Yogi Adityanath: 'ಆಂಜನೇಯ ಹುಟ್ಟಿದ ನಾಡು, ಗಂಗಾವತಿ ಜನತೆಗೆ ನನ್ನ ನಮಸ್ಕಾರಗಳು': ಯೋಗಿ ಕನ್ನಡ ಭಾಷಣಕ್ಕೆ ಜನ ಫಿದಾ
ಕೊಪ್ಪಳ, ಏಪ್ರಿಲ್, 30: ವಿಧಾನಸಭಾ ಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಲೇ ಇದ್ದು, ಬಿಜೆಪಿಯ ರಾಷ್ಟ್ರೀಯ ನಾಯಕರ ದಂಡೇ ರಾಜ್ಯದ ಕಡಗೆ ಆಗಮಿಸುತ್ತಿದೆ. ಸರದಿಯಲ್ಲಿ ಬಂದು ರಾಜ್ಯ ನಾಯಕರ ಪರವಾಗಿ ಅಬ್ಬರದ ಪ್ರಚಾರ ನಡೆಸುವ ಮೂಲಕ ಮತದಾರನ್ನು ತಮ್ಮತ್ತ ಸೆಳೆಯಲು ಇನ್ನಿಲ್ಲದ ಕಸರತ್ತುಗಳನ್ನು ನಡೆಸುತ್ತಿದ್ದಾರೆ. ಅದೇ ರೀಯಲ್ಲಿ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಕೂಡ ಇಂದು ಕೊಪ್ಪಳ ಜಿಲ್ಲೆಯಲ್ಲಿ ಅಬ್ಬರದ ಪ್ರಚಾರವನ್ನು ಮಾಡಿದ್ದಾರೆ.
ಆಂಜನೇಯ ಹುಟ್ಟಿದ ನಾಡು ಇದು, ಗಂಗಾವತಿ ಜನತೆಗೆ ನನ್ನ ನಮಸ್ಕಾರಗಳು ಎಂದು ಹೇಳುವ ಮೂಲಕ ಯೋಗಿ ಕನ್ನಡದಲ್ಲೇ ಭಾಷಣ ಆಂಭಿಸಿದ್ದು, ಈ ಭಾಷಣ ಕೇಳಿದ ಗಂಗಾವತಿ ಜನ ಯೋಗಿ ಪರ ಜೈಘೋಷಗಳನ್ನು ಮೊಳಗಿಸಿದರು.

ಕಳೆದ ವಾರವಷ್ಟೇ ಜೆಡಿಎಸ್ ಭದ್ರಕೋಟೆ ಮಂಡ್ಯ ಜಿಲ್ಲೆಯಲ್ಲಿ ರಣಕಹಳೆ ಮೊಳಗಿಸಿದ್ದ ಯೋಗಿ ಆದಿತ್ಯನಾಥ್, ಇಂದು ಮತ್ತೆ ಕೊಪ್ಪಳ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ಪ್ರಚಾರ ಆರಂಭಿಸಿದ್ದಾರೆ. ಅಷ್ಟೇ ಅಲ್ಲದೆ ಕನ್ನಡದಲ್ಲಿ ಮಾತನಾಡುವ ಮೂಲಕ ಮತದಾರರನ್ನು ಸೆಳೆಯಲು ಮುಂದಾಗಿದ್ದಾರೆ.
ಕನ್ನಡದಲ್ಲೇ ಮಾತನಾಡಿದ ಯೋಗಿ
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಭಾನುವಾರ (ಏಪ್ರಿಲ್ 30) ಕೊಪ್ಪಳ ಜಿಲ್ಲೆಗೆ ಆಗಮಿಸಿದ್ದು, ಇಲ್ಲಿನ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರದ ರಣಕಹಳೆಯನ್ನೇ ಮೊಳಗಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿಗೆ ಬರುತ್ತಿದ್ದಂತೆಯೇ ಯೋಗಿ ಆದಿತ್ಯನಾಥ್ ಭರ್ಜರಿ ರೋಡ್ ಶೋ ನಡೆಸಿದದಾರೆ. ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಕನ್ನಡದಲ್ಲೇ ಮಾತನಾಡಿ ಜನರ ಗಮನ ಸೆಳೆದಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಭೇಟಿ ನೀಡಿದಾಗಲೆಲ್ಲಾ ಪ್ರತೀ ಕಾರ್ಯಕ್ರಮದಲ್ಲೂ ಇಲ್ಲಿನ ನತೆಗೆ ನನ್ನ ನಮಸ್ಕಾರಗಳು ಎಂದು ಕನ್ನಡದಲ್ಲೇ ಹೇಳುವ ಮೂಲಕ ಕನ್ನಡದಲ್ಲೇ ಭಾಷಣ ಆರಂಭಿಸಿ ಗಮನ ಸೆಳೆದಿದ್ದಾರೆ. ಅದೇ ಹಾದಿಯಲ್ಲಿ ಇದೀಗ ಯೋಗಿ ಆದಿತ್ಯನಾಥ್ ಅವರು ಕೂಡ ಕನ್ನಡದಲ್ಲಿ ಭಾಷಣ ಆರಂಭಿಸುವ ಮೂಲಕ ಜನರನ್ನು ಸೆಳೆಯಲು ಮುಂದಾಗಿದ್ದಾರೆ.
