ಕೊಪ್ಪಳ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕರ್ನಾಟಕ ಪೊಲೀಸ್‌ ಇಲಾಖೆಯ ಪ್ರತಿಷ್ಠೆ ಹೆಚ್ಚಿಸಿ: ಪರಮೇಶ್ವರ್‌ ಸಲಹೆ

By Nayana
|
Google Oneindia Kannada News

ಕೊಪ್ಪಳ, ಜೂನ್‌ 27: ದೇಶದಲ್ಲಿಯೇ ಕರ್ನಾಟಕದ ಪೊಲೀಸ್‌ ಇಲಾಖೆ ಮಾದರಿ ಇಲಾಖೆ ಎಂಬ ಹೆಗ್ಗಳಿಗೆ ಪಾತ್ರವಾಗಿದೆ. ಈ ಗೌರವವನ್ನು ಕಾಪಾಡಿಕೊಂಡು ಹೋಗುವ ಜವಾಬ್ದಾರಿ ನಿಮ್ಮ ಮೇಲಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್‌ ಹೇಳಿದರು.

ಬುಧವಾರ ಕೊಪ್ಪಳದ ಮುನಿರಾಬಾದ್‌ ಕೆಎಸ್‌ಆರ್‌ಪಿ ತರಬೇತಿ ಶಾಲೆಯಲ್ಲಿ ನಡೆದ ನಿರ್ಗಮನದ ಪಥಸಂಚಲನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಶಿಸ್ತಿನಿಂದ, ಜವಾಬ್ದಾರಿಯುತವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಅಧಿಕಾರಿಗಳು ನಮ್ಮಲ್ಲಿದ್ದಾರೆ.

ಬಜೆಟ್‌ ಬಗ್ಗೆ ಸಿದ್ದರಾಮಯ್ಯಗೆ ಸ್ವಂತ ಅಭಿಪ್ರಾಯ ಇರಬಹುದು: ಪರಮೇಶ್ವರ್ಬಜೆಟ್‌ ಬಗ್ಗೆ ಸಿದ್ದರಾಮಯ್ಯಗೆ ಸ್ವಂತ ಅಭಿಪ್ರಾಯ ಇರಬಹುದು: ಪರಮೇಶ್ವರ್

ಕಳೆದ ಒಂಬತ್ತು ತಿಂಗಳಿನಿಂದ ತರಬೇತಿ ಪಡೆದುಕೊಂಡು ಕಾನ್ಸ್‌ಟೇಬಲ್‌ಗಳಾಗಿ ಸೇವೆ ಸಲ್ಲಿಸಲು ಬರುತ್ತಿರುವ 305 ಪ್ರಶಿಕ್ಷಣಾರ್ಥಿಗಳು ಸಹ ಉತ್ತಮ ರೀತಿಯಲ್ಲಿ ಸೇವೆ ಸಲ್ಲಿಸಬೇಕು ಎಂದು ಕಿವಿಮಾತು ಹೇಳಿದರು.

Karnataka police should be efficient as always: DCM

ಡಾ.ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನ ಕೊಟ್ಟಾಗ ಇಡೀ ವಿಶ್ವದಲ್ಲೇ ಶ್ರೇಷ್ಠ ಸಂವಿಧಾನವಾಗಲಿದೆ ಎಂದು ಯಾರೂ ಊಹಿಸಿರಲಿಲ್ಲ. ಇದರಡಿ ಎಲ್ಲರಿಗೂ ಸಮಾನ ಹಕ್ಕು ನೀಡುವ ಕಾನೂನನ್ನು ಅವರು ನೀಡಿದ್ದಾರೆ. ನಮ್ಮ ದೇಶದಲ್ಲಿ ಸಣ್ಣಸಣ್ಣ ಭಿನ್ನಾಭಿಪ್ರಾಯ, ಮೇಲುಕೀಳು ಎಂಬ ಭಾವನೆ ಇರಬಹುದು.

