ಕೊಪ್ಪಳ: ಹುಲಿಗೆಮ್ಮ ದೇವಿ ಜಾತ್ರಾ ಮಹೋತ್ಸವ ಮೇ 13ರಿಂದ ಪ್ರಾರಂಭ
ಕೊಪ್ಪಳ, ಮೇ 05: ಕೊಪ್ಪಳ ಜಿಲ್ಲಾಡಳಿತ ಹುಲಿಗೆಮ್ಮ ದೇವಿ ಜಾತ್ರಾ ಮಹೋತ್ಸವ -2025ರ ತಯಾರಿಯನ್ನು ಕೈಗೊಂಡಿದೆ. ಜಾತ್ರೆಗೆ ಆಗಮಿಸುವ ಭಕ್ತಾಧಿಗಳಿಗೆ ಸಮರ್ಪಕ ವ್ಯವಸ್ಥೆ ಕಲ್ಪಿಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ನಲಿನ್ ಅತುಲ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಶ್ರೀ ಹುಲಿಗೆಮ್ಮ ದೇವಿ ವಾರ್ಷಿಕ ಜಾತ್ರಾ ಮಹೋತ್ಸವ ಮೇ 13ರಂದು ಪ್ರಾರಂಭವಾಗಲಿದೆ. ಮಹಾರಥೋತ್ಸವ ಮೇ 21ರಂದು ಸಂಜೆ 5.30ಕ್ಕೆ ನಡೆಯಲಿದೆ. ಜಾತ್ರೆಯ ಪ್ರಯುಕ್ತ ಮೇ 13ರಿಂದ 24 ರ ತನಕ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ.
ಜಿಲ್ಲಾಧಿಕಾರಿ ನಲಿನ್ ಅತುಲ್ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಕೊಪ್ಪಳ ಜಿಲ್ಲೆಯ ಹುಲಿಗಿ ಗ್ರಾಮದ ಶ್ರೀ ಹುಲಿಗೆಮ್ಮ ದೇವಿ ದೇವಾಲಯದ 2025ರ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಸಂಸದರು ಮತ್ತು ಶಾಸಕರ ಉಪಸ್ಥಿತಿಯಲ್ಲಿ ಪೂರ್ವಭಾವಿ ಸಭೆಯನ್ನು ನಡೆಸಿದರು. ಪ್ರಸಿದ್ಧ ಧಾರ್ಮಿಕ ಕ್ಷೇತ್ರವದ ಹುಲಿಗಿಯ ಶ್ರೀ ಹುಲಿಗೆಮ್ಮ ದೇವಿ ಜಾತ್ರಾ ಮಹೋತ್ಸವ ಪ್ರಾರಂಭವಾಗಲಿದ್ದು, ಜಾತ್ರೆಗೆ ಬರುವ ಭಕ್ತಾಧಿಗಳಿಗೆ ಸಮರ್ಪಕ ವ್ಯವಸ್ಥೆ ಕಲ್ಪಿಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದರು.

