ಕೊಪ್ಪಳ: ಸಂಪೂರ್ಣ ಸಾಲ ಮನ್ನಾಕ್ಕೆ ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ ಬಂದ್
ಬೆಂಗಳೂರು, ಜು.15: ರೈತರ ಸಂಪೂರ್ಣ ಸಾನಮನ್ನಾಕ್ಕೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜು.21ರಂದು ಕೊಪ್ಪಳ ಜಿಲ್ಲೆಯ ಹಿಳಕಲ್ ಸರ್ಕಲ್ ಬಳಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ಮಾಡಲು ನಿರ್ಧರಿಸಿದೆ.
ರೈತರ ಸಂಪೂರ್ಣ ಸಾಲಮನ್ನಾ ಮಾಡದೆ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಮಾತು ತಪ್ಪಿದ್ದಾರೆ ಎಂದು ದೂರಿದ್ದಾರೆ. ಅಂದು ಬೆಳಗ್ಗೆ 11 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಬಂದ್ ನಡೆಸಲಾಗುತ್ತದೆ. ಸಂಘಟನೆಯ ಪ್ರಧಾನ ಕಾರ್ಯದರ್ಶಿ ಬಡಗಲಪುರ ನಾಗೇಂದ್ರ ತಿಳಿಸಿದ್ದಾರೆ.
ಮೊದಲನೇ ಹಂತದಲ್ಲಿ ರಸ್ತೆ ಬಂದ್ ಮಾಡುವ ಮೂಲಕ ರಾಜ್ಯ ಮತ್ತು ಕೇಂದ್ರ ಸರ್ಕಾರದ ಗಮನ ಸೆಳೆಯಲಾಗುತ್ತದೆ. ಬೇಡಿಕೆ ಈಡೇರಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಹೇಳಿದ್ದಾರೆ.

ಕುಮಾರಸ್ವಾಮಿ ಕರ್ನಾಟಕ ಬಜೆಟ್‌ನಲ್ಲಿ ಪ್ರತಿ ರೈತರ ಕುಟುಂಬಗಳಿಗೆ 2 ಲಕ್ಷ ರೂ.ವರೆಗೆ ಸಾಲಮನ್ನಾ ಮಾಡುವುದಾಗಿ ಘೋಷಿಸಿದ್ದರು. ನಂತರ ರೈತರ ಒತ್ತಾಯದ ಬಳಿ ಇನ್ನೂ ಒಂದು ಲಕ್ಷ ಮನ್ನಾ ಮಾಡುವುದಾಗಿ ಹೇಳಿದ್ದರು.












Click it and Unblock the Notifications