ಕೊಪ್ಪಳ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking; ಗವಿಸಿದ್ದೇಶ್ವರ ಮಠಕ್ಕೆ 10 ಕೋಟಿ ಅನುದಾನ ನೀಡಿದ ಸರ್ಕಾರ

|
Google Oneindia Kannada News

ಕೊಪ್ಪಳ, ಜೂನ್ 27; ಕರ್ನಾಟಕ ಸರ್ಕಾರ ಕೊಪ್ಪಳದ ಗವಿಸಿದ್ದೇಶ್ವರ ಮಠದ ವಿದ್ಯಾರ್ಥಿಗಳ ವಸತಿ ಮತ್ತು ಪ್ರಸಾದ ನಿಲಯ ಕಟ್ಟಡಕ್ಕೆ 10 ಕೋಟಿ ರೂ. ಅನುದಾನ ಘೋಷಣೆ ಮಾಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನುದಾನ ಬಿಡುಗಡೆ ಮಾಡಲು ಸೂಚನೆ ನೀಡಿದ್ದಾರೆ.

ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗವಿಸಿದ್ದೇಶ್ವರ ಮಠದ ಉಚಿತ ವಸತಿ ಮತ್ತು ಪ್ರಸಾದ ನಿಲಯ ಕಟ್ಟಡ ನಿರ್ಮಾಣಕ್ಕೆ 10 ಕೋಟಿ ರೂ. ಅನುದಾನ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ಕೊಟ್ಟಿದ್ದಾರೆ.

 'ಕೂ' ಅಪ್ಲಿಕೇಶನ್ ಪ್ರವೇಶಿಸಿದ ಶ್ರೀ ಸಿದ್ದಗಂಗಾ ಮಠ 'ಕೂ' ಅಪ್ಲಿಕೇಶನ್ ಪ್ರವೇಶಿಸಿದ ಶ್ರೀ ಸಿದ್ದಗಂಗಾ ಮಠ

ಮಂಗಳವಾರ ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ಅನಿಲ ಕುಮಾರ್ ಈ ಕುರಿತು ಆದೇಶ ಹೊರಡಿಸಿದ್ದಾರೆ. ಕೊಪ್ಪಳ ಸಂಸದ ಸಂಗಣ್ಣ ಕರಡಿ ಹಾಗೂ ಜಿಲ್ಲೆಯ ಶಾಸಕರು ಮಠಕ್ಕೆ ಅನುದಾನ ಒದಗಿಸಲು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಈ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಅನುದಾನ ಒದಗಿಸಲು ಸೂಚಿಸಿದ್ದಾರೆ.

ಕೋವಿಡ್‌; ಅನಾಥ ಮಕ್ಕಳಿಗೆ ಆಸರೆಯಾದ ಆದಿಚುಂಚನಗಿರಿ ಮಠ ಕೋವಿಡ್‌; ಅನಾಥ ಮಕ್ಕಳಿಗೆ ಆಸರೆಯಾದ ಆದಿಚುಂಚನಗಿರಿ ಮಠ

Karnataka govt sanctions Rs 10 crore for 5000-student hostel to be built by Gavisiddeshwara Temple in Koppal

ಸುಮಾರು 5 ಸಾವಿರ ವಿದ್ಯಾರ್ಥಿಗಳಿಗಾಗಿ ಮಠವು ಉಚಿತ ವಸತಿ ಮತ್ತು ಪ್ರಸಾದ ನಿಲಯವನ್ನು ನಿರ್ಮಿಸುತ್ತಿದೆ. ಹಲವಾರು ವರ್ಷಗಳಿಂದ ಶ್ರೀಮಠದಲ್ಲಿ ವಿದ್ಯಾರ್ಥಿಗಳಿಗೆ ದಾಸೋಹ ನೀಡಲಾಗುತ್ತಿದೆ. ಈಗ ಮಕ್ಕಳಿಗೆ ವ್ಯವಸ್ಥಿತವಾದ ಪ್ರಸಾದ ನಿಲಯ ನಿರ್ಮಾಣವಾಗುತ್ತಿದೆ.

ಕೊಪ್ಪಳ ಗವಿ ಸಿದ್ದೇಶ್ವರ ಜಾತ್ರೆ; 18 ಲಕ್ಷ ಮಿರ್ಚಿ ತಯಾರಿ!ಕೊಪ್ಪಳ ಗವಿ ಸಿದ್ದೇಶ್ವರ ಜಾತ್ರೆ; 18 ಲಕ್ಷ ಮಿರ್ಚಿ ತಯಾರಿ!

ಮುಖ್ಯಮಂತ್ರಿಗಳು 10 ಕೋಟಿ ರೂ. ಅನುದಾನ ನೀಡುವುದಕ್ಕೆ ಒಪ್ಪಿಗೆ ನೀಡಿರುವುದಕ್ಕೆ ಕೊಪ್ಪಳ ಗವಿಮಠದ ಭಕ್ತರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕಲಬುರಗಿ ಸಂಸದ ಡಾ. ಉಮೇಶ್ ಜಾಧವ್ ಟ್ವೀಟ್ ಮಾಡಿ, 'ಶ್ರೀ ಗವಿಸಿದ್ದೇಶ್ವರ ಮಠದ 5000 ವಿದ್ಯಾರ್ಥಿಗಳು ಉಚಿತ ವಸತಿ ಮತ್ತು ಪ್ರಸಾದ ನಿಲಯ ಕಟ್ಟಡಕ್ಕೆ ಸರ್ಕಾರದಿಂದ 10 ಕೋಟಿ ರೂಪಾಯಿ ಮಂಜೂರು ಮಾಡಿ ಬಿಡುಗಡೆ ಮಾಡಿದ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರಿಗೆ ತುಂಬು ಹೃದಯದ ಧನ್ಯವಾದಗಳು' ಎಂದು ಹೇಳಿದ್ದಾರೆ.

English summary
Karnataka government announced Rs 10 crore fund for Koppala Gavi Siddeshwara mutt for constriction of hostel.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X