ಕೊಪ್ಪಳ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿದ್ದಗಂಗಾ ಶ್ರೀ ಲಿಂಗೈಕ್ಯ : ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆಯಲ್ಲಿ ಬದಲಾವಣೆ ಇಲ್ಲ

|
Google Oneindia Kannada News

ಕೊಪ್ಪಳ, ಜನವರಿ 21 : ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳ ನಿಧನದ ಹಿನ್ನಲೆಯಲ್ಲಿ ಕೊಪ್ಪಳದ ಇತಿಹಾಸ ಪ್ರಸಿದ್ಧ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವಕ್ಕೆ ಯಾವುದೇ ತೊಂದರೆ ಇಲ್ಲ. ಪೂರ್ವ ನಿಗದಿಯಂತೆ ಮಂಗಳವಾರ ಜಾತ್ರೆಗೆ ಚಾಲನೆ ಸಿಗಲಿದೆ.

ಸಿದ್ದಗಂಗಾಶ್ರೀಗಳು ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಕೊಪ್ಪಳ ಜಾತ್ರೆಯ ಕುರಿತು ಭಕ್ತರಲ್ಲಿ ಹಲವು ಅನುಮಾನಗಳು ಸೃಷ್ಟಿಯಾಗಿದ್ದವು . ಅದನ್ನು ನಿವಾರಿಸುವಂತೆ ಗವಿಸಿದ್ದೇಶ‍್ವರ ಸ್ವಾಮಿಗಳು ಹೇಳಿಕೆಯನ್ನು ನೀಡಿದ್ದಾರೆ.

22ರಿಂದ ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆ22ರಿಂದ ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆ

ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ, ಕಾರ್ಯಕ್ರಮಗಳು ಯಥಾಪ್ರಕಾರ ನಡೆಯಲಿವೆ. ಯಾವುದೇ ಬದಲಾವಣೆಗಳು ಇರುವುದಿಲ್ಲ. ಜಾತ್ರಾ ಕಾರ್ಯಕ್ರಮದಲ್ಲಿ ಸಿದ್ದಗಂಗಾಶ್ರೀಗಳಿಗೆ ಶ್ರದ್ದಾಂಜಲಿ ಸಲ್ಲಿಸಲಾಗುತ್ತದೆ ಎಂದು ಹೇಳಿದ್ದಾರೆ.

ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿಗಳ ಬದುಕಿನ ಹಾದಿತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿಗಳ ಬದುಕಿನ ಹಾದಿ

Sri Gavisiddeshwara jatra

ಮರಣವೇ ಮಹಾನವಮಿ ಶರಣರ ಬದುಕನ್ನು ಮರಣದಲ್ಲಿ ಕಾಣು ಎನ್ನಲಾಗುತ್ತದೆ ಹೀಗಾಗಿ ಜಾತ್ರೆಯ ಕಾರ್ಯಕ್ರಮಗಳು ಯಥಾ ಪ್ರಕಾರ ನಡೆಯಲಿವೆ ಎಂದು ಗವಿಸಿದ್ದೇಶ್ವರ ಸ್ವಾಮಿಗಳು ತಿಳಿಸಿದ್ದಾರೆ.

ಕರ್ನಾಟಕಾದ್ಯಂತ ಎಲ್ಲಾ ಸರ್ಕಾರಿ ಶಾಲೆ, ಕಾಲೇಜುಗಳಿಗೆ ನಾಳೆ ರಜೆಕರ್ನಾಟಕಾದ್ಯಂತ ಎಲ್ಲಾ ಸರ್ಕಾರಿ ಶಾಲೆ, ಕಾಲೇಜುಗಳಿಗೆ ನಾಳೆ ರಜೆ

ಇತಿಹಾಸ ಪ್ರಸಿದ್ಧ ಗವಿ ಸಿದ್ದೇಶ್ವರ ಜಾತ್ರಾ ಮಹೋತ್ಸವ ಜನವರಿ 22 ರಿಂದ 24ರ ತನಕ ನಡೆಯಲಿದೆ. ಜಿಲ್ಲೆ, ದೇಶ, ಜಾತಿ ಎಲ್ಲಾ ಗಡಿಗಳನ್ನು ಮೀರಿ ಗವಿಸಿದ್ದೇಶ್ವರ ಜಾತ್ರೆ ಪ್ರಸಿದ್ಧಿ ಪಡೆದಿದೆ. ಲಕ್ಷಾಂತರ ಜನರು ಮೂರು ದಿನಗಳ ಜಾತ್ರೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.

ಲಕ್ಷಾಂತರ ಜನರು ಪಾಲ್ಗೊಳ್ಳುವ ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆಯನ್ನು ದಕ್ಷಿಣದ ಮಹಾಕುಂಭಮೇಳ ಎಂದು ಕರೆಯಲಾಗುತ್ತದೆ. ಅನ್ನದ ಜಾತ್ರೆ ಎಂದೂ ಇದನ್ನು ಕರೆಯಲಾಗುತ್ತದೆ. ಜಾತ್ರೆಗೆ ಬಂದವರು ಹಸಿದ ಹೊಟ್ಟೆಯಲಿ ಹೋಗದಂತೆ ಎಲ್ಲರಿಗೂ ಪ್ರಸಾದ ವಿತರಣೆ ಮಾಡಲಾಗುತ್ತದೆ.

English summary
There is no change in three-day Sri Gavisiddeshwara Jatra in Koppal after Siddaganaga mutt Sivakumara Swamiji death. Jatra will be held from January 22 to 24, 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X