ಶ್ರಿಕೃಷ್ಣದೇವರಾಯ ಸಮಾಧಿ ಮೇಲೆ ಮಾಂಸ ಶುದ್ಧೀಕರಣದ ವಿಡಿಯೋ ವೈರಲ್: ರೊಚ್ಚಿಗೆದ್ದ ಯತ್ನಾಳ್
ಕೊಪ್ಪಳ, ಏಪ್ರಿಲ್, 21: ಜನಿವಾರ ವಿವಾದ ರಾಜ್ಯದ್ಯಂತ ಜೋರಾಗಿ ಸದ್ದು ಮಾಡುತ್ತಿದೆ. ಇದರ ನಡುವೆಯೇ ಇದೀಗ ವಿಜಯನಗರ ಸಾಮ್ರಾಜ್ಯದ ಪ್ರಸಿದ್ಧ ಅರಸರೊಬ್ಬರ ಸಮಾಧಿ ಮೇಲೆ ಮಾಂಸ ಶುದ್ಧೀಕರಣ ಮಾಡುತ್ತಿರುವ ವಿಡಿಯೋವೊಂದು ಭಾರೀ ವೈರಲ್ ಆಗುತ್ತಿದೆ. ಇದಕ್ಕೆ ಭಾರೀ ಆಕ್ರೋಶಗಳು ಕೂಡ ಭುಗಿಲೆದ್ದಿವೆ. ಈ ಬಗ್ಗೆ ಯತ್ನಾಳ್ ಕೂಡ ಪ್ರತಿಕ್ರಿಯಿಸಿ ಆಕ್ರೋಶ ಹೊರಹಾಕಿದ್ದಾರೆ.
ಗಂಗಾವತಿ ತಾಲೂಕಿನ ಆನೆಗೊಂದಿ ಬಳಿಯ ತುಂಗಭದ್ರಾ ನದಿಯ ದಡದಲ್ಲಿರುವ ವಿಜಯನಗರ ಸಾಮ್ರಾಜ್ಯದ ಪ್ರಸಿದ್ಧ ಅರಸ ಶ್ರಿಕೃಷ್ಣದೇವರಾಯ ಅವರ ಸಮಾಧಿಯ ಮೇಲೆ ಮಾಂಸ ಶುದ್ಧೀಕರಣ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಕೃಷ್ಣದೇವರಾಯ ಅವರ ಸಮಾಧಿ ಮಂಟಪದ ಒಂದು ಕಂಬಕ್ಕೆ ದುಷ್ಕರ್ಮಿಗಳು ಮೇಕೆ ಕಟ್ಟಿ ಮಾಂಸ ಸ್ವಚ್ಛ ಮಾಡಿದ್ದಾರೆ. ಈ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಭಾರತೀಯ ಇತಿಹಾಸದಲ್ಲಿ ಶ್ರೇಷ್ಠ ಆಡಳಿತಗಾರರಾಗಿದ್ದ ವಿಜಯನಗರದ ಶ್ರೀ ಕೃಷ್ಣದೇವರಾಯರ ಸಮಾಧಿಯ ದುಸ್ಥಿತಿ ಇದು. ಈ ಜಾಗವನ್ನು ಅಕ್ಷರಶಃ ಮಾಂಸದ ಮಾರುಕಟ್ಟೆಯಾಗಿ ಕೆಲ ಸ್ಥಳೀಯರು ಪರಿವರ್ತಿಸಿರುವುದು ನಾಡಿನ ಹೆಮ್ಮೆಯ ಅರಸರಾದ ಅಸಾಮಾನ್ಯ ಆಡಳಿತಗಾರ, ಅಪ್ರತಿಮ ದಂಡನಾಯಕ ಶ್ರೀ ಕೃಷ್ಣದೇವರಾಯರಿಗೆ ಮಾಡಿದ ಅವಮಾನ ಎಂದು ಆಕ್ರೋಶ ಹೊರಹಾಕಿದರು.
ಹಿಂದೂ ದೇವಾಲಯಗಳನ್ನು ಕೆಡವಿ, ದೇಶದ ಸಂಪತ್ತನ್ನು ದೋಚಿ, ಸಾವಿರಾರು ಹಿಂದೂಗಳನ್ನು ಅಮಾನವೀಯಗಿ ಕೊಂದ ಔರಂಗಜೇಬನ ಸಮಾಧಿಗೆ ಪುರಾತತ್ವ ಸರ್ವೇಕ್ಷಣಾ ಇಲಾಖೆ ತೆರಿಗೆದಾರರ ಹಣದಿಂದ ಸಂರಕ್ಷಣೆ ಮಾಡುತ್ತಿದೆ. ಆದರೆ, ವಿಜಯನಗರ ಸಾಮ್ರಾಜ್ಯವನ್ನು ವಿಸ್ತರಿಸಿದ ಪರಾಕ್ರಮಿ, ಕಲೆ, ಸಾಹಿತ್ಯ ರಂಗಗಳ ಪೋಷಕ ಶ್ರೀ ಕೃಷ್ಣದೇವರಾಯರ ಸಮಾಧಿಗೆ ಏಕೆ ಈ ರೀತಿಯಾದ ದಿವ್ಯ ನಿರ್ಲಕ್ಷ್ಯ ಎಂದು ಪ್ರಶ್ನೆ ಮಾಡಿವ ಮೂಲಕ ಆಕ್ರೋಶ ಹೊರಹಾಕಿದರು.
