ಕೊಪ್ಪಳ; ಮೇ 12ರಿಂದ ಹುಲಿಗೆಮ್ಮ ದೇವಿ ಜಾತ್ರೆ, ಭಕ್ತರಿಗೆ ಸೂಚನೆಗಳು

ಕಲಬುರಗಿ, ಮೇ 11; ಕೊಪ್ಪಳದ ಶ್ರೀ ಹುಲಿಗೆಮ್ಮ ದೇವಿ ದೇವಾಲಯದ 2023ರ ಜಾತ್ರಾ ಮಹೋತ್ಸವ ಮೇ 12 ರಿಂದ 16ರ ತನಕ ನಡೆಯಲಿದೆ. ಜಾತ್ರೆಗೆ ವಿವಿಧ ಕಡೆಯಿಂದ ಆಗಮಿಸುವ ಭಕ್ತರಿಗಾಗಿ ಹೆಚ್ಚುವರಿ ಬಸ್, ರೈಲು ಸೇರಿದಂತೆ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿದೆ. ಭಕ್ತರ ಅನುಕೂಲಕ್ಕಾಗಿ ಮೂಲ ಸೌಕರ್ಯ ಒದಗಿಸುವಂತೆ ಜಿಲ್ಲಾಡಳಿತ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ಶ್ರೀ ಹುಲಿಗೆಮ್ಮ ದೇವಿ ಜಾತ್ರೆ 2023ರ ಅಂಗವಾಗಿ ಕೊಪ್ಪಳ ಜಿಲ್ಲಾಧಿಕಾರಿ ಎಂ. ಸುಂದರೇಶ ಬಾಬು ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆ, ದೇವಾಲಯದ ಆಡಳಿತಾಧಿಕಾರಿ, ಕಾರ್ಯನಿರ್ವಹಣಾಧಿಕಾರಿಗಳು ಉಪಸ್ಥಿತರಿದ್ದರು.

Koppal Huligemma Temple Jatre 2023 Preparations

ಎಂ. ಸುಂದರೇಶ ಬಾಬು ಮಾತನಾಡಿ, ಮೇ 12ರಿಂದ 16ರ ತನಕ ಶ್ರೀ ಹುಲಿಗೆಮ್ಮ ದೇವಿ ದೇವಾಲಯದ ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ದೇವಾಲಯದ ಆವರಣದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು ಹಾಗೂ ಹುಲಿಗಿ ಗ್ರಾಮದ ರಸ್ತೆ ಸೇರಿದಂತೆ ಪ್ರಮುಖ ಸ್ಥಳಗಳ ಸ್ವಚ್ಛತೆಗೂ ಸಹ ಗ್ರಾಮ ಪಂಚಾಯಿತಿ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚನೆ ನೀಡಿದರು.

ಜಾತ್ರೆಗೆ ಆಗಮಿಸಲಿರುವ ಭಕ್ತರಿಗೆ ಸಮರ್ಪಕವಾಗಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ದೇವಾಲಯದ ಟ್ಯಾಂಕರ್‌ಗಳ ಜೊತೆಗೆ ಬಾಡಿಗೆ ರೂಪದಲ್ಲಿ ಟ್ಯಾಂಕರ್‌ಗಳನ್ನು ಪಡೆದು ಜನರಿಗೆ ಯಾವುದೇ ರೀತಿಯ ಕುಡಿಯುವ ನೀರಿನ ಸಮಸ್ಯೆಯಾಗದಂತೆ ದೇವಾಲಯದ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಹುಲಿಗಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಕೆಲಸ ಮಾಡಬೇಕು ಎಂದು ನಿರ್ದೇಶಿಸಿದರು.

Koppal Huligemma Temple Jatre 2023 Preparations

ವಿದ್ಯುತ್ ಮತ್ತು ಸಾರಿಗೆ ವ್ಯವಸ್ಥೆ; ಜಾತ್ರಾ ಸಮಯದಲ್ಲಿ ಹೆಚ್ಚುವರಿ ವಿದ್ಯುತ್ ಸರಬರಾಜು ಮಾಡಲು ಅನುಕೂಲವಾಗುವಂತೆ ಒಂದು ವಿಶೇಷ ತಂಡ ರಚನೆ ಮಾಡಬೇಕು. 2 ರಿಂದ 3 ಟಿಸಿಗಳನ್ನು ಕಾಯ್ದಿರಿಸಿಕೊಳ್ಳಬೇಕು. ನೀರಿನ ಸರಬರಾಜಿಗೆ ಹಾಗೂ ಬೆಳಕಿನ ವ್ಯವಸ್ಥೆಗೆ ಅಡಚಣೆಯಾಗದಂತೆ ನಿರಂತರ ವಿದ್ಯುತ್ ಸರಬರಾಜು ಮಾಡಬೇಕು ಎಂದು ಜೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ

