ಕೊಪ್ಪಳ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಹಿಳೆಯೊಂದಿಗೆ ಅಸಭ್ಯ ವರ್ತನೆ: ಗ್ರಾಮಸ್ಥರೇ ಥಳಿಸಿ ಪೊಲೀಸರಿಗೆ ಒಪ್ಪಿಸಿದರು

By ಕೊಪ್ಪಳ ಪ್ರತಿನಿಧಿ
|
Google Oneindia Kannada News

ಕೊಪ್ಪಳ, ಸೆಪ್ಟೆಂಬರ್ 16: ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ವ್ಯಕ್ತಿಯನ್ನು ಗ್ರಾಮಸ್ಥರೇ ಥಳಿಸಿ ಪೊಲೀಸರ ವಶಕ್ಕೆ ಒಪ್ಪಿಸಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ತಳಕಲ್ ಗ್ರಾಮದಲ್ಲಿ ನಡೆದಿದೆ.

ಕುಕನೂರು ತಾಲ್ಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಕ್ಲರ್ಕ್ ಹನುಮಂತಪ್ಪನೇ ಥಳಿತಕ್ಕೆ ಒಳಗಾದ ವ್ಯಕ್ತಿಯಾಗಿದ್ದಾನೆ. ಮದ್ಯದ ನಶೆಯಲ್ಲಿ ಹನುಮಮಂತಪ್ಪ ತಳಕಲ್ ಗ್ರಾಮದ ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪ ಕೇಳಿ ಬಂದ ಕಾರಣ ಗ್ರಾಮಸ್ಥರು ಥಳಿಸಿದ್ದಾರೆ.

ಶಿವಮೊಗ್ಗ: ಲೈಂಗಿಕ ಕಿರುಕುಳ ನೀಡಿದ ಹಿನ್ನೆಲೆ ಭದ್ರಾವತಿ ತಹಶೀಲ್ದಾರ ಅಮಾನತ್ತುಶಿವಮೊಗ್ಗ: ಲೈಂಗಿಕ ಕಿರುಕುಳ ನೀಡಿದ ಹಿನ್ನೆಲೆ ಭದ್ರಾವತಿ ತಹಶೀಲ್ದಾರ ಅಮಾನತ್ತು

ಪ್ರಾಥಮಿಕ ಆರೋಗ್ಯ ಕೇಂದ್ರದ ಕ್ಲರ್ಕ್ ಹನುಮಂತಪ್ಪನ ಕೈ ಕಾಲು ಕಟ್ಟಿ ಹಿಮ್ಮುಖವಾಗಿ ಮಲಗಿಸಿ ನಡು ರಸ್ತೆಯಲ್ಲಿ ಮನಬಂದಂತೆ ಥಳಿಸಿದ್ದಾರೆ. ಹನುಮಂತಪ್ಪನಿಗೆ ಥಳಿಸುತ್ತಿರುವ ವಿಡಿಯೋ ಸ್ಥಳೀಯ ಮಟ್ಟದಲ್ಲಿ ವೈರಲ್ ಆಗಿದೆ.

Koppala: Man Misbehaving With Woman, Villagers Thumped And Handed Over To Police

ಇನ್ನೊಂದು ವಿಡಿಯೋದಲ್ಲಿ ತಳಕಲ್ ಗ್ರಾಮಸ್ಥರು ಸತ್ಯ ಒಪ್ಪಿಕೋ ಎಂದು ಹೇಳುತ್ತಿದ್ದರೆ, ಆರೋಪಿ ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ಹೇಳುತ್ತಿದ್ದಾನೆ. ಕೊನೆಗೆ ಗ್ರಾಮಸ್ಥರು ಆರೋಪಿ ಹನುಮಂತಪ್ಪನನ್ನು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಸದ್ಯ ಹನುಮಂತಪ್ಪನು ನ್ಯಾಯಾಂಗ ಬಂಧನದಲ್ಲಿದ್ದಾನೆ.

ನಿನ್ನೆಯಷ್ಟೇ ಕಂದಾಯ ಇಲಾಖೆಯ ಗ್ರಾಮ ಲೆಕ್ಕಾಧಿಕಾರಿಯ ಗ್ರಾಮ ಸಹಾಯಕರಾಗಿ ಕೆಲಸ ನಿರ್ವಹಿಸುತ್ತಿದ್ದ ಮಹಿಳೆಯ ಜೊತೆ ಅನುಚಿತ ವರ್ತನೆ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಹಶೀಲ್ದಾರರನ್ನು ಅಮಾನತ್ತು ಮಾಡಲಾಗಿದೆ.

Recommended Video

₹33,000 ಕೋಟಿ ಸಾಲ ..? ಯಾರ ಮೇಲೆ ನಿಮ್ಮ ಆರ್ಥಿಕ ಹೊಣೆಗಾರಿಕೆ? | Oneindia Kannada

ಭದ್ರಾವತಿ ತಹಶೀಲ್ದಾರರಾಗಿ ಕೆಲಸ ನಿರ್ವಹಿಸುತ್ತಿದ್ದ ಶಿವಕುಮಾರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿತ್ತು. ತಹಶೀಲ್ದಾರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಹಿಳೆಯ ಕುಟುಂಬದವರು ಆಗ್ರಹಿಸಿದ್ದರು. ಹೀಗಾಗಿ ಸಾರ್ವಜನಿಕ ಹಿತದೃಷ್ಟಿಯಿಂದ ಶಿವಮೊಗ್ಗ ಜಿಲ್ಲಾಧಿಕಾರಿಗಳು ಅಮಾನತ್ತು ಮಾಡಿದ್ದಾರೆ.

English summary
Primary Health Centre Clerk Misbehaving With Woman, Villagers Beaten And Handedover To Police. This incident took place in Talakal village in Kukanoor taluk in Koppala district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X