ಕೊಪ್ಪಳ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪರಿಷತ್ ಫೈಟ್; ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸಿದ ಜೆಡಿಎಸ್!

|
Google Oneindia Kannada News

ಕೊಪ್ಪಳ, ಡಿಸೆಂಬರ್ 07; ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಜೆಡಿಎಸ್ ಬೆಂಬಲ ನೀಡುವ ಕುರಿತು ಚರ್ಚೆಗಳು ನಡೆಯುತ್ತಿವೆ. ಆದರೆ ಜೆಡಿಎಸ್ ಪಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸುವ ಮೂಲಕ ಅಚ್ಚರಿಯ ಹೆಜ್ಜೆ ಇಟ್ಟಿದೆ.

ರಾಯಚೂರು-ಕೊಪ್ಪಳ ವಿಧಾನ ಪರಿಷತ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶರಣೇಗೌಡ ಬಯ್ಯಾಪುರಗೆ ಜೆಡಿಎಸ್ ಬೆಂಬಲ ಘೋಷಣೆ ಮಾಡಿದೆ. ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸೂಚನೆಯಂತೆಯೇ ಸ್ಥಳೀಯ ಘಟಕ ಈ ತೀರ್ಮಾನ ಮಾಡಿದೆ.

ಹಾಸನದಲ್ಲಿ ಜೆಡಿಎಸ್ ನಡೆಗೆ ರಾಷ್ಟ್ರೀಯ ಪಕ್ಷಗಳು ಸುಸ್ತು!ಹಾಸನದಲ್ಲಿ ಜೆಡಿಎಸ್ ನಡೆಗೆ ರಾಷ್ಟ್ರೀಯ ಪಕ್ಷಗಳು ಸುಸ್ತು!

ಜೆಡಿಎಸ್ ಬೆಂಬಲಿತ ಗ್ರಾಮ ಪಂಚಾಯಿತಿ ಮತ್ತು ನಗರಸಭೆ ಸದಸ್ಯರ ಸಭೆಯಲ್ಲಿ ಮಾತನಾಡಿದ ಜೆಡಿಎಸ್ ಶಾಸಕ ವೆಂಕಟರಾವ್ ನಾಡಗೌಡ ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸುವ ಕುರಿತು ಅಧಿಕೃತವಾಗಿ ಘೋಷಣೆ ಮಾಡಿದರು.

ಕಾಂಗ್ರೆಸ್ ಸೇರಿದ ಮಾಜಿ ಎಂಎಲ್‌ಸಿ, ಜೆಡಿಎಸ್ ನಾಯಕ!ಕಾಂಗ್ರೆಸ್ ಸೇರಿದ ಮಾಜಿ ಎಂಎಲ್‌ಸಿ, ಜೆಡಿಎಸ್ ನಾಯಕ!

"ಶರಣೇಗೌಡ ಬಯ್ಯಾಪುರ ಸರಳ ವ್ಯಕ್ತಿಯಾಗಿದ್ದು, ಗ್ರಾಮ ಪಂಚಾಯಿತಿ, ನಗರಸಭೆ ಸದಸ್ಯರ ಸಮಸ್ಯೆಗಳ ಬಗ್ಗೆ ಅರಿವು ಇದೆ. ಅವರನ್ನು ವಿಧಾನ ಪರಿಷತ್ತಿಗೆ ಆಯ್ಕೆ ಮಾಡಬೇಕು" ಎಂದು ಮನವಿ ಮಾಡಿದರು.

ಬಿಜೆಪಿ- ಜೆಡಿಎಸ್ ಒಳ ಒಪ್ಪಂದ: ಸಿದ್ದರಾಮಯ್ಯಬಿಜೆಪಿ- ಜೆಡಿಎಸ್ ಒಳ ಒಪ್ಪಂದ: ಸಿದ್ದರಾಮಯ್ಯ

"ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅನುಮತಿ ನೀಡಿದ್ದಾರೆ. ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶರಣೇಗೌಡ ಬಯ್ಯಾಪುರ ಬೆಂಬಲಿಸಬೇಕು" ಎಂದು ವೆಂಕಟರಾವ್ ನಾಡಗೌಡ ಹೇಳಿದರು.

