Breaking: ಕೊಪ್ಪಳದಲ್ಲಿ ರಸ್ತೆ ಅಪಘಾತ, ಒಂದೇ ಕುಟುಂಬದ ಐವರು ಸಾವು

ಕೊಪ್ಪಳ ಜುಲೈ 24: ಹುಟ್ಟುಹಬ್ಬದ ಸಂಭ್ರಮಾಚರಣೆ ಮುಗಿಸಿ ಕಾರಿನಲ್ಲಿ ಸ್ವಗ್ರಾಮಕ್ಕೆ ಮರಳುತ್ತಿದ್ದ ಒಂದೇ ಕುಟುಂಬ ಐವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ಧಾರುಣ ಘಟನೆ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕು ಭಾನಾಪುರ ಗ್ರಾಮದ ಬಳಿ ಶನಿವಾರ ತಡರಾತ್ರಿ ನಡೆದಿದೆ.

ಭಾನಾಪುರ ಗ್ರಾಮದ ಬಳಿ ಈ ಘಟನೆ ನಡೆದಿದ್ದು ಸ್ಕಾರ್ಪಿಯೋ ಕಾರಿನಲ್ಲಿ ಸ್ವಗ್ರಾಮಕ್ಕೆ ತೆರಳುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ.

ಯಲಬುರ್ಗಾದ ಬಿನ್ನಾಳ ಗ್ರಾಮದ ದೇವಪ್ಪ ಕೊಪ್ಪದ(62), ಮೃತರ ಸೊಸೆ ಗಿರಿಜಮ್ಮ(45), ಅಣ್ಣನ ಮಕ್ಕಳಾದ ಶಾಂತಮ್ಮ(35), ಪಾರ್ವತಮ್ಮ(32), ಸಂಬಂಧಿ ಕಸ್ತೂರಮ್ಮ(20) ಮೃತಪಟ್ಟವರು.

Road accident At Koppal 5 Killed

ಘಟನೆಯಲ್ಲಿ ಚಾಲಕ ಹರ್ಷವರ್ಧನ, ಮಕ್ಕಳಾದ ಬಸವರಾಜ, ಪುಟ್ಟರಾಜ, ಭೂಮಿಕಾ ಸೇರಿದಂತೆ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಸಂಬಂಧಿಕರ ಮನೆಯಲ್ಲಿ ಹುಟ್ಟುಹಬ್ಬಕ್ಕೆ ಕುಕನೂರು ತಾಲೂಕಿನ ಭಿನ್ನಾಳ ಗ್ರಾಮದ ದೇವಪ್ಪ ಕೊಪ್ಪದ ಅವರ ಒಂದೇ ಕುಟುಂಬದ 9ಮಂದಿ ತೆರಳಿದ್ದರು. ಕೊಪ್ಪಳದಲ್ಲಿಯ ಮಾಜಿ ಸೈನಿಕ ಹಾಗೂ ಡಿಆರ್‌ ಮುಖ್ಯಪೇದೆ ಆಗಿರುವ ಶರಣಪ್ಪ ಅವರ ಮಗಳ ಪ್ರಥಮ ವರ್ಷದ ಹುಟ್ಟು ಹಬ್ಬ ಆಚರಿಸಿ ನಂತರ ಸ್ವಗ್ರಾಮಕ್ಕೆ ತೆರಳುತ್ತಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+