ಕೊಪ್ಪಳದಲ್ಲಿ ವೈದ್ಯ, ದಕ್ಷಿಣ ಕನ್ನಡದಲ್ಲಿ ಯೋಧನಿಗೆ ಟಿಕೆಟ್: ಬಿಜೆಪಿಯಲ್ಲಿ ಹೆಚ್ಚಿದ ಅಸಮಾಧಾನದ ಹೊಗೆ
ಕೊಪ್ಪಳ ಮಾರ್ಚ್ 14: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ ಅಸಲಿ ಆಟ ಈಗ ಶುರುವಾಗಿದೆ. ಬುಧವಾರ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದು ಅಸಮಾಧಾನದ ಹೊಗೆಯನ್ನು ಹೆಚ್ಚಿಸಿದೆ.
ಹೌದು.. ಬಿಜೆಪಿ ಹೈಕಮಾಂಡ್ ಕೆಲ ಲೋಕಸಭಾ ಕ್ಷೇತ್ರಗಳಲ್ಲಿ ಹೊಸ ಮುಖಗಳಿಗೆ ಮಣೆ ಹಾಕಿದ್ದು ಇದು ಕೆಲ ಸಂಸದರ ಕೆಂಗಣ್ಣಿಗೆ ಗುರಿಯಾಗಿದೆ. ಈ ಪಟ್ಟಿ ಹಲವು ಬಿಜೆಪಿ ಟಿಕೆಟ್ ಆಕಾಂಕ್ಷಿಗಳಿಗೆ ನಿರಾಸೆಯಾಗಿದೆ. ಈ ಸಾಲಿನಲ್ಲಿ ಕೊಪ್ಪಳ ಹಾಗೂ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಗಳು ಸೇರಿಕೊಂಡಿವೆ.

ಕೊಪ್ಪಳದಲ್ಲಿ ಹಾಲಿ ಸಂಸದ ಸಂಗಣ್ಣ ಕರಡಿ ಅವರು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಅವರ ಪ್ರಯತ್ನ ಫಲಕೊಡಲಿಲ್ಲ. ಕೊನೆಗೂ ಬಿಜೆಪಿ ಟಿಕೆಟ್ ಅವರಿಗೆ ಕೈತಪ್ಪಿದ್ದು, ಮಾಜಿ ಶಾಸಕ ಕೆ.ಶರವಣ್ಣಪ್ಪ ಅವರ ಪುತ್ರ ಹಾಗೂ ವೈದ್ಯ ಡಾ.ಕೆ.ಬಸವರಾಜ ಅವರಿಗೆ ಟಿಕೆಟ್ ಘೋಷಣೆ ಮಾಡುವ ಮೂಲಕ ಬಿಜೆಪಿ ಅಚ್ಚರಿ ಮೂಡಿಸಿದೆ.
ನಾಲ್ಕು ಬಾರಿ ಶಾಸಕರಾಗಿ ಮತ್ತು ಎರಡು ಬಾರಿ ಬಿಜೆಪಿಯಿಂದಲೇ ಸತತವಾಗಿ ಮತ್ತು ಎರಡು ಬಾರಿ ಬಿಜೆಪಿಯಿಂದಲೇ ಸತತವಾಗಿ ಸಂಸದರಾಗಿದ್ದ ಸಂಗಣ್ಣ ಕರಡಿ ಅವರಿಗೆ ಈ ಬಾರಿಯ ಲೋಕಸಭಾ ಚುನಾವಣೆ ಬಿಜೆಪಿ ಟಿಕೆಟ್ ಕೈ ತಪ್ಪಿದೆ. ಈ ಮೂಲಕ ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮತ್ತೊಂದು ಪ್ರಯೋಗಕ್ಕೆ ಮುಂದಾದಂತೆ ಕಾಣಿಸುತ್ತಿದೆ.
ಈ ಹಿಂದೆಯೂ ಹಾಲಿ ಸಂಸದ ಶಿವರಾಮಗೌಡ ಅವರಿಗೆ ಟಿಕೆಟ್ ತಪ್ಪಿಸಿ, ವಿಧಾನಸಭಾ ಚುನಾವಣೆಯಲ್ಲಿ ಪರಾಭವಗೊಂಡಿದ್ದ ಸಂಗಣ್ಣ ಕರಡಿ ಅವರಿಗೆ ಟಿಕೆಟ್ ನೀಡಲಾಗಿತ್ತು. ಈಗ ಸತತವಾಗಿ ಎರಡು ಬಾರಿ ಗೆಲುವು ಸಾಧಿಸಿದರೂ ಟಿಕೆಟ ತಪ್ಪಿಸಿ, ಮತ್ತೆ ಹೊಸಬರಿಗೆ ಬಿಜೆಪಿ ಅವಕಾಶ ನೀಡಿದೆ.
ಸಂಗಣ್ಣ ಕರಡಿ ಅವರಿಗೆ ಟಿಕೆಟ್ ಕೊಡದಂತೆ ಮನವಿ:
ಜೊತೆಗೆ ಬಿಜೆಪಿ ಟಿಕೆಟ್ ಘೋಷಣೆಗೂ ಮುನ್ನ ಹಾಲಿ ಸಂಸದ ಸಂಗಣ್ಣ ಕರಡಿ ಅವರಿಗೆ ಟಿಕೆಟ್ ಕೊಡದಿರುವಂತೆ ಅನೇಕರು ದೆಹಲಿಗೆ ಹೋಗಿ ಮನವಿ ಮಾಡಿ ಬಂದಿದ್ದು ಕೈಹಿಡಿದಂತೆ ಕಾಣುತ್ತಿದೆ. ಈ ನಡುವೆ ಸಂಸದ ಸಂಗಣ್ಣ ಕರಡಿ ಅವರ ಜೊತೆಗೆ ಮುನಿಸಿಕೊಂಡಿದ್ದವರನ್ನು ಒಗ್ಗೂಡಿಸುವಲ್ಲಿ ಡಾ. ಬಸವರಾಜ ಯಶಸ್ವಿಯಾದರು.
ಅವರನ್ನು ಬಹಿರಂಗವಾಗಿಯೇ ಸಂಸದ ಸಂಗಣ್ಣ ಕರಡಿ ಅವರ ವಿರುದ್ಧ ದೆಹಲಿಯಯವರೆಗೂ ಕರೆದುಕೊಂಡು ಹೋಗಿ, ಹೈಕಮಾಂಡ್ ಮೇಲೆ ಪ್ರಭಾವ ಬೀರುವಲ್ಲಿ ಯಶಸ್ವಿಯಾದರು. ಪರಿಣಾಮ ಇತ್ತೀಚೆಗೆ ಬಿಜೆಪಿಯೊಂದಿಗೆ ಗುರುತಿಸಿಕೊಂಡಿದ್ದ ಡಾ.ಕೆ. ಬಸವರಾಜ ಅವರು ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬಸವರಾಜ ಅವರಿಗೆ ಟಿಕೆಟ್ ಸಿಗುವ ಬಗ್ಗೆ ಮೊದಲೇ ತಿಳಿಸಿದಿದ್ದಂತೆ ಕಂಡು ಬಂದಿದ್ದು, ಅವರು ಕಳೆದ ಆರು ತಿಂಗಳುಗಳಿಮದ ಕ್ಷೇತ್ರದಲ್ಲಿ ಸಕ್ರಿಯರಾಗಿ ಸ್ಥಳೀಯ ನಾಯಕರನ್ನು ವಿಶ್ವಾಸಕ್ಕೆ ಪಡೆಯುವ ಕಾರ್ಯದಲ್ಲಿ ತೊಡಗಿದ್ದಾರೆ. ಆದರೆ ಇದು ಹಾಲಿ ಸಂಸದ ಸಂಗಣ್ಣ ಕರಡಿ ಮುನಿಸಿಗೆ ಕಾರಣವಾಗಿದ್ದು ಅವರ ಮುಂದಿನ ನಡೆ ಏನು ಎನ್ನುವುದನ್ನು ಕಾದು ನೋಡಬೇಕಿದೆ.