ಹುಲಿಗಿ ಕ್ಷೇತ್ರಕ್ಕೆ ಆಗಮಿಸುವ ಭಕ್ತರಿಗೆ ಕುಡಿಯುವ ನೀರು, ನೆರಳಿನ ವ್ಯವಸ್ಥೆ, ವಾಹನ ನಿಲುಗಡೆ ವ್ಯವಸ್ಥೆ ಕಲ್ಪಿಸಬೇಕು. ಸಂಪರ್ಕ ರಸ್ತೆ ಹಾಗೂ ಬೈಪಾಸ್ ರಸ್ತೆಗಳನ್ನು ಸರಿಪಡಿಸಬೇಕು. ತಾತ್ಕಾಲಿಕವಾಗಿ ಸಾಮೂಹಿಕ ಸ್ನಾನದ ಗೃಹಗಳ ಮತ್ತು ಶೌಚಾಲಯಗಳ ವ್ಯವಸ್ಥೆಯನ್ನು ಸಹ ಕಲ್ಪಿಸಿಕೊಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜಾತ್ರಾ ಅವಧಿಯಲ್ಲಿ ನಿರಂತರ ವಿದ್ಯುತ್ ಸರಬರಾಜು, ದೇವಸ್ಥಾನದ ಗುಡಿ-ಗೋಪುರಗಳಿಗೆ ವಿದ್ಯುತ್ ಅಲಂಕಾರ ಮತ್ತು ಬೆಳಕಿನ ವ್ಯವಸ್ಥೆಯನ್ನು ಮಾಡಬೇಕು. ಸಿಸಿ ಕ್ಯಾಮರಾ ವ್ಯವಸ್ಥೆ ಸೇರಿದಂತೆ ಅಗತ್ಯ ಪೊಲೀಸ್ ಬಂದೋಬಸ್ತ್, ತುಂಗಭದ್ರಾ ಅಣೆಕಟ್ಟೆಯಿಂದ ನದಿಗೆ ನೀರು ಬಿಡುವ ಕುರಿತು ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಜಾತ್ರೆಗೆ ವಿವಿಧೆಡೆಯಿಂದ ಭಕ್ತಾಧಿಗಳು ಆಗಮಿಸಲಿದ್ದು ಕೆಕೆಆರ್‌ಟಿಸಿ ಹೆಚ್ಚಿನ ಸಂಖ್ಯೆಯ ಬಸ್ ವ್ಯವಸ್ಥೆಯನ್ನು ಕಲ್ಪಿಸಿಕೊಡಬೇಕು. ಬಸ್‌ಗಳ ಮೇಲೆ ಜಿಲ್ಲೆಯ ಪ್ರವಾಸೋದ್ಯಮ ಸ್ಥಳಗಳ ಜಾಗೃತಿ ಪೋಸ್ಟರ್‌ಗಳನ್ನು ಅಂಟಿಸಬೇಕು. ಜಾತ್ರಾ ಸಮಯದಲ್ಲಿ ತಡೆ ರಹಿತ ರೈಲುಗಳನ್ನು ಮುನಿರಾಬಾದ್ ರೈಲು ನಿಲ್ದಾಣದಲ್ಲಿ ನಿಲುಗಡೆ ಮತ್ತು ಗೂಡ್ಸ್ ರೈಲುಗಳ ಸಂಚಾರಕ್ಕೆ ತಾತ್ಕಾಲಿಕ ತಡೆ ಕುರಿತಂತೆ ಹುಬ್ಬಳ್ಳಿ ರೈಲ್ವೆಗೆ ಪತ್ರ ಬರೆದು ಕ್ರಮ ಕೈಗೊಳ್ಳಬೇಕು ಎಂದರು.
ಜಾತ್ರೆಯಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ದೇವಾಲಯಕ್ಕೆ ಎಲ್ಲಾ ರೀತಿಯ ಸಹಕಾರವನ್ನು ಹುಲಿಗಿ ಗ್ರಾಮ ಪಂಚಾಯಿತಿಯಿಂದ ನೀಡಬೇಕು. ದೇವಾಲಯಕ್ಕೆ ಹೋಗುವ ರಸ್ತೆಯ ಮೇಲೆ ಅಂಗಡಿ ಮುಂಗಟ್ಟುಗಳನ್ನು ಇಡದಂತೆ ಕ್ರಮ ಕೈಗೊಳ್ಳಿ. ಜಾತ್ರಾ ಅವಧಿಯಲ್ಲಿ ಯಾವುದೇ ರೀತಿಯ ಪ್ರಾಣಿಬಲಿಯಾಗದಂತೆ ನೋಡಿಕೊಳ್ಳಬೇಕು. ಅಲ್ಲದೇ ಜಾತ್ರಾ ಸಮಯದಲ್ಲಿ ಮದ್ಯಪಾನವನ್ನು ಸಹ ನಿಷೇಧಿಸುವ ಕುರಿತಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಹೇಳಿದರು.
