ಕೊಪ್ಪಳಕ್ಕೆ ಐಎಎಸ್ ಕೋಚಿಂಗ್ ಸೆಂಟರ್: ಶಾಸಕ ಹಿಟ್ನಾಳ ಭರವಸೆ

ಕೊಪ್ಪಳ, ಜೂನ್ 25: ಶೈಕ್ಷಣಿಕವಾಗಿ ಹಿಂದುಳಿದಿರುವ ಕೊಪ್ಪಳ ಜಿಲ್ಲೆಯ ಯುವ ಪೀಳಿಗೆಯ ಭವಿಷ್ಯ ಉತ್ತಮ ಪಡಿಸುವ ನಿಟ್ಟಿನಲ್ಲಿ ಕೊಪ್ಪಳಕ್ಕೆ ಐಎಎಸ್/ಕೆಎಎಸ್ ನಂತಹ ಉನ್ನತ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವಂತಹ ಕೋಚಿಂಗ್ ಸೆಂಟರ್ ಮಂಜೂರಾತಿಗೆ ಪ್ರಾಮಾಣಿಕ ಯತ್ನ ಮಾಡಲಾಗುವುದು ಎಂದು ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಅವರು ಹೇಳಿದರು.

ಕೊಪ್ಪಳ ನಗರದಲ್ಲಿ ನೂತನವಾಗಿ 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಕಟ್ಟಡವನ್ನು ಸೋಮವಾರದಂದು ಉದ್ಘಾಟಿಸಿ ಅವರು ಮಾತನಾಡಿದರು.

ಶೈಕ್ಷಣಿಕವಾಗಿ ಹಿಂದುಳಿದಿರುವ ಕೊಪ್ಪಳ ಜಿಲ್ಲೆಗೆ ಸರ್ಕಾರದಿಂದ ಹಲವು ಶಿಕ್ಷಣ ಸಂಸ್ಥೆಗಳನ್ನು ಮಂಜೂರು ಮಾಡಿಸಲಾಗಿದೆ. ಈಗಾಗಲೆ ಕೊಪ್ಪಳದಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು, ಪಿ.ಜಿ. ಸೆಂಟರ್ ಅಲ್ಲದೆ ಸಮೀಪದ ತಳಕಲ್‍ನಲ್ಲಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜನ್ನು ಮಂಜೂರು ಮಾಡಿಸುವ ಮೂಲಕ ಶಿಕ್ಷಣ ಕ್ಷೇತ್ರಕ್ಕೆ ಸರ್ಕಾರ ಹಲವು ಕೊಡುಗೆಗಳನ್ನು ನೀಡಿದೆ.

Koppal : MLA Raghavendra Hitnal assures IAS KAS coaching centre

ಕೊಪ್ಪಳ ಜಿಲ್ಲೆಯ ಯುವ ಜನರಿಗೆ ಐಎಎಸ್, ಕೆಎಎಸ್ ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉತ್ತಮ ತರಬೇತಿ ನೀಡುವ ವ್ಯವಸ್ಥೆ ಸದ್ಯ ಇಲ್ಲ. ಸರ್ಕಾರದಿಂದಲೇ ಇಂತಹ ಕೋಚಿಂಗ್ ಸೆಂಟರ್ ಅನ್ನು ಕೊಪ್ಪಳದಲ್ಲಿ ಪ್ರಾರಂಭಿಸಲು ಸರ್ಕಾರದ ಮಟ್ಟದಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು.
ಸದ್ಯ 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಕಟ್ಟಡಕ್ಕೆ ಇನ್ನಷ್ಟು ಕೊಠಡಿಗಳನ್ನು ನಿರ್ಮಿಸುವ ನಿಟ್ಟಿನಲ್ಲಿ ಈಗಾಗಲೆ ಯೋಜಿಸಲಾಗಿದ್ದು, ಇನ್ನೂ ಒಂದು ಕೋಟಿ ರೂ. ಗಳ ಅನುದಾನದಡಿ ಕಾಲೇಜಿಗೆ ಹೆಚ್ಚುವರಿ ಕೊಠಡಿಗಳನ್ನು ನಿರ್ಮಿಸಿ, ವಿದ್ಯಾರ್ಥಿನಿಯರಿಗೆ ಅನುಕೂಲ ಮಾಡಿಕೊಡಲಾಗುವುದು.

ಜಿಲ್ಲೆಯ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಉತ್ತಮ ಫಲಿತಾಂಶವನ್ನು ತಂದು, ರಾಜ್ಯಕ್ಕೆ ಕೀರ್ತಿ ತರುವ ಮೂಲಕ ಜಿಲ್ಲೆಯ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಹೆಚ್.ಎಸ್. ಪಾಟೀಲ್, ಕಾಲೇಜಿನ ಡಾ. ಪ್ರಭುರಾಜ ನಾಯಕ್, ಪ್ರಾಚಾರ್ಯರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+