ಇನ್ನು ಇಂದು ಗಂಗಾವತಿಯಲ್ಲಿ ಶಾಸಕ ಪರಣ್ಣ ಮುನವಳ್ಳಿ ಪರ ಪ್ರಚಾರ ನಡೆಸಿದ ಯೋಗಿ ಆದಿತ್ಯನಾಥ್, ಆಂಜನೇಯ ನಾಡಿನ ಜನತೆಗೆ ನನ್ನ ನಮಸ್ಕಾರಗಳು ಎಂದು ಕನ್ನಡದಲ್ಲೇ ಹೇಳುವ ಮೂಲಕ ಭಾಷಣ ಆರಂಭಿಸಿದ್ದಾರೆ.
ಜೆಡಿಎಸ್ ಭದ್ರಕೋಟೆಯಲ್ಲಿ ಯೋಗಿ ಗುಡುಗು
ಮೋದಿಜಿ ಅವರ ಟೀಂ ಇಂಡಿಯದಲ್ಲಿ ಕರ್ನಾಟಕದ ಗರಿಷ್ಠ ಆಟಗಾರರು ಇರುವಂತೆ ನೋಡಿಕೊಳ್ಳಿ, ಇದಕ್ಕಾಗಿ ಇಲ್ಲಿನ ಅಭ್ಯರ್ಥಿಗಳನ್ನು ನೀವೆಲ್ಲರೂ ಗೆಲ್ಲಿಸಿ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸ್ಥಾಪಿಸಿ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಇತ್ತೀಚೆಗಷ್ಟೇ ಮಂಡ್ಯ ಜನತೆಗೆ ಮನವಿ ಮಾಡಿದ್ದರು.
ಈ ಕುರಿತು ಮಂಡ್ಯದಲ್ಲಿ ಬುಧವಾರ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ್ದ ಅವರು, ಆದಿಚುಂಚನಗಿರಿ ಮಠ ಇಲ್ಲಿದೆ. ಭೈರೇಶ್ವರ ಸ್ವಾಮಿ ಅಲ್ಲಿ ನೆಲೆಸಿದ್ದಾರೆ. ಕರ್ನಾಟಕ- ಉತ್ತರ ಪ್ರದೇಶದ ನಡುವಿನ ಸಂಬಂಧಗಳನ್ನು ಗಮನಿಸಿ ನನಗೆ ಸಂತಸವಾಗುತ್ತದೆ. ಪ್ರಧಾನಿ ಮೋದಿಜಿ ಅವರ ಏಕ್ ಭಾರತ್ ಶ್ರೇಷ್ಠ ಭಾರತ್ ಪರಿಕಲ್ಪನೆಯನ್ನು ಸಾಕಾರಗೊಳಿಸಲು ಬಿಜೆಪಿಗೆ ಮತ ಕೊಡಿ, ಬಿಜೆಪಿಯನ್ನೇ ಗೆಲ್ಲಿಸಿ ಎಂದು ಮನವಿ ಮಾಡಿದ್ದರು.