ಮೈತ್ರಿ ಸುಳಿವು ನೀಡಿದ್ದ ಯಡಿಯೂರಪ್ಪ

ಮೈತ್ರಿ ಸುಳಿವು ನೀಡಿದ್ದ ಯಡಿಯೂರಪ್ಪ

ಸ್ಥಳೀಯ ಸಂಸ್ಥೆಗಳಿಂದ 25 ವಿಧಾನ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ಡಿಸೆಂಬರ್ 10ರಂದು ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಬಗ್ಗೆ ಮೊದಲು ಸುಳಿವು ನೀಡಿದ್ದು ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ.

ಚಿಕ್ಕೋಡಿಯಲ್ಲಿ ಮಾತನಾಡಿದ್ದ ಅವರು, "ವಿಧಾನ ಪರಿಷತ್ ಚುನಾವಣೆಯಲ್ಲಿ ಎಲ್ಲಿ ಜೆಡಿಎಸ್ ಅಭ್ಯರ್ಥಿಗಳು ಸ್ಪರ್ಧಿಸುವುದಿಲ್ಲೋ ಅಲ್ಲಿ ಬಿಜೆಪಿಯನ್ನು ಜೆಡಿಎಸ್ ಬೆಂಬಲಿಸಲಿದೆ" ಎಂದು ಯಡಿಯೂರಪ್ಪ ಹೇಳಿದ್ದರು.

ಕುಮಾರಸ್ವಾಮಿ ಹೇಳಿದ್ದೇನು?

ಕುಮಾರಸ್ವಾಮಿ ಹೇಳಿದ್ದೇನು?

ಬಿಜೆಪಿ ಬೆಂಬಲ ಕೇಳಿದ್ದ ಬಗ್ಗೆ ಮಾತನಾಡಿದ್ದ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ, "ಬಿಜೆಪಿ ನಾಯಕರು ಜೆಡಿಎಸ್ ಬೆಂಬಲ ಕೇಳಿದ್ದಾರೆ. ಎರಡು ದಿನದಲ್ಲಿ ನಮ್ಮ ಪಕ್ಷದ ಅಭಿಪ್ರಾಯ ತಿಳಿಸುವುದಾಗಿ ಹೇಳಿದ್ದೇನೆ. 2023ರ ವಿಧಾನಸಭೆ ಚುನಾವಣೆಯಲ್ಲಿ 123 ಸ್ಥಾನ ಗೆಲ್ಲುವ ಗುರಿ ನಮ್ಮದು. ಈ ಹಿನ್ನಲೆಯಲ್ಲಿ ಸ್ಥಳೀಯವಾಗಿಯೇ ಪಕ್ಷದ ನಾಯಕರು ಏನು ತೀರ್ಮಾನ ತೆಗೆದುಕೊಳ್ಳಬೇಕು ಎಂಬ ನಿರ್ದೇಶನವನ್ನು ಎರಡು ದಿನದಲ್ಲಿ ನೀಡಲಾಗುತ್ತದೆ" ಎಂದು ಹೇಳಿದ್ದರು.

ಮೈತ್ರಿ ಬಗ್ಗೆ ಪಕ್ಷ ಹೇಳುವುದೇನು?

ಮೈತ್ರಿ ಬಗ್ಗೆ ಪಕ್ಷ ಹೇಳುವುದೇನು?