ಆದರೆ, ದೇಶ ಎಂದು ಬಂದಾಗ ಎಲ್ಲರೂ ಒಟ್ಟಾಗಿ ನಿಲ್ಲುವುದರಿಂದಲೇ ನಮ್ಮ ಪ್ರಜಾಪ್ರಭುತ್ವ ವಿಶ್ವದಲ್ಲೇ ಯಶಸ್ವಿಯಾಗಿದೆ. ಇತರೆ ರಾಷ್ಟ್ರಗಳಲ್ಲಿ ಸರಕಾರ ಬದಲಾಗುವ ಸಂದರ್ಭದಲ್ಲಿ ರಕ್ತಪಾತವೇ ಆಗುತ್ತದೆ. ಆದರೆ, ಭಾರತದಲ್ಲಿ ಚುನಾವಣೆ ನಡೆಯುವ ಮೂಲಕ ಶಾಂತಿಯುತವಾಗಿ ಹೊಸ ಸರಕಾರ ರಚನೆಯಾಗುತ್ತದೆ. ಹೀಗಾಗಿ ನಮ್ಮದು ಯಶಸ್ವಿ ಪ್ರಶಜಾಪ್ರಭುತ್ವ ಎಂದು ತಿಳಿಸಿದರು.

ಇತ್ತೀಚಿನ ದಿನಗಳಲ್ಲಿ ತಂತ್ರಜ್ಞಾನ ಹೆಚ್ಚಿದಂತೆ ಸೈಬರ್ ಕ್ರೈಂನಂತಹ ಅಪರಾಧಗಳು ಏರಿಕೆಯಾಗುತ್ತಿವೆ. ಈ ಅನಾಹುತ ತಡೆಯಲು ನಿಮಗೆ ಅಡಿಪಾಯ ಹಾಕಿಕೊಟ್ಟಿದ್ದು, ಸದ್ಬಳಕೆ ಮಾಡಿಕೊಳ್ಳುವಂತೆ ಸಲಹೆ ನೀಡಿದರು. ಪೊಲೀಸರೆಂದರೆ ಜನರಲ್ಲಿ ಭಯದ ವಾತಾವರಣವಿದೆ. ಇದನ್ನು ಜನರ ಮನಸ್ಸಿನಿಂದ ಹೋಗುವ ರೀತಿಯಲ್ಲಿ ಪೊಲೀಸರು ಜನಸ್ನೇಹಿಗಳಂತೆ ಕೆಲಸ ಮಾಡಬೇಕು ಎಂದರು.

ಮುನಿರಾಬಾದ್ ಕೆಎಸ್ಆರ್‌ಪಿ ತರಬೇತಿ ಶಾಲೆಯಲ್ಲಿ ಮೂಲಸೌಕರ್ಯದ ಕೊರತೆ ಇರುವುದು ನನ್ನ ಗಮನಕ್ಕೆ ಬಂದಿದೆ. ಇಲ್ಲಿ ಕ್ವಾಟ್ರಸ್ ನಿರ್ಮಾಣ ಕೆಲಸ ನಡೆಯುತ್ತಿದೆ. ಹೆಚ್ಚಿನ ಕಟ್ಟಡಗಳ ಅವಶ್ಯಕತೆ ಕೂಡ ಇದೆ. ಈ ಎಲ್ಲ ಬೇಡಿಕೆಯನ್ನು ಈಡೇರಿಸುವ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ನಿದೇರ್ಶಕ ಭಾಸ್ಕರ್ ರಾವ್, ಶಾಸಕ ರಾಘವೇಂದ್ರ ಹಿತ್ನಾಳ್, ತರಬೇತಿ ಶಾಲೆ ಮುಖ್ಯಸ್ಥ ರಾಮಕೃಷ್ಣ ಹಾಗು ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.

English summary
Karnataka police has a good will in the country for its efficiency and investigation and it should remain as always with its impression, said deputy chief minister Dr. G. Parameshwar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X