ಕೊಪ್ಪಳ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆಗ ಸಾಫ್ಟ್ ವೇರ್ ಇಂಜಿನಿಯರ್, ಈಗ ಕೊಪ್ಪಳದ ಜಿಲ್ಲಾಧಿಕಾರಿ

By Gururaj
|
Google Oneindia Kannada News

Recommended Video

ಒಂದು ಕಾಲದಲ್ಲಿ ಇವರು ಸಾಫ್ಟ್ ವೇರ್ ಇಂಜಿನಿಯರ್, ಈಗ ಇವರು ಕೊಪ್ಪಳ ಡಿ ಸಿ

ಕೊಪ್ಪಳ, ಆಗಸ್ಟ್ 07 : ಕೊಪ್ಪಳದ ನೂತನ ಜಿಲ್ಲಾಧಿಕಾರಿಯಾಗಿ ಪೊಮ್ಮಲ ಸುನೀಲ್‍ ಕುಮಾರ್ ಅಧಿಕಾರ ವಹಿಸಿಕೊಂಡಿದ್ದಾರೆ. ಜಿಲ್ಲಾಧಿಕಾರಿಯಾಗಿದ್ದ ಎಂ.ಕನಗವಲ್ಲಿ ಅವರನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ.

ಮಂಗಳವಾರ ಪೊಮ್ಮಲ ಸುನೀಲ್‍ ಕುಮಾರ್ ಅವರು ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡರು. ಎಂ. ಕನಗವಲ್ಲಿ ಅವರು ಅಧಿಕಾರ ಹಸ್ತಾಂತರ ಮಾಡಿದರು. ಪೊಮ್ಮಲ ಸುನೀಲ್‍ ಕುಮಾರ್ ಅವರು 2011ನೇ ಬ್ಯಾಚ್ ಐಎಎಸ್ ಅಧಿಕಾರಿ.

ಶಿಖಾ ಸೇರಿದಂತೆ 19 ಐಎಎಸ್ ಅಧಿಕಾರಿಗಳು ವರ್ಗಶಿಖಾ ಸೇರಿದಂತೆ 19 ಐಎಎಸ್ ಅಧಿಕಾರಿಗಳು ವರ್ಗ

ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದರು : ಪೊಮ್ಮಲ ಸುನೀಲ್‍ ಕುಮಾರ್ ಅವರು ಆಂಧ್ರಪ್ರದೇಶದ ಕಡಪ ಜಿಲ್ಲೆಯವರು. ಎಲೆಕ್ಟ್ರಿಕಲ್ ಇಂಜಿನಿಯರ್ ಪದವಿ ಪಡೆದಿದ್ದಾರೆ. ತಮಿಳುನಾಡಿನ ಚೆನ್ನೈ ಮತ್ತು ಅಮೆರಿಕಾದ ನ್ಯೂಜೆರ್ಸಿಯಲ್ಲಿ ಅವರು ಸಾಫ್ಟ್ ವೇರ್ ಇಂಜಿನಿಯರ್ ಆಗಿ ವಿವಿಧ ಕಂಪನಿಗಳಲ್ಲಿ ಸುಮಾರು 7 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ.

Deputy Commissioner

ಸಾಫ್ಟ್ ವೇರ್ ಇಂಜಿನಿಯರ್ ಕೆಲಸಕ್ಕೆ ರಾಜೀನಾಮೆ ನೀಡಿ ಶ್ರಮಪಟ್ಟು ವ್ಯಾಸಂಗ ಮಾಡಿ, ಯುಪಿಎಸ್‍ಸಿ ಪರೀಕ್ಷೆ ಬರೆದು, 2011 ರಲ್ಲಿ ಐಎಎಸ್ ಅಧಿಕಾರಿಯಾಗಿ ಆಯ್ಕೆಯಾದರು. ಹಾಸನ ಜಿಲ್ಲೆಯಲ್ಲಿ ಐಎಎಸ್ ಟ್ರೈನಿ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ ಬಳಿಕ, ಹೊಸಪೇಟೆ ಉಪವಿಭಾಗಾಧಿಕಾರಿಯಾಗಿ ಒಂದು ವರ್ಷ 4 ತಿಂಗಳು ಸೇವೆ ಸಲ್ಲಿಸಿದ್ದಾರೆ.

ಬೆಂಗಳೂರು ಮೌಂಟ್ ಕಾರ್ಮೆಲ್ ವಿದ್ಯಾರ್ಥಿ ಈಗ ಧಾರವಾಡ ಡಿಸಿಬೆಂಗಳೂರು ಮೌಂಟ್ ಕಾರ್ಮೆಲ್ ವಿದ್ಯಾರ್ಥಿ ಈಗ ಧಾರವಾಡ ಡಿಸಿ

ಯಾದಗಿರಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ 7 ತಿಂಗಳು, ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತರಾಗಿ ಸುಮಾರು 2 ವರ್ಷ, ಬೆಂಗಳೂರಿನಲ್ಲಿ ವಸತಿ ಇಲಾಖೆಯಲ್ಲಿ ರಿಯಲ್ ಎಸ್ಟೇಟ್ ರೆಗ್ಯುಲಾರಿಟಿ ಅಥಾರಿಟಿಯಲ್ಲಿ ಕಾರ್ಯದರ್ಶಿಗಳಾಗಿ ಸೇವೆ ಸಲ್ಲಿಸಿದ್ದಾರೆ.

Pommala Sunil Kumar takes charge as Koppal Deputy Commissioner

ಕಾರ್ಮಿಕ ಇಲಾಖೆಯ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕೆಲಸ ಮಾಡಿದ್ದಾರೆ. ಕೊಪ್ಪಳ ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾಗುವುದಕ್ಕೂ ಮುನ್ನ ನಗರಾಭಿವೃದ್ಧಿ ಇಲಾಖೆಯ ಕರ್ನಾಟಕ ಮುನಿಸಿಪಲ್ ಡಾಟಾ ಸೊಸೈಟಿಯಲ್ಲಿ ಜಂಟಿ ನಿರ್ದೇಶಕರ (ಸುಧಾರಣೆ) ಹುದ್ದೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.

English summary
Pommala Sunil Kumar took charge as Deputy Commissioner of Koppal, Karnataka. Pommala Sunil Kumar 2011 batch IAS officer who worked as software engineer for 7 years in America.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X