ಭಾರತೀಯ ಇತಿಹಾಸದಲ್ಲಿ ಶ್ರೇಷ್ಠ ಆಡಳಿತಗಾರರಾಗಿದ್ದ ವಿಜಯನಗರದ ಶ್ರೀ ಕೃಷ್ಣದೇವರಾಯರ ಸಮಾಧಿಯ ದುಸ್ಥಿತಿ ಇದು. ಈ ಜಾಗವನ್ನು ಅಕ್ಷರಶಃ ಮಾಂಸದ ಮಾರುಕಟ್ಟೆಯಾಗಿ ಕೆಲ ಸ್ಥಳೀಯರು ಪರಿವರ್ತಿಸಿರುವುದು ಕನ್ನಡ ನಾಡಿನ ಹೆಮ್ಮೆಯ ಅರಸರಾದ ಅಸಾಮಾನ್ಯ ಆಡಳಿತಗಾರ, ಅಪ್ರತಿಮ ದಂಡನಾಯಕ ಶ್ರೀ ಕೃಷ್ಣದೇವರಾಯರಿಗೆ ಮಾಡಿದ ಅವಮಾನ.
— Basanagouda R Patil (Yatnal) (@BasanagoudaBJP) April 21, 2025
ಹಿಂದೂ ದೇವಾಲಯಗಳನ್ನು… https://t.co/PhBUoXxjPn
ಇದು ಕನ್ನಡಿಗರಿಗಷ್ಟೇ ಅಲ್ಲ, ರಾಷ್ಟ್ರಕ್ಕೆ ಮಾಡಿದ ಅವಮಾನವಾಗಿದೆ. ಮಾಂಸವನ್ನು ಮಾರಾಟ ಮಾಡುತ್ತಾ ಸ್ಥಳದ ಪಾವಿತ್ರ್ಯತೆಯನ್ನು ಹಾಳು ಮಾಡುತ್ತಿರುವ ಇಂತವರನ್ನು ಜಿಲ್ಲಾಡಳಿತ ಕೂಡಲೇ ಜಾಗ ಖಾಲಿ ಮಾಡಿಸಬೇಕು ಹಾಗೂ ಇಲ್ಲಿ ನೈರ್ಮಲ್ಯ ಮತ್ತು ಸಮಾಧಿಯ ಪಾವಿತ್ರ್ಯತೆಯನ್ನು ಕಾಪಾಡುವ ಕೆಲಸವನ್ನು ಸರ್ಕಾರ ಶೀಘ್ರವೇ ಮಾಡಬೇಕಿ ಎಂದು ಆಗ್ರಹಿಸಿದರು.
ಜನಿವಾರ ವಿವಾದ: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಆಯೋಜನೆ ಮಾಡಿದ್ದ ಸಿಇಟಿ ಪರೀಕ್ಷೆಯಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿ ಪರೀಕ್ಷೆ ಬರೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆ ಅಧಿಕಾರಿಯನ್ನು ಅಮಾನತು ಮಾಡಲಾಗಿದ್ದು, ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡುತ್ತಿದೆ. ಹಾಗಾದ್ರೆ ಈ ಘಟನೆ ನಡೆದಿದ್ದು ಎಲ್ಲಿ ಹಾಗೂ ವಸ್ತ್ರ ಸಂಹಿಯತೆ ಹೇಳೋದೇನು ಎಂದು ಇಲ್ಲಿ ತಿಳಿಯಿರಿ.
ಶಿವಮೊಗ್ಗ ಜಿಲ್ಲೆಯ ಪರೀಕ್ಷಾ ಕೇಂದ್ರವೊಂದರಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಆರೋಪ ಕೇಳಿ ಬಂದಿದೆ. ಇದಕ್ಕೆ ಬ್ರಾಹ್ಮಣ ಸಚಿವರು, ಶಾಸಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆ ಇದೀಗ ಪರೀಕ್ಷಾ ಕೇಂದ್ರದ ಅಧಿಕಾರಿಯನ್ನು ತಕ್ಷಣವೇ ಅಮಾನತು ಮಾಡುವಂತೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಆದೇಶ ಹೊರಡಿಸಿದ್ದಾರೆ.
ಬೀದರ್‌ನಲ್ಲಿಯೂ ಇದೇ ರೀತಿ ಪ್ರಕರಣ ವರದಿ ಆಗಿದ್ದು, ಅಧಿಕಾರಿಯನ್ನು ಅಮಾನತು ಮಾಡುವಂತೆ ಒತ್ತಾಯಿಸಿದ್ದಾರೆ. ಅಮಾನತು ಮಾಡುವುದು ಅಷ್ಟೇ ಅಲ್ಲದೆ ಕ್ಷಮೆ ಕೇಳಬೇಕು ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆ ಸರ್ಕಾರಕ್ಕೆ ಆಗ್ರಹಿಸಿದೆ.












Click it and Unblock the Notifications