ಕೊಪ್ಪಳ: ಕನಿಷ್ಠ ಬೆಂಬಲ ಬೆಲೆ ಯೋಜನೆ, ಭತ್ತ ಖರೀದಿ ಕೇಂದ್ರ ಆರಂಭ
ಕೊಪ್ಪಳ, ಏಪ್ರಿಲ್ 17: ಕೊಪ್ಪಳ ಜಿಲ್ಲೆಯ ರೈತರಿಗೆ ಸಿಹಿಸುದ್ದಿ. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ ಮತ್ತು ಬಿಳಿಜೋಳ ಖರೀದಿ ಕೇಂದ್ರಗಳನ್ನು ಪ್ರಾರಂಭ ಮಾಡಲಾಗಿದೆ. 2024-25ನೇ ಸಾಲಿನ ಹಿಂಗಾರು ಹಂಗಾಮಿನ ಋತುವಿನಲ್ಲಿ ಭತ್ತ ಮತ್ತು ಬಿಳಿಜೋಳಕ್ಕೆ ಕನಿಷ್ಠ ಬೆಂಬಲ ಬೆಲೆಯನ್ನು ಘೋಷಣೆ ಮಾಡಲಾಗಿದ್ದು, ಯೋಜನೆಯಡಿ ಭತ್ತ ಮತ್ತು ಬಿಳಿಜೋಳ ಖರೀದಿಗೆ ಕೇಂದ್ರಗಳನ್ನು ಆರಂಭ ಮಾಡಲಾಗಿದೆ.
ಪ್ರತಿ ಕ್ವಿಂಟಲ್‌ಗೆ ಸಾಮಾನ್ಯ ಭತ್ತಕ್ಕೆ 2,300 ರೂ., ಗ್ರೇಡ್ 'ಎ' ಭತ್ತಕ್ಕೆ 2,320 ರೂ. ಹಾಗೂ ಹೈಬ್ರಿಡ್ ಬಿಳಿಜೋಳಕ್ಕೆ 3,371 ರೂ. ಮತ್ತು ಮಾಲ್ದಂಡಿ ಬಿಳಿಜೋಳಕ್ಕೆ 3,421 ರೂ. ದರವನ್ನು ನಿಗದಿಪಡಿಸಲಾಗಿದೆ. ಭತ್ತ ಖರೀದಿಗೆ ಮಾರ್ಚ್ 20 ರಿಂದ ಏಪ್ರಿಲ್ 25ರ ವರೆಗೆ ಹಾಗೂ ಬಿಳಿಜೋಳ ಖರೀದಿಗೆ ಮಾ. 25 ರಿಂದ ಮೇ. 31ರ ವರೆಗೆ ರೈತರ ನೋಂದಣಿ ಇರುತ್ತದೆ.

ಪ್ರತಿ ಎಕರೆಗೆ 25 ಕ್ವಿಂಟಲ್ ನಂತೆ ಪ್ರತಿ ರೈತರಿಂದ ಗರಿಷ್ಠ 50 ಕ್ವಿಂಟಲ್ ಭತ್ತ ಖರೀದಿಸಲಾಗುತ್ತದೆ. ಬಿಳಿಜೋಳವನ್ನು ಪ್ರತಿ ರೈತರಿಂದ ಎಕರೆಗೆ 20 ಕ್ವಿಂಟಲ್ ನಂತೆ ಗರಿಷ್ಠ 150 ಕ್ವಿಂಟಲ್ ಖರೀದಿಸಲಾಗುವುದು ಎಂದು ಮಾಹಿತಿ ನೀಡಲಾಗಿದೆ.
ಭತ್ತ ಕಟಾವು ಯಂತ್ರಕ್ಕೆ ಬಾಡಿಗೆ ನಿಗದಿ: ಕೊಪ್ಪಳ ಜಿಲ್ಲೆಯಲ್ಲಿ ಭತ್ತ ಕಟಾವು ಯಂತ್ರಗಳ ಬಾಡಿಗೆ ದರವನ್ನು ನಿಗದಿಪಡಿಸಿ ಜಿಲ್ಲಾಧಿಕಾರಿ ನಲಿನ್ ಅತುಲ್ ಆದೇಶ ಹೊರಡಿಸಿದ್ದಾರೆ. 2024-25ನೇ ಸಾಲಿನ ಬೇಸಿಗೆ ಹಂಗಾಮಿನಲ್ಲಿ 50,930 ಹೆಕ್ಟೇರ್ ಪ್ರದೇಶದಲ್ಲಿ ಭತ್ತದ ಬೆಳೆಯ ಕ್ಷೇತ್ರ ಆವರಿಸಿದೆ.
