ಕೊಪ್ಪಳ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಿರ್ಬಂಧದ ನಡುವೆ ಪಲ್ಲಕ್ಕಿ ಉತ್ಸವ: 50ಕ್ಕೂ ಹೆಚ್ಚು ಜನರ ಬಂಧನ

By Lekhaka
|
Google Oneindia Kannada News

ಕೊಪ್ಪಳ, ಆಗಸ್ಟ್ 21: ನಿರ್ಬಂಧದ ನಡುವೆಯೂ ಅಡ್ಡಪಲ್ಲಕ್ಕಿ ಉತ್ಸವವನ್ನು ಆಚರಣೆ ಮಾಡಿದ್ದರ ಪರಿಣಾಮ 50 ಜನರನ್ನು ಪೊಲೀಸರು ಬಂಧಿಸಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.

Recommended Video

ಇವನು ಕೊಟ್ಟ ಆಫರ್ ನೋಡಿ ಅಂಗಡಿ ಸೀಲ್ ಮಾಡಿದ ಪೊಲೀಸ್ | Oneindia Kannada

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ದೋಟಿಹಾಳ ಗ್ರಾಮದ ಶ್ರೀಅವಧೂತ ಶುಕಮುನಿ ದೇವರ ಆರಾಧನೆ ಮಹೋತ್ಸವದ ನಿಮಿತ್ತ ಪ್ರತಿ ವರ್ಷ ಅಡ್ಡಪಲ್ಲಕ್ಕಿ ಉತ್ಸವ ಅದ್ಧೂರಿಯಾಗಿ ಆಚರಿಸಲಾಗುತ್ತಿತ್ತು. ಆದರೆ ಬಾರಿ ಕೊರೊನಾ ವೈರಸ್ ಭೀತಿಯಿಂದ ಅಡ್ಡಪಲ್ಲಕ್ಕಿ ಉತ್ಸವವನ್ನು ಸರಳವಾಗಿ ದೇವಸ್ಥಾನದ ಆವರಣದಲ್ಲಿ ಆಚರಿಸಲು ದೇವಸ್ಥಾನದ ಆಡಳಿತ ಮಂಡಳಿ ನಿರ್ಧರಿಸಿತ್ತು.

ವಿಡಿಯೋ: ಗೃಹಪ್ರವೇಶದ ದಿನವೇ ಮನೆಗೆ ಬಂತು ಪತ್ನಿಯ ಪ್ರತಿಮೆ! ವಿಡಿಯೋ: ಗೃಹಪ್ರವೇಶದ ದಿನವೇ ಮನೆಗೆ ಬಂತು ಪತ್ನಿಯ ಪ್ರತಿಮೆ!

ಭಕ್ತರು ಏಕಾಏಕಿ ದೇವಸ್ಥಾನದ ಮುಖ್ಯದ್ವಾರದ ಬಾಗಿಲು ಒಡೆಯಲು ಆರಂಭಿಸಿದರು. ಕೊನೆಗೆ ದೇವಸ್ಥಾನದ ಶೆಟರ್ ಧ್ವಂಸಗೊಳಿಸಿ ಪಲ್ಲಕ್ಕಿಯನ್ನು ಹೊರ ತಂದು ಗ್ರಾಮದಲ್ಲಿ ಮೆರವಣಿಗೆ ಮಾಡಲಾಯಿತು. ಈ ಮಧ್ಯೆ ಪಲ್ಲಕ್ಕಿ ಹೊರಬರುತ್ತಿದಂತೆ ಅಲ್ಲೆ ನಿಲ್ಲಿಸಲಾಗಿದ್ದ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಪೊಲೀಸ್ ವಾಹನದ ಗಾಜು ಪುಡಿಪುಡಿಯಾಗಿದೆ.

Koppal: Pallakki Festival Amid Restriction, Arrest Of More Than 50 People

ಅಡ್ಡಪಲ್ಲಕ್ಕಿ ಉತ್ಸವಕ್ಕೆ ತಹಶೀಲ್ದಾರರು ನಿರ್ಬಂಧ ಹೇರಿದ್ದರೂ ಕೂಡಾ ಸಾವಿರಾರು ಜನರ ಮಧ್ಯೆ ಪಲ್ಲಕ್ಕಿ ಉತ್ಸವ ಆಚರಣೆ ಮಾಡಿದ್ದಾರೆ. ಅಲ್ಲದೇ ನಾನಾ ಅವಾಂತರಕ್ಕೂ ಕಾರಣವಾಯಿತು.

ಸ್ಥಳದಲ್ಲಿ ಬೀಡು ಬಿಟ್ಟಿದ್ದ ಕುಷ್ಟಗಿ ತಹಶೀಲ್ದಾರ್ ಎಂ.ಸಿದ್ದೇಶ ಸೇರಿದಂತೆ ಪೊಲೀಸ್ ಅಧಿಕಾರಿಗಳ ಮಾತಿಗೂ ಜನರು ಕಿಮ್ಮತ್ತು ನೀಡಲಿಲ್ಲ. ಕೊನೆಗೆ ಪೊಲೀಸರು ಮತ್ತು ಜನರ ನಡುವೆ ಮಾತಿನ ಚಕಮಕಿ ನಡೆಯಿತು. ಈ ವೇಳೆ ಪೊಲೀಸರು ಜನರ ಮೇಲೆ ಲಾಠಿ ಕೂಡ ಬೀಸಿದರು.

ಒಂದು ಗಂಟೆಗಳ ಕಾಲ ಗ್ರಾಮದ ಮಧ್ಯೆ ಗ್ರಾಮಸ್ಥರು ಪಲ್ಲಕ್ಕಿ ಬಿಟ್ಟು ಹೋಗಿದ್ದರು. ಪೊಲೀಸರು ಪಲ್ಲಕ್ಕಿ ಹೊತ್ತು ದೇವಸ್ಥಾನಕ್ಕೆ ತಂದಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ರಾತ್ರಿ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಸಂಗೀತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಕುಷ್ಟಗಿ ಕಂದಾಯ ನೀರಿಕ್ಷಕ ಮತ್ತು ಪೊಲೀಸ್ ಠಾಣೆ ಸಿಬ್ಬಂದಿಯಿಂದ ಪ್ರತ್ಯೇಕ ದೂರು ದಾಖಲು ಮಾಡಿದ್ದಾರೆ. ಇಬ್ಬರ ದೂರಿನನ್ವಯ ಪೊಲೀಸರು 50ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದಾರೆ.

English summary
The temple's governing body had decided to simply celebrate the Adda Pallakki festival in the temple premises for fear of coronavirus.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X