ಕೊಪ್ಪಳದಲ್ಲಿ ಜೆಡಿಎಸ್ ಪಕ್ಷಕ್ಕೆ ಭಾರೀ ಹಿನ್ನಡೆ!

ಕೊಪ್ಪಳ, ಜುಲೈ 14; ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ಸಮಯದಲ್ಲಿ ಜೆಡಿಎಸ್ ಪಕ್ಷಕ್ಕೆ ಭಾರೀ ಹಿನ್ನಡೆಯಾಗಿದೆ. ರಾಜ್ಯ ಉಪಾಧ್ಯಕ್ಷರು ಪಕ್ಷ ತೊರೆದು ಬಿಜೆಪಿ ಸೇರಿದ್ದಾರೆ.

ಜೆಡಿಎಸ್ ರಾಜ್ಯ ಉಪಾಧ್ಯಕ್ಷ, ಮಾಜಿ ಜಿಲ್ಲಾಧ್ಯಕ್ಷ ಪ್ರದೀಪಗೌಡ ಮಾಲಿ ಪಾಟೀಲ ಬಿಜೆಪಿ ಸೇರಿದರು. ಕೃಷಿ, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಬಿ. ಸಿ. ಪಾಟೀಲ್ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಗೊಂಡಿದ್ದಾರೆ.

ಜುಲೈ 9ರಂದು ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ಪ್ರದೀಪಗೌಡ ಮಾಲಿ ಪಾಟೀಲ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಬೆಂಬಲಿಗರ ಜೊತೆ ಅವರು ಈಗ ಬಿಜೆಪಿ ಸೇರಿದ್ದಾರೆ.

Koppal JDS Leader Pradeep Gowda Mali Patil Joins BJP

"ಎಚ್. ಡಿ. ಕುಮಾರಸ್ವಾಮಿ ಬಕೆಟ್ ಹಿಡಿಯುವವರ, ಕಿವಿ ಕಡಿಯುವವರ ಮಾತು ಕೇಳುತ್ತಾರೆ. ಪಕ್ಷದ ನಿಜವಾದ ಕಾರ್ಯಕರ್ತರಿಗೆ ಜೆಡಿಎಸ್ ಪಕ್ಷದಲ್ಲಿ ಬೆಲೆ ಇಲ್ಲ" ಎಂದು ಪ್ರದೀಪಗೌಡ ಮಾಲಿ ಪಾಟೀಲ ವಾಗ್ದಾಳಿ ನಡೆಸಿದ್ದರು.

"10 ವರ್ಷದಿಂದ ನಾನು ಜೆಡಿಎಸ್ ಪಕ್ಷದಲ್ಲಿದ್ದೇನೆ. 2 ಬಾರಿ ಕೊಪ್ಪಳ ವಿಧಾನಸಭೆ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದೇನೆ. ಆಗಲೂ ನನಗೆ ಪಕ್ಷ ಬೆಂಬಲ ನೀಡಿಲ್ಲ. ಶೀಘ್ರದಲ್ಲಿಯೇ ಕೊಪ್ಪಳ ಜಿಲ್ಲೆಯ ಜೆಡಿಎಸ್‌ನ ಹಲವು ಪದಾಧಿಕಾರಿಗಳು ರಾಜೀನಾಮೆ ನೀಡಲಿದ್ದಾರೆ" ಎಂದು ಹೇಳಿದ್ದರು.

"ಜೆಡಿಎಸ್ ಪಕ್ಷದಲ್ಲಿ ಕಾರ್ಯಕರ್ತರನ್ನು ಕಡೆಗಣಿಸಲಾಗುತ್ತಿದೆ. ಅದಕ್ಕಾಗಿ ಉತ್ತರ ಕರ್ನಾಟಕದಲ್ಲಿ ಪಕ್ಷ ಬೆಳೆಯುತ್ತಿಲ್ಲ. ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ" ಎಂದು ತಿಳಿಸಿದ್ದರು.

ಪ್ರದೀಪಗೌಡ ಮಾಲಿ ಪಾಟೀಲ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದೇನೆ ಎಂದು ಹೇಳಿದ್ದಾರೆ. ತಮ್ಮ ನೂರಾರು ಬೆಂಬಲಿಗರ ಜೊತೆ ಪ್ರದೀಪಗೌಡ ಮಾಲಿ ಪಾಟೀಲ ಬಿಜೆಪಿ ಸೇರಿದ್ದು, ಜೆಡಿಎಸ್ ಪಕ್ಷಕ್ಕೆ ಹಿನ್ನಡೆಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+