ಪರಿಷತ್ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಮಾತನಾಡಿದ್ದರು, "ಜೆಡಿಎಸ್‌ ಪಕ್ಷದ ಬೆಂಬಲ ನಾವು ಕೇಳಿದ್ದೇವೆ. 19 ಕಡೆಗಳಲ್ಲಿ ಅವರ ಅಭ್ಯರ್ಥಿಗಳಿಲ್ಲ. ಸ್ಥಳೀಯ ಸಂಸ್ಥೆಗಳಲ್ಲಿರುವ ಜೆಡಿಎಸ್‌ನ ಮತಗಳನ್ನು ನೀಡುವ ಮೂಲಕ ಸಹಾಯ ಮಾಡುವಂತೆ ಕೇಳಿದ್ದೇವೆ, ಅದರಲ್ಲಿ ತಪ್ಪೇನಿದೆ?. ಜೆಡಿಎಸ್ ಸ್ಪರ್ಧೆ ಮಾಡಿದ್ದರೆ ತ್ರಿಕೋನ ಸ್ಪರ್ಧೆ ಏರ್ಪಡುತಿತ್ತು" ಎಂದು ಹೇಳಿದರು.

ಸ್ಥಳೀಯ ಸಂಸ್ಥೆಗಳಿಂದ 25 ವಿಧಾನ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ಡಿಸೆಂಬರ್ 10ರಂದು ಚುನಾವಣೆ ನಡೆಯುತ್ತಿದೆ. ಜೆಡಿಎಸ್ ಮಂಡ್ಯ, ತುಮಕೂರು, ಮೈಸೂರು, ಕೋಲಾರ, ಬೆಂಗಳೂರು ಗ್ರಾಮಾಂತರ, ಹಾಸನ ಕ್ಷೇತ್ರದಲ್ಲಿ ಮಾತ್ರ ಅಭ್ಯರ್ಥಿಗಳನ್ನು ಹಾಕಿದೆ.

Recommended Video

ಪಾಯಿಂಟ್ಸ್ ಟೇಬಲ್ ನಲ್ಲಿ ಕೆಳಗೆ, ಶ್ರೇಯಾಂಕದಲ್ಲಿ ಮೊದಲನೇ ಸ್ಥಾನದಲ್ಲಿದೆ ಭಾರತ | Oneindia Kannada
ಜೆಡಿಎಸ್ ಸಹಕಾರ ಕೋರುವುದಿಲ್ಲ; ಸಚಿವರು

ಜೆಡಿಎಸ್ ಸಹಕಾರ ಕೋರುವುದಿಲ್ಲ; ಸಚಿವರು

ಪರಿಷತ್ ಚುನಾವಣೆ ಮೈತ್ರಿ ಬಗ್ಗೆ ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ. ಸೋಮಶೇಖರ್ ಮಾತನಾಡಿದ್ದರು. "ಚುನಾವಣೆಯಲ್ಲಿ ಜೆಡಿಎಸ್ ಎಲ್ಲೆಲ್ಲಿ ಅಭ್ಯರ್ಥಿ ಹಾಕಿಲ್ಲ ಅಂತಹ ಕಡೆಗಳಲ್ಲಿ ಮಾತ್ರವೇ ಅವರ ಬೆಂಬಲ ಕೇಳುತ್ತಿದ್ದಾರೆ. ಮೈಸೂರಿನಲ್ಲಿ ಜೆಡಿಎಸ್ ಅಭ್ಯರ್ಥಿ ಇರುವುದರಿಂದ ಬೆಂಬಲ ಕೇಳುವ ಪ್ರಶ್ನೆ ಬರುವುದಿಲ್ಲ, ಇಲ್ಲಿ ಜೆಡಿಎಸ್ ಸಹಕಾರ ಕೋರುವ ವಿಚಾರ ನಮ್ಮ ಮುಂದಿಲ್ಲ" ಎಂದು ಸ್ಪಷ್ಟಪಡಿಸಿದ್ದರು.

English summary
In legislative council elections talks of alliance between the ruling BJP and JD(S). In Koppal and Raichur legislative council JD(S) announced support for Congress candidate.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X