ಸದ್ಯ ಭತ್ತದ ಬೆಳೆಯು ಬಹುತೇಕ ಕಾಳು ಬಲಿಯುವ ಹಂತದಲ್ಲಿದ್ದು, ಈಗಾಗಲೇ ಹಲವು ಕಡೆ ಕಟಾವು ಪ್ರಾರಂಭವಾಗಿರುತ್ತದೆ. ಜಿಲ್ಲೆಯಲ್ಲಿ ಶೇ 95 ರಷ್ಟು ರೈತರು ಭತ್ತದ ಬೆಳೆಯನ್ನು ಭತ್ತ ಕಟಾವು ಯಂತ್ರಗಳ ಮೂಲಕ ಕಟಾವು ಮಾಡುತ್ತಿದ್ದು, ಖಾಸಗಿ ಭತ್ತ ಕಟಾವು ಯಂತ್ರ ಮಾಲೀಕರು ರೈತರಿಂದ ಪ್ರತಿ ಗಂಟೆಗೆ 2500 ರೂ. ರಿಂದ 3000 ರೂ. ತನಕ ಬಾಡಿಗೆ ವಸೂಲಿ ಮಾಡುತ್ತಿರುವ ಬಗ್ಗೆ ರೈತರುಗಳಿಂದ ದೂರು ಬಂದಿರುತ್ತದೆ.
ಈ ಕುರಿತು ಕೊಪ್ಪಳ ಜಂಟಿ ಕೃಷಿ ನಿರ್ದೇಶಕರು ಮಾಹಿತಿ ನೀಡಿದ್ದು, ಈ ಬಗ್ಗೆ ಕೃಷಿ ಇಲಾಖೆಯ ಅಧಿಕಾರಿಗಳು, ರೈತ ಮುಖಂಡರು ಹಾಗೂ ಭತ್ತ ಕಟಾವು ಯಂತ್ರದ ಮಾಲೀಕದೊಂದಿಗೆ ಸಭೆಯನ್ನು ನಡೆಸಲಾಗಿದೆ. ಅಂದಾಜು 2400 ರೂ. ದರ ನಿಗದಿಪಡಿಸಲು ಗಂಗಾವತಿ ಸಹಾಯಕ ಕೃಷಿ ನಿರ್ದೇಶಕರು ವರದಿ ಸಲ್ಲಿಸಿರುತ್ತಾರೆ.
ಈ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಬೆಳೆದ ಭತ್ತಕ್ಕೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಇಲ್ಲದ ಕಾರಣ ಹಾಗೂ ಆಕಾಲಿಕ ಅಲಿಕಲ್ಲು ಮಳೆಯಿಂದ ರೈತರು ಸಂಕಷ್ಟದಲ್ಲಿರುವ ಪ್ರಯುಕ್ತ ಜಿಲ್ಲೆಯಲ್ಲಿ ಭತ್ತ ಬೆಳೆದ ರೈತರಿಗೆ ಹೆಚ್ಚಿನ ಆರ್ಥಿಕ ಹೊರೆಯಾಗಲಿದೆ ಎಂದು ಸಭೆಯಲ್ಲಿ ಚರ್ಚೆ ನಡೆಯಿತು.
