ಕೊಪ್ಪಳ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆ, ಜ.2ರಿಂದ ಮೂರು ದಿನ ಮದ್ಯಪಾನ ನಿಷೇಧ

|
Google Oneindia Kannada News

ಕೊಪ್ಪಳ, ಜನವರಿ 02: ಇತಿಹಾಸ ಪ್ರಸಿದ್ಧ ಕೊಪ್ಪಳದ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವ ನಿಮಿತ್ತ ಕಾನೂನು ಸುವ್ಯವ್ಯಸ್ಥೆ ಕಾಪಾಡುವ ದೃಷ್ಟಿಯಿಂದ ಜನವರಿ 02 ರಿಂದ 04 ರವರೆಗೆ ನಗರ ಠಾಣಾ ವ್ಯಾಪ್ತಿಯಲ್ಲಿ ಮದ್ಯಪಾನ ನಿಷೇಧಿಸಲಾಗಿದೆ.

ಗವಿಸಿದ್ಧೇಶ್ವರನಿಗೆ ನಮೋನ್ನಮಃ : ಇದು ಯಾತ್ರೆ ಅಲ್ಲ ಜಾತ್ರೆಗವಿಸಿದ್ಧೇಶ್ವರನಿಗೆ ನಮೋನ್ನಮಃ : ಇದು ಯಾತ್ರೆ ಅಲ್ಲ ಜಾತ್ರೆ

ಕೊಪ್ಪಳ ನಗರದಲ್ಲಿ ಜನವರಿ 03 ರಂದು ಗವಿಸಿದ್ದೇಶ್ವರ ಜಾತ್ರಾ ರಥೋತ್ಸವ ಜರುಗಲಿದ್ದು, ನಂತರ ವಿವಿಧ ಕಾರ್ಯಕ್ರಮಗಳು ಜನವರಿ 05 ರವರೆಗೆ ನಡೆಯಲಿವೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಕೊಪ್ಪಳ ನಗರ ಹಾಗೂ ಸುತ್ತಮುತ್ತಲಿನ 5 ಕಿ.ಮೀ ವರೆಗೆ ಮದ್ಯಪಾನ ನಿಷೇಧಿಸಿ ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಆದೇಶ ಹೊರಡಿಸಿದ್ದಾರೆ.

liquor banned in the Koppal city limits from January 02 to January 04th for Gavisiddeshwara jatra

ರಥೋತ್ಸವ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ನಡೆಯುವ ಸಮಯದಲ್ಲಿ ಲಕ್ಷಾಂತರ ಭಕ್ತಾಧಿಗಳು ಸೇರಲಿದ್ದು, ಈ ಸಮಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುಲು ಜನವರಿ 02 ಮಧ್ಯರಾತ್ರಿ 12 ಗಂಟೆಯಿಂದ ಜ. 04 ರ ಬೆಳಿಗ್ಗೆ 06 ಗಂಟೆಯವರೆಗೆ ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21ರ ಪ್ರಕಾರ ಮಧ್ಯ ಮಾರಾಟ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಈ ಸಂಬಂಧವಾಗಿ ಅಬಕಾರಿ ಉಪ ಆಯುಕ್ತರ ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಿ, ಅದರಲ್ಲಿ ಆರಕ್ಷಕ ವೃತ್ತ ನಿರೀಕ್ಷಕರು, ಅಬಕಾರಿ ವೃತ್ತ ನಿರೀಕ್ಷಕರು ಕಾರ್ಯನಿರ್ವಹಿಸಲು ಆದೇಶಿಸಿದೆ.

ಈ ಆದೇಶವನ್ನು ಜಾರಿ ತರುವಲ್ಲಿ ನಿರ್ಲಕ್ಷತನ ತೋರಿದವರ ವಿರುದ್ಧ ಕಾನೂನು ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

English summary
liquor banned in the Koppal city limits from January 02 to January 04th for Gavisiddeshwara jatra mahotsava said deputy commissioner M. Kanagavalli. The Gavasudheshwara rathotsava will be held on January 03.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X