• search
  • Live TV
ಕೊಪ್ಪಳ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೊಪ್ಪಳ; ಕ್ವಾರಂಟೈನ್‌ ಇಲ್ಲ, ಟೆಂಟ್‌ಗಳಲ್ಲಿ ಕಾರ್ಮಿಕರ ವಾಸ

|

ಕೊಪ್ಪಳ, ಮೇ 14 : ಕೊರೊನಾ ಹರಡುತ್ತಿರುವ ಸಂದರ್ಭದಲ್ಲಿ ಒಂದು ಜಿಲ್ಲೆಯಿಂದ ಬೇರೆ ಜಿಲ್ಲೆಗೆ ಹೋದರೆ ಕ್ವಾರಂಟೈನ್ ಮಾಡಲಾಗುತ್ತದೆ. ಆದರೆ, ಕೊಪ್ಪಳದಲ್ಲಿ ವಲಸೆ ಕಾರ್ಮಿಕರು ಟೆಂಟ್‌ಗಳಲ್ಲಿ ವಾಸ ಮಾಡುತ್ತಿದ್ದಾರೆ. ಜಿಲ್ಲಾಡಳಿತ ಕ್ವಾರಂಟೈನ್ ನಿಯಮವನ್ನು ಪಾಲನೆ ಮಾಡಿಲ್ಲ ಎಂದು ಆರೋಪಿಸಲಾಗುತ್ತಿದೆ.

ಜಾಗತಿಕ ವ್ಯಾಕ್ಸಿನ್ ವಾರ್: ಭಾರತವೇ ಯುದ್ಧ ಕೇಂದ್ರ..!

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ವಲಸೆ ಕಾರ್ಮಿಕರು ಜಮೀನಿನಲ್ಲಿ ಟೆಂಟ್‌ಗಳನ್ನು ಹಾಕಿಕೊಂಡು ವಾಸ ಮಾಡುತ್ತಿದ್ದಾರೆ. ಕೂಲಿ ಆರಸಿ ಹೋಗಿದ್ದ ಈ ಕಾರ್ಮಿಕರು ತಮ್ಮ ಗ್ರಾಮಕ್ಕೆ ವಾಪಸ್ ಆಗಿದ್ದಾರೆ. ಆದರೆ, ಗ್ರಾಮಸ್ಥರು ಅವರನ್ನು ಗ್ರಾಮದೊಳಗೆ ಬಿಟ್ಟುಕೊಂಡಿಲ್ಲ.

ವಾಟ್ಸಪ್, ಫೇಸ್ ಬುಕ್ ಮೂಲಕ ಮಾವು ಮಾರಿ ಮಾದರಿಯಾದ ರೈತ!

ತಮಿಳುನಾಡು, ಬೆಂಗಳೂರು ಸೇರಿದಂತೆ ವಿವಿಧ ನಗರಗಳಿಗೆ ಹೋಗಿದ್ದ ಗ್ರಾಮದ 150 ಜನರು ಈಗ ವಾಪಸ್ ಆಗಿದ್ದಾರೆ. ಆದರೆ, ಇವರಿಗೆ ಕೊರೊನಾ ಸೋಂಕು ಇರಬಹುದು, ಇದರಿಂದ ಗ್ರಾಮಕ್ಕೆ ತೊಂದರೆ ಆಗಲಿದೆ ಎಂದು ಗ್ರಾಮಸ್ಥರು ಅವರನ್ನು ಗ್ರಾಮದೊಳಗೆ ಬಿಟ್ಟುಕೊಂಡಿಲ್ಲ. ಆದ್ದರಿಂದ, ಜಮೀನಿನಲ್ಲಿ ವಾಸ ಮಾಡುತ್ತಿದ್ದಾರೆ.

ದೆಹಲಿಗೂ ಪಪ್ಪಾಯ ಕಳಿಸಿ ಮಾದರಿಯಾದ ಕೊಪ್ಪಳದ ರೈತ

ಎಲ್ಲಾ ಕಾರ್ಮಿಕರನ್ನು ಸೂಕ್ತ ಜಾಗದಲ್ಲಿ ಕ್ವಾರಂಟೈನ್‌ ಮಾಡಿ, ಗ್ರಾಮದೊಳಗೆ ನಾವು ಈಗ ಬಿಟ್ಟುಕೊಳ್ಳುವುದಿಲ್ಲ ಎಂದು ಗ್ರಾಮಸ್ಥರು ಅಧಿಕಾರಿಗಳಿಗೆ ಹೇಳಿದ್ದಾರೆ. ಆದರೆ, ಅಧಿಕಾರಿಗಳು ಕ್ವಾರಂಟೈನ್ ಮಾಡಲು ಇನ್ನೂ ತೀರ್ಮಾನ ಮಾಡಿಲ್ಲ.

15 ಎಕರೆ ತೋಟದಲ್ಲಿ ಕೊಳೆಯುತ್ತಿದೆ ಮಲ್ಲಿಗೆ, ಗುಲಾಬಿ, ಪಪ್ಪಾಯ

ಅತ್ತ ನಗರ ಬಿಟ್ಟು ಗ್ರಾಮಕ್ಕೆ ಬಂದ ಜನರು ಗ್ರಾಮದೊಳಗೆ ಪ್ರವೇಶ ಸಿಗದ ಕಾರಣ ಸಿದ್ದಾಪುರ ಗ್ರಾಮದ ಹೊರವಲಯದಲ್ಲಿ ಬೀಡು ಬಿಟ್ಟಿದ್ದಾರೆ. ಈ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಆಗಿದೆಯೇ?, ಕ್ವಾರಂಟೈನ್ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆಯೇ? ಎಂಬ ಪ್ರಶ್ನೆಗಳಿಗೆ ಅಧಿಕಾರಿಗಳ ಬಳಿ ಉತ್ತರವೇ ಇಲ್ಲ.

English summary
Quarantine rules sparked controversy after Karnataka's Koppal district administration fail to quarantine migrant workers who living in the shed in field.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X