ಮಹಾರಥಕ್ಕೆ ಲೋಕೋಪಯೋಗಿ ಇಲಾಖೆಯಿಂದ ಅರ್ಹತಾ ಪ್ರಮಾಣಪತ್ರ ಪಡೆಯಬೇಕಾಗಿದ್ದು, ಈ ನಿಟ್ಟಿನಲ್ಲಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು. ಜಾತ್ರಾ ಸಮಯದಲ್ಲಿ ಅಗ್ನಿಶಾಮಕ ವಾಹನವನ್ನು ಕಾಯ್ದಿರಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಕೊಪ್ಪಳ ಸಂಸದ ಕೆ. ರಾಜಶೇಖರ ಬಸವರಾಜ ಹಿಟ್ನಾಳ ಮಾತನಾಡಿ, ಶ್ರೀ ಹುಲಿಗೆಮ್ಮ ದೇವಿ ಜಾತ್ರೆಗೆ ನಮ್ಮ ರಾಜ್ಯದ ವಿವಿಧ ಜಿಲ್ಲೆಗಳ ಮತ್ತು ಪಕ್ಕದ ರಾಜ್ಯಗಳಿಂದ ಲಕ್ಷಾಂತರ ಭಕ್ತಾಧಿಗಳು ಆಗಮಿಸಲಿದ್ದು, ಅವರಿಗೆ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ಜನಸಂದಣಿ ಸಂದರ್ಭದಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಸಮಸ್ಯೆಯಾಗಬಹುದು. ಇದರ ಬದಲಿಗೆ ದೇವಾಲಯದ ಸುತ್ತಮುತ್ತಲಿನಲ್ಲಿರುವ ಬೋರ್‌ವೆಲ್‌ಗಳ ಮೂಲಕ ನೀರು ಪೂರೈಕೆಗೆ ಕ್ರಮ ಕೈಗೊಳ್ಳಿ ಎಂದರು.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ವಿಶೇಷ ಬಸ್‌ಗಳ ಸಂಖ್ಯೆಯನ್ನು ಹೆಚ್ಚಿಸಬೇಕು. ಬಸ್ ಸಂಚಾರಕ್ಕೆ ಗುರುತಿಸಲಾದ ಮಾರ್ಗವನ್ನು ಮುಂಚಿತವಾಗಿ ಪರೀಕ್ಷಿಸಿಕೊಂಡು ವಾಹನ ಚಾಲಕರಿಗೆ ಮಾಹಿತಿ ನೀಡಬೇಕು ಎಂದು ಸೂಚನೆ ಕೊಟ್ಟರು.
ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಮಾತನಾಡಿ, ಅತ್ಯಂತ ವಿಜೃಂಭಣೆಯಿಂದ ನಡೆಯಲಿರುವ ಸುಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶ್ರೀ ಹುಲಿಗೆಮ್ಮ ದೇವಿ ಜಾತ್ರೆಯಲ್ಲಿ ಕಳೆದ ಬಾರಿಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವ ನಿರೀಕ್ಷೆಯಿದ್ದು, ಭಕ್ತಾಧಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಜೊತೆಗೆ ಜಾತ್ರೆಯನ್ನು ಸುವ್ಯವಸ್ಥಿತವಾಗಿ ಹಮ್ಮಿಕೊಳ್ಳಲು ಕ್ರಮ ಕೈಗೊಳ್ಳಿ ಎಂದು ತಿಳಿಸಿದರು.
ಜಾತ್ರಾ ಮಹೋತ್ಸವ ಸಂದರ್ಭದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕಾಗಿದ್ದು, ರಸ್ತೆಗಳ ಸ್ವಚ್ಛತೆಗೆ ಕೊಪ್ಪಳ ನಗರಸಭೆ ಮತ್ತು ತಾಲ್ಲೂಕು ಪಂಚಾಯತ್ ವತಿಯಿಂದ ಸ್ವಚ್ಛತಾ ಯಂತ್ರಗಳನ್ನು ಪೂರೈಸುವುದರ ಮೂಲಕ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
-
ಏರ್ ಕೂಲರ್ vs ಏರ್ ಕಂಡಿಷನರ್: ಬೇಸಿಗೆಯಲ್ಲಿ ನಿಮ್ಮ ಸರಿಯಾದ ಆಯ್ಕೆ ಯಾವುದು? -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು?












Click it and Unblock the Notifications