• search
ಕೊಪ್ಪಳ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೊಪ್ಪಳ: ಮಳೆ ನೀರಲ್ಲಿ ಮುಳುಗಿದ ಶಾಲೆ, ಸಿಡಿದೆದ್ದ ಗ್ರಾಮಸ್ಥರು

By Nayana
|

ಕೊಪ್ಪಳ, ಜೂನ್ 15: ಕಳೆದ ಎರಡು ದಿನಗಳಿಂದ ಬರುತ್ತಿರುವ ಭಾರಿ ಮಳೆಯಿಂದಾಗಿ ಕೊಪ್ಪಳದಲ್ಲಿ ಶಾಲೆ ಸಂಪೂರ್ಣವಾಗಿ ಜಲಾವೃತಗೊಂಡಿದೆ.

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿ ಎರಡು ವಾರಗಳು ಕಳೆದಿವೆ, ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಕಳೆದ ಒಂದು ವಾರದಿಂದ ಭಾರಿ ಮಳೆಯಾಗಿ ಪ್ರವಾಹವೇ ಸೃಷ್ಟಿಯಾಗಿತ್ತು. ಇದೀಗ ಕರಾವಳಿ ಭಾಗದಲ್ಲಿ ಮಳೆ ಸ್ವಲ್ಪ ಕಡಿಮೆಯಾಗಿದೆ. ಆದರೆ ಕೊಪ್ಪಳದಲ್ಲಿ ಮಳೆ ಆರಂಭವಾಗಿದೆ.

ಸಂಚಾರಕ್ಕೆ ತೆರೆದುಕೊಂಡ ಚಾರ್ಮಾಡಿ ಘಾಟ್, ಭಾರೀ ವಾಹನಕ್ಕಿಲ್ಲ ಅನುಮತಿ

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಚಿಕ್ಕ ಬ್ಯಾಗೇರಿಯಲ್ಲಿ ಭಾರಿ ಮಳೆಯಿಂದಾಗಿ ಶಾಲೆ ಜಲಾವೃತಗೊಂಡಿದೆ, ಶಾಲೆ ಆವರಣದಲ್ಲಿ ತುಂಬಿಕೊಂಡಿರುವ ನೀರನ್ನು ಹೊರಹಾಕಲು ಗ್ರಾಮಸ್ಥರು ಹರಸಾಹಸ ಪಡುತ್ತಿದ್ದಾರೆ.

Shool drown in rain water villagers protest

ಪ್ರತಿ ವರ್ಷವೂ ಮಳೆಯಾದರೆ ಇದೇ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಆದರೆ ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಳು ಯಾವ ಜನಪ್ರತಿನಿಧಿಗಳೂ ಮುಂದೆ ಬರುತ್ತಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಟ್ಟು ಆರು ಎಕರೆ ಪ್ರದೇಶದಲ್ಲಿ ಶಾಲೆ ಇದೆ, ಪ್ರತಿ ಸಲ ಮಳೆ ಬಂದಾಗಲು ವಿದ್ಯಾರ್ಥಿಗಳಿಗೆ ಶಾಲೆಗೆ ತೆರಳು ಸಾಧ್ಯವೇ ಇಲ್ಲ ಹೀಗೆ ಮಳೆಗಾಲ ಪೂರ್ತಿಯಾಗಿ ಶಾಲೆಗೆ ಹೋಗದಿರುವ ಪರಿಸ್ಥಿತಿ ಇದೆ ಆದರೂ ಕೂಡ ವರ್ಷವೂ ಬೆಂಕಿ ಬಂದ ಮೇಲೆ ಬಾವಿ ತೋಡಿದಂತೆ ಜನಪ್ರತಿನಿಧಿಗಳು ಪರಿಹಾರದ ಮಾತನಾಡುತ್ತಾರೆ ಆದರೆ ಯಾವುದೇ ಪ್ರಯೋಜನವಾಗಿಲ್ಲ, ಮಕ್ಕಳನ್ನು ಶಾಲೆಗೆ ಕಳುಹಿಸಲು ಭಯವಾಗುತ್ತದೆ ಎಂದು ಪೋಷಕರು ಅಳಲು ತೋಡಿಕೊಂಡಿದ್ದಾರೆ.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

ಇನ್ನಷ್ಟು ಕೊಪ್ಪಳ ಸುದ್ದಿಗಳುView All

English summary
Villagers were anger against politicians and officials as school drown in rain water at Chikka myageri of Yelburga taluk in Koppal district on Friday.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

Notification Settings X
Time Settings
Done
Clear Notification X
Do you want to clear all the notifications from your inbox?
Settings X
X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more