನಾವಣೆ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯಾದ್ಯಂತ 14 ಕಡೆಗಳಲ್ಲಿ ಚೆಕ್‌ಪೋಸ್ಟ್ ಸ್ಥಾಪಿಸಲಾಗಿದೆ. ಕುಷ್ಟಗಿ ತಾಲೂಕಿನಲ್ಲಿ ಬಾದಿಮನಾಳ ಕ್ರಾಸ್, ಕಿಲ್ಲಾರಹಟ್ಟಿ ಮತ್ತು ಕ್ಯಾದಿಗುಪ್ಪದಲ್ಲಿ, ಕನಕಗಿರಿ ತಾಲೂಕಿನಲ್ಲಿ ಚನ್ನಳ್ಳಿ ಕ್ರಾಸ್, ನವಲಿ ಮತ್ತು ಹುಲಿಹೈದರ್‌ಗಳಲ್ಲಿ ಚೆಕ್‌ಪೋಸ್ಟ್‌ ಇದೆ.

ಗಂಗಾವತಿ ತಾಲೂಕಿನಲ್ಲಿ ಕಡೆಬಾಗಿಲು ಬ್ರಿಡ್ಸ್, ಚಿಕ್ಕಜಂತಕಲ್ ಮತ್ತು ವಿದ್ಯಾನಗರಕ್ರಾಸ್‌ನಲ್ಲಿ, ಯಲಬುರ್ಗಾ ತಾಲೂಕಿನಲ್ಲಿ ಬನ್ನಿಕೊಪ್ಪ, ಬಂಡಿಕ್ರಾಸ್ ಮತ್ತು ಸಂಕನೂರ ಕ್ರಾಸ್‌ಗಳಲ್ಲಿ, ಕೊಪ್ಪಳ ತಾಲೂಕಿನಲ್ಲಿ ಮೂನ್‌ಲೈಟ್‌ಡಾಬಾ ಮತ್ತು ಬೆಳಗಟ್ಟಿನಲ್ಲಿ ಚೆಕ್‌ಪೋಸ್ಟ್ ಸ್ಥಾಪಿಸಲಾಗಿದೆ.

ಮತದಾನದ ಸಲುವಾಗಿ ಎಲ್ಲಾ ಮತದಾರರಿಗೆ ವೋಟರ್ ಸ್ಲಿಪ್‌ಗಳನ್ನು ಮತ್ತು ಮನೆಗಳಿಗೆ ವೋಟರ್ ಗೈಡ್‌ಗಳನ್ನು ವಿತರಿಸಲಾಗುತ್ತದೆ. ಕೊಪ್ಪಳ ಜಿಲ್ಲೆಯಲ್ಲಿ ಮತದಾನದ ದಿನದಂದು ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿ ಒಂದರಂತೆ ಮಹಿಳಾ ಸಿಬ್ಬಂದಿ ಮಾತ್ರ ಒಳಗೊಂಡ ಸಖಿ ಮತಗಟ್ಟೆಯನ್ನು, ವಿಕಲಚೇತನ ಸಿಬ್ಬಂದಿಯಿಂದ ಕಾರ್ಯನಿರ್ವಹಿಸುವ ವಿಕಲಚೇತನರ ಮತಗಟ್ಟೆಗಳನ್ನು ಮತ್ತು ಮಾದರಿ ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತದೆ.

ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಮಾತನಾಡಿ, "ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ಜಿಲ್ಲೆಯಲ್ಲಿ ಗುರುತಿಸಲಾದ ಸೂಕ್ಷ್ಮ ಮತ್ತು ಅತೀಸೂಕ್ಷ್ಮ ಮತಗಟ್ಟೆಗಳಲ್ಲಿ ಹಾಗೂ ಚೆಕ್‌ಪೋಸ್ಟಗಳಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸಿ ಸೂಕ್ತ ಬಂದೋಬಸ್ತ್ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ವ್ಯವಸ್ಥೆ ಮಾಡಲಾಗುತ್ತದೆ. ಚುನಾವಣಾ ಹಿನ್ನೆಲೆಯಲ್ಲಿ, ಅಕ್ರಮ ಚಟುವಟಿಕೆಗಳ ಮೇಲೆ ನಿಗಾ ವಹಿಸಲಾಗಿದೆ" ಎಂದರು.

ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳು; ಕೊಪ್ಪಳ ಜಿಲ್ಲೆಯಲ್ಲಿ ಕುಷ್ಟಗಿ, ಕನಕಗಿರಿ, ಗಂಗಾವತಿ, ಯಲಬುರ್ಗಾ, ಕೊಪ್ಪಳ ವಿಧಾನಸಭಾ ಕ್ಷೇತ್ರಗಳಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+