ಡಬಲ್ ಎಂಜಿನ್ ಸರಕಾರದಿಂದ ಸಮೃದ್ಧಿ, ಸುರಕ್ಷತೆ ಸಿಗುತ್ತದೆ. ಏಕ್ ಭಾರತ್, ಶ್ರೇಷ್ಠ ಭಾರತ್ ಪರಿಕಲ್ಪನೆಯನ್ನು ಜಾರಿ ಮಾಡಲು ಬಿಜೆಪಿಗೇ ಮತ ಕೊಡಿ. ಮೋದಿಜಿ ಟೀಂ ಇಂಡಿಯದ ಕ್ಯಾಪ್ಟನ್ ಆಗಿದ್ದಾರೆ. ಮೋದಿಜಿ ಅವರ ಟೀಂ ಇಂಡಿಯದಲ್ಲಿ ಕರ್ನಾಟಕದ ಗರಿಷ್ಠ ಆಟಗಾರರು ಇರುವಂತೆ ನೋಡಿಕೊಳ್ಳಿ. ಕಾಂಗ್ರೆಸ್ ಪಕ್ಷದ ಫೇಯಿಲ್ಡ್ ಎಂಜಿನ್ ದೂರವಿಡಿ. ಕರ್ನಾಟಕದಲ್ಲಿ ಬಿಜೆಪಿ ಸರಕಾರ ಮತ್ತೆ ಕೆಲಸ ಮಾಡುವಂತಾಗಲಿ ಎಂದು ತಿಳಿಸಿದ್ದರು.
ಮಂಡ್ಯವು ಕೃಷಿ, ಕಾರ್ಖಾನೆಗಳಿಗೆ ಪ್ರಖ್ಯಾತ. ಕರ್ನಾಟಕವು ವಿಕಾಸದ ಹಾದಿಯಲ್ಲಿ ಮುನ್ನಡೆಯಲು ಕರ್ನಾಟಕದಲ್ಲೂ ಡಬಲ್ ಎಂಜಿನ್ ಸರಕಾರವನ್ನು ಮತ್ತೆ ಸ್ಥಾಪಿಸಿ. ರಾಮಜನ್ಮಭೂಮಿ ಆಂದೋಲನದಲ್ಲಿ ನೀವೂ ಪಾಲ್ಗೊಂಡಿದ್ದೀರಿ. 2024ರ ಜನವರಿಯಲ್ಲಿ ರಾಮಮಂದಿರ ಪೂರ್ಣಗೊಂಡು ಉದ್ಘಾಟನೆ ಆಗಲಿದೆ. ಇದೊಂದು ಮಹತ್ವದ ದಿನವಾಗಲಿದೆ. ನೀವೆಲ್ಲರೂ ಅಲ್ಲಿಗೆ ಬನ್ನಿ ಎಂದು ಆಹ್ವಾನಿಸಿದ್ದರು.
ಬ್ರಿಟನ್ ದೇಶವನ್ನು ಹಿಂದಿಕ್ಕಿ ನಾವು ದೊಡ್ಡ ಆರ್ಥಿಕ ವ್ಯವಸ್ಥೆಯಾಗಿ ಹೊರಹೊಮ್ಮಿದ್ದೇವೆ. ನಮ್ಮ ದೇಶ ಮತ್ತು ನಮ್ಮ ಪ್ರಧಾನಿಯವರು ಜಗತ್ತಿನಲ್ಲಿ ವಿಶಿಷ್ಟ ಸ್ಥಾನ ಪಡೆದಿದ್ದಾರೆ. ಕರ್ನಾಟಕದ ಬೆಂಗಳೂರು ಐಟಿ ಕ್ಷೇತ್ರದಲ್ಲಿ ಪ್ರಮುಖ ಕೇಂದ್ರವಾಗಿದೆ ಎಂದು ಮೆಚ್ಚುಗೆ ಸೂಚಿಸಿದ ಅವರು, ನಮ್ಮ ಬಳಿ ಶಕ್ತಿ ಇದೆ. 2014ರಲ್ಲಿ ಮೋದಿಜಿ ಅವರಿಗೆ ನಾಯಕತ್ವ ಲಭಿಸಿತು. ಆ ಬಳಿಕ ಅಭಿವೃದ್ಧಿ ನಿರಂತರವಾಗಿತ್ತು. ಕಾಂಗ್ರೆಸ್ ಪಕ್ಷದ್ದು ಕೇವಲ ಶಿಲಾನ್ಯಾಸಗಳ ಪಂಚವಾರ್ಷಿಕ ಯೋಜನೆಯ ಸರಕಾರವಾಗಿತ್ತು. ಇದು ಕಾಂಗ್ರೆಸ್‍ನ ಅಸಲಿ ನೀತಿ ಎಂದು ಟೀಕಿಸಿದರು.












Click it and Unblock the Notifications