BJP Ticket Miss: ಕೈ ತಪ್ಪಿದ ಟಿಕೆಟ್: ಕರಡಿ ಸಂಗಣ್ಣ ಬೆಂಬಲಿಗರಿಂದ ಆಕ್ರೋಶ- ಕೊಪ್ಪಳ ಬಿಜೆಪಿ ಕಚೇರಿ ಕಿಟಕಿ ಗಾಜು ಚೂರು ಚೂರು
ಕೊಪ್ಪಳ ಮಾರ್ಚ್ 14: ಹಾಲಿ ಸಂಸದ ಕರಡಿ ಸಂಗಣ್ಣ ಅವರಿಗೆ ಕೊಪ್ಪಳ (Koppal) ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿದ ಕಾರಣ ಬೆಂಬಲಿಗರು ಆಕ್ರೋಶಗೊಂಡಿದ್ದಾರೆ. ತಮ್ಮ ನಾಯಕರಿಗೆ ಟಿಕೆಟ್ ನೀಡದೇ ಇರುವುದು ಅನ್ಯಾಯ ಎಂದು ಘೋಷಣೆಗಳನ್ನು ಕೂಗಿತ್ತಾ ಕಲ್ಲು ತೂರಾಟ ನಡೆಸಿದ್ದಾರೆ.
ಕರ್ನಾಟಕ ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬುಧವಾರ ಸಂಜೆ ಬಿಡುಗಡೆ ಮಾಡಿತು. ಆದರೆ ಈ ಪಟ್ಟಿಯಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಕರಡಿ ಸಂಗಣ್ಣ (Karadi Sanganna) ಬದಲಿಗೆ ವೃತ್ತಿಯಲ್ಲಿ ವೈದ್ಯರಾಗಿರುವ ಬಸವರಾಜ ಕ್ಯಾವಟರ್ (Dr Basavaraj S Kyavator) ಅವರಿಗೆ ಹೈಕಮಾಂಡ್ ಟಿಕೆಟ್ ನೀಡಿದೆ. ಇದು ಕರಡಿ ಸಂಗಣ್ಣ ಬೆಂಬಲಿಗರ ಕೆಂಗಣ್ಣಿಗೆ ಗುರಿಯಾಗಿದೆ. ಇದರಿಂದ ತಾಳ್ಮೆ ಕಳೆದುಕೊಂಡ ಕರಡಿ ಅವರ ಬೆಂಬಲಿಗರು ಕೊಪ್ಪಳದ ಬಿಜೆಪಿ ಕಚೇರಿಯ ಗಾಜು ಕಿಟಕಿ ಚೂರು ಚೂರು ಮಾಡಿದ್ದಾರೆ.

ಮಾತ್ರವಲ್ಲದೆ ಕಲ್ಲು ತೂರಾಟ ನಡೆಸಿದ್ದಾರೆ. ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದಾರೆ. ಕಳೆದ ದಿನ ಬಿಜೆಪಿ ಎರಡನೇ ಪಟ್ಟಿ ಬಿಡುಗಡೆಗೊಳಿಸಿದ ಬೆನ್ನಲ್ಲೆ ಇಂದು ಕೊಪ್ಪಳ ಬಿಜೆಪಿ ಕಚೇರಿಯಲ್ಲಿ ಸಭೆಯನ್ನು ಕರೆಯಲಾಗಿತ್ತು. ಈ ವೇಳೆ ಏಕಾಏಕಿ ಬಂದ ಕರಡಿ ಸಂಗಣ್ಣ ಅವರ ಬೆಂಬಲಿಗರ ಗುಂಪು ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಕಲ್ಲು ತೂರಾಟ ಮಾಡಿದ್ದಾರೆ.
ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಕರಡಿ ಸಂಗಣ್ಣ ಅವರು,'ನನಗೆ ಯಾಕೆ ಟಿಕೆಟ್ ಮಿಸ್ ಆಯ್ತು ನನಗೆ ಗೊತ್ತಿಲ್ಲ. ಯಾರು ಅಭ್ಯರ್ಥಿ ಆಗಿದ್ದಾರೋ ಅವರಿಗೆ ಒಳ್ಳೆಯದಾಗಲಿ. ಬಿಜೆಪಿ ಯಾವ ನಾಯಕರು ನನ್ನನ್ನು ಸಂಪರ್ಕಿಸಿಲ್ಲ. ಬಹುಶ: ಅವರೆಲ್ಲಾ ತುಂಬಾ ಬ್ಯೂಸಿ ಇರಬೇಕು. ಫ್ರೀ ಆದ್ಮೆಲೆ ಮಾತನಾಡಬಹುದು. ಜನರ ಆಶೀರ್ವಾದಕ್ಕೆ ನಾನು ಋಣಿಯಾಗಿದ್ದೇನೆ. ಬಿಜೆಪಿಗೆ ಬೆಂಬಲ ನೀಡಿ. ಶಾಂತತೆಯಿಂದ ವರ್ತಿಸಿ' ಎಂದು ತಮ್ಮ ಬೆಂಬಲಿಗರಿಗೆ ಮನವಿ ಮಾಡಿದರು.
