ಕೊಪ್ಪಳ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊಪ್ಪಳದಲ್ಲಿ ಜೆಡಿಎಸ್ ಪಕ್ಷಕ್ಕೆ ಭಾರೀ ಹಿನ್ನಡೆ!

|
Google Oneindia Kannada News

ಕೊಪ್ಪಳ, ಜುಲೈ 14; ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ಸಮಯದಲ್ಲಿ ಜೆಡಿಎಸ್ ಪಕ್ಷಕ್ಕೆ ಭಾರೀ ಹಿನ್ನಡೆಯಾಗಿದೆ. ರಾಜ್ಯ ಉಪಾಧ್ಯಕ್ಷರು ಪಕ್ಷ ತೊರೆದು ಬಿಜೆಪಿ ಸೇರಿದ್ದಾರೆ.

ಜೆಡಿಎಸ್ ರಾಜ್ಯ ಉಪಾಧ್ಯಕ್ಷ, ಮಾಜಿ ಜಿಲ್ಲಾಧ್ಯಕ್ಷ ಪ್ರದೀಪಗೌಡ ಮಾಲಿ ಪಾಟೀಲ ಬಿಜೆಪಿ ಸೇರಿದರು. ಕೃಷಿ, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಬಿ. ಸಿ. ಪಾಟೀಲ್ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಗೊಂಡಿದ್ದಾರೆ.

ಶಿವಮೊಗ್ಗ ಬಿಜೆಪಿಯಲ್ಲಿಯೇ ಮೀಸಲಾತಿ ಪಟ್ಟಿ ವಿರುದ್ಧ ಅಸಮಾಧಾನಶಿವಮೊಗ್ಗ ಬಿಜೆಪಿಯಲ್ಲಿಯೇ ಮೀಸಲಾತಿ ಪಟ್ಟಿ ವಿರುದ್ಧ ಅಸಮಾಧಾನ

ಜುಲೈ 9ರಂದು ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ಪ್ರದೀಪಗೌಡ ಮಾಲಿ ಪಾಟೀಲ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಬೆಂಬಲಿಗರ ಜೊತೆ ಅವರು ಈಗ ಬಿಜೆಪಿ ಸೇರಿದ್ದಾರೆ.

 ಕೊಪ್ಪಳ; ಅಂಜನಾದ್ರಿ ಬೆಟ್ಟದ ಆದಾಯದಲ್ಲಿ ಭಾರೀ ಏರಿಕೆ ಕೊಪ್ಪಳ; ಅಂಜನಾದ್ರಿ ಬೆಟ್ಟದ ಆದಾಯದಲ್ಲಿ ಭಾರೀ ಏರಿಕೆ

Koppal JDS Leader Pradeep Gowda Mali Patil Joins BJP

"ಎಚ್. ಡಿ. ಕುಮಾರಸ್ವಾಮಿ ಬಕೆಟ್ ಹಿಡಿಯುವವರ, ಕಿವಿ ಕಡಿಯುವವರ ಮಾತು ಕೇಳುತ್ತಾರೆ. ಪಕ್ಷದ ನಿಜವಾದ ಕಾರ್ಯಕರ್ತರಿಗೆ ಜೆಡಿಎಸ್ ಪಕ್ಷದಲ್ಲಿ ಬೆಲೆ ಇಲ್ಲ" ಎಂದು ಪ್ರದೀಪಗೌಡ ಮಾಲಿ ಪಾಟೀಲ ವಾಗ್ದಾಳಿ ನಡೆಸಿದ್ದರು.

 ಜೆಡಿಎಸ್ ತೊರೆದು, ಪಕ್ಷೇತರವಾಗಿ ಸ್ಪರ್ಧಿಸುವ ಸುಳಿವು ಕೊಟ್ಟ ಜಿ.ಟಿ. ದೇವೇಗೌಡ ಜೆಡಿಎಸ್ ತೊರೆದು, ಪಕ್ಷೇತರವಾಗಿ ಸ್ಪರ್ಧಿಸುವ ಸುಳಿವು ಕೊಟ್ಟ ಜಿ.ಟಿ. ದೇವೇಗೌಡ

"10 ವರ್ಷದಿಂದ ನಾನು ಜೆಡಿಎಸ್ ಪಕ್ಷದಲ್ಲಿದ್ದೇನೆ. 2 ಬಾರಿ ಕೊಪ್ಪಳ ವಿಧಾನಸಭೆ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದೇನೆ. ಆಗಲೂ ನನಗೆ ಪಕ್ಷ ಬೆಂಬಲ ನೀಡಿಲ್ಲ. ಶೀಘ್ರದಲ್ಲಿಯೇ ಕೊಪ್ಪಳ ಜಿಲ್ಲೆಯ ಜೆಡಿಎಸ್‌ನ ಹಲವು ಪದಾಧಿಕಾರಿಗಳು ರಾಜೀನಾಮೆ ನೀಡಲಿದ್ದಾರೆ" ಎಂದು ಹೇಳಿದ್ದರು.

"ಜೆಡಿಎಸ್ ಪಕ್ಷದಲ್ಲಿ ಕಾರ್ಯಕರ್ತರನ್ನು ಕಡೆಗಣಿಸಲಾಗುತ್ತಿದೆ. ಅದಕ್ಕಾಗಿ ಉತ್ತರ ಕರ್ನಾಟಕದಲ್ಲಿ ಪಕ್ಷ ಬೆಳೆಯುತ್ತಿಲ್ಲ. ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ" ಎಂದು ತಿಳಿಸಿದ್ದರು.

Recommended Video

ಚಂದ್ರನ ಮೇಲೆ ಮನೆ ಕಟ್ಟಲು ನಾಸಾದಿಂದ ಕಾಂಟ್ರ್ಯಾಕ್ಟ್ | Oneindia Kannada

ಪ್ರದೀಪಗೌಡ ಮಾಲಿ ಪಾಟೀಲ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದೇನೆ ಎಂದು ಹೇಳಿದ್ದಾರೆ. ತಮ್ಮ ನೂರಾರು ಬೆಂಬಲಿಗರ ಜೊತೆ ಪ್ರದೀಪಗೌಡ ಮಾಲಿ ಪಾಟೀಲ ಬಿಜೆಪಿ ಸೇರಿದ್ದು, ಜೆಡಿಎಸ್ ಪಕ್ಷಕ್ಕೆ ಹಿನ್ನಡೆಯಾಗಿದೆ.

English summary
In the time of taluk and zilla panchayat election Koppal JD(S) leader Pradeep Gowda Mali Patil joined BJP. He quit the party on July 9 and made verbal attack on party leaders.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X