ಕೊಪ್ಪಳ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಲೋಕಸಭಾ ಚುನಾವಣೆ : ಕೊಪ್ಪಳಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಘೋಷಣೆ!

|
Google Oneindia Kannada News

ಕೊಪ್ಪಳ, ಜನವರಿ 21 : 2019ರ ಲೋಕಸಭಾ ಚುನಾವಣೆಗೆ ಕೊಪ್ಪಳ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಮಾಡಲಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಘೋಷಣೆ ಮಾಡಿದ್ದು, ಕುತೂಹಲಕ್ಕೆ ಕಾರಣವಾಗಿದೆ.

ಸಿದ್ದರಾಮಯ್ಯ ಅವರು ಭಾನುವಾರ ಗಂಗಾವತಿಯಲ್ಲಿರುವ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಅವರ ನಿವಾಸಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಅವರು ಲೋಕಸಭಾ ಚುನಾವಣೆಗೆ ಇಕ್ಬಾಲ್ ಅನ್ಸಾರಿ ಅಭ್ಯರ್ಥಿ ಎಂದು ಘೋಷಣೆ ಮಾಡಿದರು.

ಜನವರಿ 22ರಿಂದ ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆಜನವರಿ 22ರಿಂದ ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಘೋಷಣೆಯಿಂದಾಗಿ ಇತರ ಟಿಕೆಟ್‌ ಆಕಾಂಕ್ಷಿಗಳಿಗೆ ನಿರಾಸೆಯಾಗಿದೆ. '2018ರ ಚುನಾವಣೆಯಲ್ಲಿ ಇಕ್ಬಾಲ್ ಅನ್ಸಾರಿ ಅವರಿಗೆ ಅನ್ಯಾಯವಾಗಿದೆ. ಆದ್ದರಿಂದ ಅವರಿಗೆ ಟಿಕೆಟ್ ನೀಡಬೇಕು' ಎಂದು ಸಿದ್ದರಾಮಯ್ಯ ಹೇಳಿದರು.

Iqbal Ansari

2013ರ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಗೆದ್ದಿದ್ದ ಇಕ್ಬಾಲ್ ಅನ್ಸಾರಿ ಅವರು ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸಿ ಪಕ್ಷದಿಂದ ಅಮಾನತುಗೊಂಡಿದ್ದರು. ಬಳಿಕ ಅವರು ಕಾಂಗ್ರೆಸ್ ಪಕ್ಷವನ್ನು ಸೇರಿದ್ದರು.

ದೇವೇಗೌಡ, ಎಚ್ಡಿಕೆಗೆ ಇಕ್ಬಾಲ್ ಅನ್ಸಾರಿ ಬಹಿರಂಗ ಸವಾಲು!ದೇವೇಗೌಡ, ಎಚ್ಡಿಕೆಗೆ ಇಕ್ಬಾಲ್ ಅನ್ಸಾರಿ ಬಹಿರಂಗ ಸವಾಲು!

2018ರ ಚುನಾವಣೆಯಲ್ಲಿ ಗಂಗಾವತಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದ ಅವರು 59,644 ಮತಗಳನ್ನು ಪಡೆದು ಬಿಜೆಪಿಯ ಪರಣ್ಣ ಮುನವಳ್ಳಿ ವಿರುದ್ಧ ಸೋಲು ಕಂಡಿದ್ದರು. ಈಗ ಅವರಿಗೆ ಲೋಕಸಭಾ ಟಿಕೆಟ್ ನೀಡುವುದಾಗಿ ಘೋಷಣೆ ಮಾಡಲಾಗಿದೆ.

'ಜೆಡಿಎಸ್ ದೇವೇಗೌಡ ಕುಟುಂಬದ ಸ್ವಂತ ಬಸ್ ಇದ್ದಂತೆ''ಜೆಡಿಎಸ್ ದೇವೇಗೌಡ ಕುಟುಂಬದ ಸ್ವಂತ ಬಸ್ ಇದ್ದಂತೆ'

ಕೊಪ್ಪಳ ಕ್ಷೇತ್ರದ ಹಾಲಿ ಸಂಸದರು ಬಿಜೆಪಿಯ ಸಂಗಣ್ಣ ಕರಡಿ. 2014ರ ಚುನಾವಣೆಯಲ್ಲಿ ಅವರು ಕಾಂಗ್ರೆಸ್‌ನ ಬಸವರಾಜ್ ಹಿಟ್ನಾಳ್ ಅವರನ್ನು ಸೋಲಿಸಿ ಲೋಕಸಭೆಗೆ ಆಯ್ಕೆಯಾಗಿದ್ದಾರೆ.

English summary
Former minister Iqbal Ansari Congress candidate for Koppal Lok Sabha seat. Former CM Siddaramaiah announced Iqbal Ansari name.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X