Koppal: ಕೊಪ್ಪಳದಲ್ಲಿ ಗೆದ್ದು ಬೀಗಿದ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ್
ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ನಡೆದ ಜಿದ್ದಾಜಿದ್ದಿನ ಹೋರಾಟದಲ್ಲಿ 6,63,511 ಮತಗಳನ್ನು ಪಡೆದ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ 46,357 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಇದೇ ಮೊದಲ ಬಾರಿಗೆ ಬಿಜೆಪಿಯಿಂದ ಟಿಕೆಟ್ ಪಡೆದು ಸ್ಪರ್ಧೆ ಮಾಡಿದ್ದ ಜಿಲ್ಲೆಯ ಖ್ಯಾತ ವೈದ್ಯ ಡಾ. ರಾಜಶೇಖರ್ ಕ್ಯಾವಟೂರು 6,17,154 ಮತಗಳನ್ನು ಪಡೆದು ಎರಡನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದ್ದಾರೆ.
2009ರಿಂದ ಕ್ಷೇತ್ರದಲ್ಲಿ ಬಿಜೆಪಿ ಪ್ರಾಬಲ್ಯವಿದ್ದು ಅದನ್ನು ಮುರಿಯುವಲ್ಲಿ ಕಾಂಗ್ರೆಸ್ ಸಫಲವಾಗಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ಸಂಗಣ್ಣ ಕರಡಿ ವಿರುದ್ಧ ಸ್ಫರ್ಧೆ ಮಾಡಿ ಸೋತಿದ್ದ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ್ ಹಿಟ್ನಾಳ್ ಈ ಬಾರಿ ಗೆಲುವಿನ ನಗೆ ಬೀರಿದ್ದಾರೆ.

ಮತ ಎಣಿಕೆ ಆರಂಭವಾದಾಗಿನಿಂದಲೂ ಕಾಂಗ್ರೆಸ್ ಬಿಜೆಪಿ ನಡುವೆ ಜಿದ್ದಾಜಿದ್ದಿನ ಹೋರಾಟ ಇತ್ತು. 1000-2000 ಮತಗಳ ಅಂತರದಲ್ಲಿ ಇಬ್ಬರೂ ಅಭ್ಯರ್ಥಿಗಳು ಹಿನ್ನಡೆ-ಮುನ್ನಡೆ ಕಾಯ್ದುಕೊಂಡಿದ್ದರು. ಆದರೆ ಅಂತಿಮವಾಗಿ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ್ ಹಿಟ್ನಾಳ್ ಗೆಲುವಿನ ನಗೆ ಬೀರುವಲ್ಲಿ ಯಶಸ್ವಿಯಾಗಿದ್ದಾರೆ.












Click it and Unblock the Notifications