ಕೊಪ್ಪಳದಲ್ಲಿ ಹಾಲಿ ಸಂಸದ ಸಂಗಣ್ಣ ಕರಡಿ ಅವರು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಅವರಿಗೆ ಟಿಕೆಟ್ ಸಿಗಲಿಲ್ಲ. ಬದಲಿಗೆ ಮಾಜಿ ಶಾಸಕ ಕೆ.ಶರವಣ್ಣಪ್ಪ ಅವರ ಪುತ್ರ ಹಾಗೂ ವೈದ್ಯ ಡಾ.ಕೆ.ಬಸವರಾಜ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಬಸವರಾಜ ಹೊಸಬರಾಗಿದ್ದು ಇವರ ಹೆಸರು ಘೋಷಣೆ ಮಾಡುವ ಮೂಲಕ ಬಿಜೆಪಿ ಅಚ್ಚರಿ ಮೂಡಿಸಿದೆ.
ಆದರೆ ನಾಲ್ಕು ಬಾರಿ ಶಾಸಕರಾಗಿ ಮತ್ತು ಎರಡು ಬಾರಿ ಬಿಜೆಪಿಯಿಂದಲೇ ಸತತವಾಗಿ ಮತ್ತು ಎರಡು ಬಾರಿ ಬಿಜೆಪಿಯಿಂದಲೇ ಸತತವಾಗಿ ಸಂಸದರಾಗಿದ್ದ ಸಂಗಣ್ಣ ಕರಡಿ ಅವರಿಗೆ ಈ ಬಾರಿಯ ಲೋಕಸಭಾ ಚುನಾವಣೆ ಬಿಜೆಪಿ ಟಿಕೆಟ್ ಕೈ ತಪ್ಪಿದೆ. ಈ ಹಿಂದೆಯೂ ಹಾಲಿ ಸಂಸದ ಶಿವರಾಮಗೌಡ ಅವರಿಗೆ ಟಿಕೆಟ್ ತಪ್ಪಿಸಿ, ವಿಧಾನಸಭಾ ಚುನಾವಣೆಯಲ್ಲಿ ಪರಾಭವಗೊಂಡಿದ್ದ ಸಂಗಣ್ಣ ಕರಡಿ ಅವರಿಗೆ ಟಿಕೆಟ್ ನೀಡಲಾಗಿತ್ತು. ಈಗ ಸತತವಾಗಿ ಎರಡು ಬಾರಿ ಗೆಲುವು ಸಾಧಿಸಿದರೂ ಟಿಕೆಟ ತಪ್ಪಿಸಿ, ಮತ್ತೆ ಹೊಸಬರಿಗೆ ಬಿಜೆಪಿ ಅವಕಾಶ ನೀಡಿದೆ.
ಇದರಿಂದ ಬೇಸರಗೊಂಡ ಕರಡಿ ಸಂಗಣ್ಣ ಬೆಂಬಲಿಗರು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಜೊತೆಗೆ ತಾವು ಯಾವುದೇ ಬಿಜೆಪಿ ಅಭ್ಯರ್ಥಿಗೆ ಬೆಂಬಲ ನೀಡುವುದಿಲ್ಲ. ಮತ ಚಲಾಯಿಸುವುದಿಲ್ಲ ಎಂದು ಪಣತೊಟ್ಟಿದ್ದಾರೆ. ಇದರಿಂದಾಗಿ ಕರಡಿ ಸಂಗಣ್ಣ ಅವರ ಬೆಂಬಲಿಗರ ಮತಗಳನ್ನು ಬಿಜೆಪಿ ಘೋಷಿತ ಅಭ್ಯರ್ಥಿ ಬಸವರಾಜ ಕ್ಯಾವಟರ್ ಕಳೆದುಕೊಳ್ಳುವ ಸಾಧ್ಯತೆ ಇದೆ. ಈ ಒಳಜಗಳ ಕಾಂಗ್ರೆಸ್‌ಗೆ ಲಾಭವಾದರೂ ಆಚ್ಚರಿಯಿಲ್ಲ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications