ಕೊಪ್ಪಳ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊಪ್ಪಳದಲ್ಲಿ 50ಕ್ಕೂ ಹೆಚ್ಚು ಕೋವಿಡ್ ಸೋಂಕಿತ ಗರ್ಭಿಣಿಯರಿಗೆ ಯಶಸ್ವಿ ಹೆರಿಗೆ

|
Google Oneindia Kannada News

ಕೊಪ್ಪಳ, ಮೇ 25: ರಾಜ್ಯ ಮತ್ತು ದೇಶದಲ್ಲಿ ಕಳೆದ ಒಂದೂವರೆ ವರ್ಷದಿಂದ ಕೊರೊನಾ ಮಹಾಮಾರಿ ವಕ್ಕರಿಸಿಕೊಂಡಿದ್ದು, ಸಾಮಾನ್ಯ ಹಾಗೂ ಮಧ್ಯಮ ವರ್ಗದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಅದರಲ್ಲಿಯೂ ಕೊರೊನಾ ಸಂಕಷ್ಟದಲ್ಲಿ ಅತಿ ಹೆಚ್ಚು ನೋವು ಅನುಭವಿಸಿದ್ದು ಗರ್ಭಿಣಿಯರು. ಆಸ್ಪತ್ರೆಗಳಲ್ಲಿ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೆ, ವೈದ್ಯರಿಲ್ಲದೆ ಅನೇಕ ಗರ್ಭಿಣಿಯರು ಸಾವನ್ನಪ್ಪಿರುವುದನ್ನು ನಾವು ನೋಡಿದ್ದೇವೆ.

ಇಂತಹ ಸಂದರ್ಭದಲ್ಲಿ ಕೊರೊನಾ ಸೋಂಕಿತ ಗರ್ಭಿಣಿಯರಿಗೆ ಹೆರಿಗೆ ಮಾಡಿಸುವುದೇ ದೊಡ್ಡ ಸಾಹಸದ ಸರಿ. ಆದರೆ ಕೊಪ್ಪಳ ಜಿಲ್ಲೆಯಲ್ಲಿ 50ಕ್ಕೂ ಹೆಚ್ಚು ಕೊರೊನಾ ಸೋಂಕಿತ ಗರ್ಭಿಣಿಯರಿಗೆ ಯಶಸ್ವಿಯಾಗಿ ಹೆರಿಗೆ ಮಾಡಲಾಗಿರುವುದು ಗಮನಾರ್ಹ ಅಂಶವಾಗಿದೆ.

Successful Delivery For More Than 50 Covd-19 Infected Pregnant Women In koppal

50ಕ್ಕೂ ಹೆಚ್ಚು ಕೊರೊನಾ ಸೋಂಕಿತ ಗರ್ಭಿಣಿಯರಿಗೆ ಯಶಸ್ವಿಯಾಗಿ ಹೆರಿಗೆ ಮಾಡಲಾಗಿದ್ದು, ನವಜಾತ ಶಿಶುಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿಲ್ಲ ಎಂದು ಕೊಪ್ಪಳ ಡಿಎಚ್ಒ ಟಿ.ಲಿಂಗರಾಜ್ ಹೇಳಿದ್ದಾರೆ.

ಕೊಪ್ಪಳ ಜಿಲ್ಲೆಯಲ್ಲಿ ಕೊರೊನಾ ವೈರಸ್ ೨ನೇ ಅಲೆಯಲ್ಲಿ 100ಕ್ಕೂ ಹೆಚ್ಚು ಗರ್ಭಿಣಿಯರಿಗೆ ಪಾಸಿಟಿವ್ ಆಗಿತ್ತು. ಇದರಲ್ಲಿ ಕೊಪ್ಪಳ ತಾಲ್ಲೂಕಿನಲ್ಲಿ 33, ಯಲಬುರ್ಗಾ ತಾಲ್ಲೂಕಿನಲ್ಲಿ 45, ಕುಷ್ಟಗಿ ತಾಲ್ಲೂಕಿನಲ್ಲಿ 12 ಹಾಗೂ ಗಂಗಾವತಿ ತಾಲ್ಲೂಕಿನಲ್ಲಿ 32 ಗರ್ಭಿಣಿಯರಿಗೆ ಕೋವಿಡ್ ಸೋಂಕು ಪತ್ತೆಯಾಗಿತ್ತು. ಇದರಲ್ಲಿ 80ಕ್ಕೂ ಹೆಚ್ಚು ಜನ ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರು.

ಇದರಲ್ಲಿ 54 ಮಹಿಳೆಯರ ಹೆರಿಗೆಯನ್ನು ಯಶಸ್ವಿಯಾಗಿ ಮಾಡಲಾಗಿದ್ದು, ಈ ಪೈಕಿ 26 ಜನರಿಗೆ ನಾರ್ಮಲ್ ಡೆಲಿವರಿ, 28 ಸಿಜರಿನ್ ಆಗಿವೆ. ಇದುವರೆಗೂ ಯಾವುದೇ ಸಾವು ಸಂಭವಿಸಿಲ್ಲ. ಇದು ಸಂತಸದ ವಿಷಯ ಎಂದು ಹೆರಿಗೆ ವಿಭಾಗದ ಮುಖ್ಯಸ್ಥರಿಗೆ ಡಿಎಚ್ಒ ಧನ್ಯವಾದ ಸಲ್ಲಿಸಿದ್ದಾರೆ.

ಹೆರಿಗೆಯಾದ ಮಕ್ಕಳಲ್ಲಿ ಕೊರೊನಾ ಸೋಂಕಿಲ್ಲ

Recommended Video

Ramesh Jarakiholi ಪ್ರಕರಣದ ಸಂತ್ರಸ್ತ ಯುವತಿ ರಹಸ್ಯ ಬಯಲು | Oneindia Kannada

ಸದ್ಯ 54 ಮಹಿಳೆಯರ ಹೆರಿಗೆಯನ್ನು ಯಶಸ್ವಿಯಾಗಿ ಮಾಡಲಾಗಿದ್ದು, ಹೆರಿಗೆಯಾದ ಮಕ್ಕಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿಲ್ಲ. ಆದರೆ ಬೇರೆ ಬೇರೆ ಜಿಲ್ಲೆಯಲ್ಲಿ ಹೆರಿಗೆಯಾದ ಬಳಿಕ ಐದು ಜನರಿಗೆ ಪಾಸಿಟಿವ್ ಆಗಿದೆ. ಅವರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಮಕ್ಕಳಿಗೆ ವಿಶೇಷ ಶಿಶು ತೀವ್ರ ಘಟಕದಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ. ಅವರಲ್ಲೂ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದ ಕೊಪ್ಪಳ ಡಿಎಚ್ಒ ಟಿ.ಲಿಂಗರಾಜ್ ತಿಳಿಸಿದ್ದಾರೆ.

English summary
More than 50 Covid-19 infected pregnant women have been successfully delivered in Koppala district, DHO T Lingaraj Said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X