ಕೊಪ್ಪಳ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊಪ್ಪಳ : ವಿದ್ಯಾರ್ಥಿಗಳ ಕುಟುಂಬಕ್ಕೆ 5 ಲಕ್ಷ ಪರಿಹಾರ

|
Google Oneindia Kannada News

ಬೆಂಗಳೂರು, ಆಗಸ್ಟ್ 18 : ಕೊಪ್ಫಳದಲ್ಲಿ ವಿದ್ಯುತ್ ಸ್ಪರ್ಶಿಸಿ ಐವರು ವಿದ್ಯಾರ್ಥಿಗಳು ಮೃತಪಟ್ಟ ಪ್ರಕರಣದ ಕುರಿತು ತನಿಖೆಗೆ ಆದೇಶಿಸಲಾಗಿದೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ವಿದ್ಯಾರ್ಥಿಗಳ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಿದ್ದಾರೆ.

ಭಾನುವಾರ ಬೆಳಗ್ಗೆ ಕೊಪ್ಪಳ ನಗರದ ದೇವರಾಜ ಅರಸು ಬಿಸಿಎಂ ಹಾಸ್ಟೆಲ್‌ನಲ್ಲಿ ಧ್ವಜದ ಕಂಬ ತೆರವುಗೊಳಿಸುವಾಗ ವಿದ್ಯುತ್ ಸ್ಪರ್ಶಿಸಿ ಐವರು ವಿದ್ಯಾರ್ಥಿಗಳು ಮೃತಪಟ್ಟಿದ್ದರು. ಘಟನೆಗೆ ಸಂಬಂಧಿಸಿದಂತೆ ಹಾಸ್ಟೆಲ್ ವಾರ್ಡನ್ ವಶಕ್ಕೆ ಪಡೆಯಲಾಗಿದೆ.

ಕೊಪ್ಪಳ : ವಿದ್ಯುತ್ ಸ್ಪರ್ಶ, ಹಾಸ್ಟೆಲ್‌ನಲ್ಲಿ 5 ವಿದ್ಯಾರ್ಥಿಗಳು ಬಲಿ ಕೊಪ್ಪಳ : ವಿದ್ಯುತ್ ಸ್ಪರ್ಶ, ಹಾಸ್ಟೆಲ್‌ನಲ್ಲಿ 5 ವಿದ್ಯಾರ್ಥಿಗಳು ಬಲಿ

ಮುಖ್ಯಮಂತ್ರಿ ಯಡಿಯೂರಪ್ಪ ಕೊಪ್ಪಳ ಜಿಲ್ಲೆಯ ವಸತಿ ನಿಲಯದಲ್ಲಿ ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಐವರು ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ 5 ಲಕ್ಷ. ರೂ‌ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಕರ್ನಾಟಕದಲ್ಲಿ ವಿದ್ಯುತ್ ದರ ಹೆಚ್ಚಳ : ಎಲ್ಲಿ, ಎಷ್ಟು ಏರಿಕೆ?ಕರ್ನಾಟಕದಲ್ಲಿ ವಿದ್ಯುತ್ ದರ ಹೆಚ್ಚಳ : ಎಲ್ಲಿ, ಎಷ್ಟು ಏರಿಕೆ?

Students Killed In Electrocution : CM announces compensation

ಯಡಿಯೂರಪ್ಪ ಈ ಕುರಿತು ಟ್ವೀಟ್ ಮಾಡಿದ್ದು, "ಕೊಪ್ಪಳದ ಬಿಸಿಎಂ ದೇವರಾಜ ಅರಸು‌‌ ವಿದ್ಯಾರ್ಥಿನಿಲಯದಲ್ಲಿ ವಿದ್ಯುತ್ ಅವಘಡದಲ್ಲಿ ಐವರು ವಿದ್ಯಾರ್ಥಿಗಳು ಮೃತಪಟ್ಟಿರುವುದು ನನಗೆ ತೀವ್ರ ಆಘಾತವನ್ನುಂಟು ಮಾಡಿದೆ. ಈ ದುರ್ಘಟನೆ ಕುರಿತು ಸಮಗ್ರ ತನಿಖೆಗೆ ಅಲ್ಲಿನ ಅಧಿಕಾರಿಗಳಿಗೆ ಆದೇಶಿಸಿರುವೆ. ಮೃತರ ಕುಟುಂಬಕ್ಕೆ ಸೋಮವಾರವೇ ಸೂಕ್ತ ಪರಿಹಾರ ನೀಡಲು ಅಧಿಕಾರಿಗಳಿಗೆ ಸೂಚಿಸಿರುವೆ" ಎಂದು ಹೇಳಿದ್ದಾರೆ.

ಬೆಂಗಳೂರಿನ ಕೆಇಎಲ್‌ಗೆ ಬೆಳಗಾವಿಯಿಂದ ವಿದ್ಯುತ್, ಘಟಕ ಆರಂಭಬೆಂಗಳೂರಿನ ಕೆಇಎಲ್‌ಗೆ ಬೆಳಗಾವಿಯಿಂದ ವಿದ್ಯುತ್, ಘಟಕ ಆರಂಭ

ಧ್ವಜಾರೋಹಣ ಮಾಡಲು ಹಾಕಿದ್ದ ಕಬ್ಬಿಣದ ಕಂಬವನ್ನು ಇಂದು ಮುಂಜಾನೆ ತೆರವುಗೊಳಿಸುವಾಗ ಅದು ವಿದ್ಯುತ್ ತಂತಿಗೆ ತಗುಲಿತ್ತು. ಇದರಿಂದಾಗಿ ಒಬ್ಬ ವಿದ್ಯಾರ್ಥಿಗೆ ಶಾಕ್ ಹೊಡೆದಿತ್ತು. ಆತನನ್ನು ರಕ್ಷಣೆ ಮಾಡಲು ಹೋದ ಇತರ ನಾಲ್ವರಿಗೂ ಸಹ ಶಾಕ್ ಹೊಡೆದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಹಾಸ್ಟೆಲ್ ವಾರ್ಡನ್ ನಿರ್ಲಕ್ಯವೇ ಇದಕ್ಕೆ ಕಾರಣ ಎಂದು ಪೋಷಕರು ಹಾಸ್ಟೆಲ್ ಮುಂದೆ ಪ್ರತಿಭಟನೆ ನಡೆಸಿದರು. ಕೊಪ್ಪಳ ನಗರ ಠಾಣೆ ಪೊಲೀಸರು ವಾರ್ಡನ್ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

English summary
Karnataka Chief Minister B.S.Yediyurappa ordered for probe and announced five lakh compensation for the family of students who killed at Devaraj Urs hostel at Koppal due to electrocution.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X