ಭಕ್ತಾಧಿಗಳ ಆರೋಗ್ಯದ ಹಿತದೃಷ್ಠಿಯಿಂದ ಜಾತ್ರೆ ಸಮಯದಲ್ಲಿ ಔಷಧಿಗಳೊಂದಿಗೆ ಎರಡು ತಾತ್ಕಾಲಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಬೇಕು. ಎರಡು ಆಂಬುಲೆನ್ಸ್‌ಗಳನ್ನು ಕಾಯ್ದಿರಿಸಲು ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಹುಲಿಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ಜಾತ್ರೆಗೆ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಕೆ. ಕೆ. ಆರ್. ಟಿ. ಸಿ ಹೆಚ್ಚಿನ ಸಂಖ್ಯೆಯ ಬಸ್ ವ್ಯವಸ್ಥೆ ಮಾಡಲಿದೆ. ತಡೆ ರಹಿತ ರೈಲುಗಳನ್ನು ಮುನಿರಾಬಾದ್ ರೈಲು ನಿಲ್ದಾಣದಲ್ಲಿ ನಿಲುಗಡೆ ಮಾಡಲು ಮತ್ತು ಗೂಡ್ಸ್ ರೈಲುಗಳ ಸಂಚಾರಕ್ಕೆ ತಾತ್ಕಾಲಿಕ ತಡೆ ಕುರಿತು ಹುಬ್ಬಳ್ಳಿ ನೈಋತ್ಯ ರೈಲ್ವೆಗೆ ಪತ್ರ ಬರೆಯಲಾಗಿದೆ.

ಪ್ರಾಣಿ ಬಲಿ ನಿಷೇಧ; ಕ್ಷೇತ್ರದಲ್ಲಿ ಪ್ರಾಣಿ ಬಲಿ ನಿಷೇಧಿಸಲಾಗಿದ್ದು, ಜಾತ್ರಾ ಅವಧಿಯಲ್ಲಿ ಯಾವುದೇ ರೀತಿಯ ಪ್ರಾಣಿಬಲಿಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.ಕೊಪ್ಪಳ ಪೊಲೀಸ್ ಉಪ ಅಧೀಕ್ಷಕರು, ತಹಶೀಲ್ದಾರರು, ಆರಕ್ಷಕ ಉಪ ನಿರೀಕ್ಷಕರು, ಪಶು ಸಂಗೋಪನೆ ಇಲಾಖೆ ಮತ್ತು ದೇವಾಲಯದ ಅಧಿಕಾರಿಗಳ ತಂಡವು ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಲಾಗಿದೆ. ಜಾತ್ರೆಯ ಸಮಯದಲ್ಲಿ ಹುಲಿಗಿ ಗ್ರಾಮದಲ್ಲಿ ಮದ್ಯಪಾನ, ಮದ್ಯ ಮಾರಾಟವನ್ನು ಸಂಪೂರ್ಣ ನಿಷೇಧಿಸಲಾಗಿದೆ.

ದೇವಾಲಯದ ಮಹಾರಥಕ್ಕೆ ಲೋಕೋಪಯೋಗಿ ಇಲಾಖೆಯಿಂದ ಅರ್ಹತಾ ಪ್ರಮಾಣ ಪತ್ರ ಪಡೆಯಬೇಕಿದೆ. ಈ ನಿಟ್ಟಿನಲ್ಲಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಂಡಿದ್ದಾರೆ. ಜಾತ್ರಾ ಸಮಯದಲ್ಲಿ ಅಗ್ನಿಶಾಮಕ ವಾಹನವನ್ನು ಕಾಯ್ದಿರಿಸಬೇಕು ಎಂದು ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಾತ್ರಾಗೆ ಆಗಮಿಸುವ ಭಕ್ತರ ವಾಹನಗಳ ನಿಲುಗಡೆಗಾಗಿ ದ್ವಿಚಕ್ರ, ನಾಲ್ಕು ಚಕ್ರ ಹಾಗೂ ಭಾರೀ ವಾಹನಗಳ ನಿಲುಗಡೆಗಾಗಿ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆಗಾಗಿ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ಕೊಡಲಾಗಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರು ತೆರಳಿದ್ದು, ಲಭ್ಯವಿರುವ ಪೊಲೀಸ್ ಸಿಬ್ಬಂದಿಗಳೊಂದಿಗೆ ಗೃಹರಕ್ಷಕ ದಳದವರನ್ನು ನೇಮಿಸಿ ಜಾತ್ರೆಗೆ ಭದ್ರತೆ ಒದಗಿಸಲು ನಿರ್ದೇಶನ ನೀಡಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+