ದಕ್ಷಿಣ ಕನ್ನಡದಲ್ಲಿ ಯೋಧನಿಗೆ ಟಿಕೆಟ್
ಇನ್ನೂ ದಕ್ಷಣ ಕನ್ನಡ ಜಿಲ್ಲೆಯಲ್ಲಿ ಯುವ ನಾಯಕ, ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬೃಜೇಶ್ ಚೌಟ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. 2009ರಿಂದ ಕ್ಷೇತ್ರದ ಸಂಸದರಾಗಿರುವ, ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‌ಗೆ ಬಿಜೆಪಿ ಟಿಕೆಟ್ ನಿರಾಕರಿಸಿದ್ದು ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿಯಾಗಿ ಕ್ಯಾಪ್ಟನ್ ಬೃಜೇಶ್ ಚೌಟ ಅವರಿಗೆ ಟಿಕೆಟ್ ನೀಡಿದೆ.
ಈ ಬಾರಿ ಲೋಕಸಭೆ ಅಭ್ಯರ್ಥಿ ಬದಲಾವಣೆ ಆಗಲೇಬೇಕೆಂದು ಪಕ್ಷದ ಕಾರ್ಯಕರ್ತರು ಅಭಿಯಾನ ಕೈಗೊಂಡಿದ್ದರು. ಕಾರ್ಯಕರ್ತರ ಮಾತಿಗೆ ಓಗೊಟ್ಟ ಬಿಜೆಪಿ ಹೈಕಮಾಂಡ್ ಯುವ ನಾಯಕ 42 ವರ್ಷದ ಚೌಟರನ್ನು ಅಭ್ಯರ್ಥಿಯಾಗಿಸಿದೆ. ಚೌಟ ಭಾರತೀಯ ಭೂಸೇನೆಯಲ್ಲಿ ಕ್ಯಾಪ್ಟನ್ ಆಗಿ ಸ್ವಯಂ ನಿವೃತ್ತಿ ಪಡೆದು ಸಮಾಜ ಸೇವೆಗೆ ಇಳಿದಿದ್ದಾರೆ. ಚೌಟ ಕಾಲೇಜು ದಿನಗಳಲ್ಲಿಯೇ ಎನ್‌ಸಿಸಿಯಲ್ಲಿ ತೊಡಗಿಕೊಂಡಿದ್ದರು. ಬಳಿಕ ಭಾರತೀಯ ಭೂಸೇನೆ ಸೇರಿದ್ದರು. ಚೌಟ ಅವರು ಪಕ್ಷ ಚಟುವಟಿಕೆ ಜೊತೆಗೆ ಸಮರ್ಥನ್ ಫೌಂಡೇಶನ್ ಮೂಲಕ ಮಂಗಳೂರಿನಲ್ಲಿ ಸಾಮಾಜಿಕ ಸೇವಾ ಚಟುವಟಿಕೆಯಲ್ಲಿ ಮುಂಚೂಣಿಯಲ್ಲಿದ್ದಾರೆ.
ಆದರೆ ಇದು ನಳಿನ್ ಕುಮಾರ್ ಕಟೀಲ್‌ಗೆ ಭಾರೀ ಬೇಸರ ತಂದಿದೆ. ನಿರೀಕ್ಷೆಯಂತೆ ಅವರಿಗೆ ಬಿಜೆಪಿ ಹೈಕಮಾಂಡ್ ಕೈಹಿಡಿಯಲಿಲ್ಲ. ಇದರಿಂದ ಅವರ ಮುಂದಿನ ನಡೆ ಬದಲಾಗಬಹುದು ಎನ್ನಲಾಗುತ್ತಿದೆ.
-
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election












Click it and Unblock the Notifications