ಆದಕಾರಣ ಭತ್ತ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ ಗರಿಷ್ಠ 2400 ರೂ. ಮೀರದಂತೆ ಬಾಡಿಗೆಯನ್ನು ನಿಗದಿಪಡಿಸಲಾಗಿದೆ. ಜಿಲ್ಲೆಯಲ್ಲಿರುವ ಭತ್ತ ಕಟಾವು ಯಂತ್ರದ ಮಾಲೀಕರು ಈ ದರಕ್ಕೆ ಮೀರದಂತೆ ಭತ್ತ ಕಟಾವು ಕೈಗೊಳ್ಳಲು ಸೂಚಿಸಲಾಗಿದೆ. ತಪ್ಪಿದ್ದಲ್ಲಿ ಭತ್ತ ಕಟಾವು ಯಂತ್ರದ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಸಿದ್ದಾರೆ.
ಕೊಪ್ಪಳ ಜಿಲ್ಲೆಗೆ ರಾಷ್ಟ್ರ ಮಟ್ಟದ ಪ್ರಶಸ್ತಿ: 2023-24ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿ ಕೊಪ್ಪಳ ಜಿಲ್ಲೆಗೆ ರಾಷ್ಟ್ರಮಟ್ಟದ ಪ್ರಶಸ್ತಿ ಸಿಕ್ಕಿದೆ. 2023-24ನೇ ಸಾಲಿನ ಮುಂಗಾರು & ಹಿಂಗಾರು ಹಂಗಾಮಿನಲ್ಲಿ ಕೊಪ್ಪಳ ಜಿಲ್ಲಾಧಿಕಾರಿಗಳ ನಿರಂತರ ಮೇಲ್ವಿಚಾರಣೆ, ವಿಮರ್ಶೆ ಹಾಗೂ ಮಾರ್ಗದರ್ಶನದ ಫಲಿತಾಂಶವಾಗಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ, ಕೊಪ್ಪಳ ಜಿಲ್ಲಾಡಳಿತ ಹಾಗೂ ಕೃಷಿ ಇಲಾಖೆ ಉತ್ತಮ ಸಾಧನೆ ಮಾಡಿರುವ ಕಾರಣ ರಾಷ್ಟ್ರ ಮಟ್ಟದಲ್ಲಿ ಕೊಪ್ಪಳ ಜಿಲ್ಲೆಗೆ ಪ್ರಶಸ್ಥಿಯನ್ನು ನೀಡಲಾಗಿದೆ.
2023-24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಒಟ್ಟು 74,781 ರೈತರನ್ನು ಬೆಳೆವಿಮೆ ನೋಂದಾವಣೆ ಮಾಡಲಾಗಿರುತ್ತದೆ. ಆದರೆ ಮುಂಗಾರು ಹಂಗಾಮಿನಲ್ಲಿ ಮಳೆ ಆಗದೇ ಕಾರಣ ಬರಗಾಲ ಎಂದು ಘೋಷಣೆ ಮಾಡಲಾಗಿತ್ತು. ಇಂತಹ ಸಂದರ್ಭದಲ್ಲಿ ಜಿಲ್ಲಾಡಳಿತ ಮತ್ತು ಕೃಷಿ ಇಲಾಖೆ ಸಮೀಕ್ಷೆಯನ್ನು ನಡೆಸಿ ಬೆಳೆವಿಮೆ ಯೋಜನೆಯಡಿ ಒಟ್ಟು 33,375 ರೈತರಿಗೆ 26.17 ಕೋಟಿ ಮಧ್ಯತರ ಪರಿಹಾರ ಹಾಗೂ ಬೆಳೆ ಕಟಾವು ಆಧಾರದ ಮೇಲೆ 37,730 ರೈತರಿಗೆ ರೂ 51.88 ಕೋಟಿ ಒಟ್ಟಾರೆ 71,105 ರೈತರಿಗೆ 78.55 ಕೋಟಿ ರೂ ಬೆಳೆವಿಮೆ ಪರಿಹಾರ ರೈತರ ಖಾತೆಗೆ ಜಮಾ ಆಗಿರುತ್ತದೆ. ಇದೇ ರೀತಿ ಹಿಂಗಾರು ಹಂಗಾಮಿನಲ್ಲಿಯೂ ಸಹ 5311 ರೈತರಿಗೆ ರೂ. 6.74 ಕೋಟಿ ಬೆಳೆವಿಮೆ ಪರಿಹಾರ ರೈತರ ಖಾತೆಗೆ ಜಮಾ ಆಗಿರುತ್ತದೆ.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications