ಮರಾಠ ಅಭಿವೃದ್ಧಿ ನಿಗಮ ಏಕೆ; ಯಡಿಯೂರಪ್ಪಗೆ ವಾಟಾಳ್ ಪ್ರಶ್ನೆ
ಕೊಪ್ಪಳ, ನವೆಂಬರ್ 24 : "ಮರಾಠ ಅಭಿವೃದ್ಧಿ ನಿಗಮ ರಚನೆಗೆ ಕಾರಣವೇನು? ಎಂದು ಸರ್ಕಾರ ಸ್ಪಷ್ಟಪಡಿಸಬೇಕು" ಎಂದು ಕನ್ನಡದ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಕರ್ನಾಟಕ ಸರ್ಕಾರವನ್ನು ಪ್ರಶ್ನಿಸಿದರು.
ಮಂಗಳವಾರ ವಾಟಾಳ್ ನಾಗರಾಜ್ ಕೊಪ್ಪಳ ರಾಷ್ಟ್ರೀಯ ಹೆದ್ದಾರಿ ಹಿಟ್ನಾಳ್ ಟೋಲ್ ಬಳಿ ಹೆದ್ದಾರಿ ತಡೆದು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ಕನ್ನಡದ ಒಕ್ಕೂಟದ ಸಾ. ರಾ. ಗೋವಿಂದು, ಕೊಪ್ಪಳ ವಿಜಯ, ವಿರೂಪಾಕ್ಷ ಗೌಡ ಮುಂತಾದವರು ಜೊತೆಗಿದ್ದರು.
ಮಾಧ್ಯಮಗಳ ಜೊತೆ ಮಾತನಾಡಿದ ವಾಟಾಳ್ ನಾಗರಾಜ್, "ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ಈಗ ನಿಗಮ ಎಂದು ಮಾಡಿದ್ದೀರಿ. ನಿಗಮ ರಚನೆ ಮಾಡುವ ಉದ್ದೇಶವೇನು ಎಂದು ಸರ್ಕಾರ ಸ್ಪಷ್ಟಪಡಿಸಬೇಕು" ಎಂದು ಒತ್ತಾಯಿಸಿದರು.

"ಒಂದು ಕಡೆ ಎಂಇಎಸ್ ಬೆಳಗಾವಿಯಲ್ಲಿ ಪ್ರತಿನಿತ್ಯ ಗೂಂಡಾಗಿರಿ ಮಾಡುತ್ತಿದ್ದಾರೆ. ಶಿವಸೇವೆ ಅವರು ಕಾರವಾರ, ನಿಪ್ಪಾಣಿ ನಮಗೆ ಸೇರಬೇಕು ಎಂದು ಹೇಳುತ್ತಿದ್ದಾರೆ. ನಿಗಮ ರಚನೆಯಿಂದಾಗಿ ಮುಂದಿನ ದಿನಗಳಲ್ಲಿ ನಾವು ಭಾರಿ ಏಟು ತಿನ್ನಬೇಕಾಗುತ್ತದೆ" ಎಂದು ವಾಟಾಳ್ ನಾಗರಾಜ್ ಹೇಳಿದರು.
"ಯಡಿಯೂರಪ್ಪ ಅವರಿಗೆ ಹೊರನಾಡು ಗೊತ್ತಿಲ್ಲ. ಗಡಿನಾಡು ಗೊತ್ತಿಲ್ಲ. ಸಾಂಸ್ಕೃತಿಕವಾದ ಚಿಂತನೆ ಇಲ್ಲ. ಬಹುಸಂಖ್ಯಾತರಿದ್ದಾರೆ ಎಂದು ನಿಗಮ ಮಾಡಲು ಹೊರಟಿದ್ದಾರೆ. ನಾಳೆ ತಮಿಳರು, ಮಾರ್ವಾಡಿಗಳಿಗೂ ಕೊಡಬೇಕಾಗುತ್ತದೆ" ಎಂದು ಆತಂಕ ವ್ಯಕ್ತಪಡಿಸಿದರು.
"ಡಿಸೆಂಬರ್ 5ರಂದು ಕರೆ ಕೊಟ್ಟಿರುವ ಕರ್ನಾಟಕ ಬಂದ್‌ಗೆ ಸಾವಿರಾರು ಸಂಘಟನೆಗಳು ಬೆಂಬಲ ಘೋಷಣೆ ಮಾಡಿವೆ. ಕನ್ನಡಿಗರು ಬಂದ್‌ಗೆ ಬೆಂಬಲ ನೀಡುತ್ತಾರೆ. ನಾವು ಬಂದ್ ಮಾಡುತ್ತೇವೆ" ಎಂದು ವಾಟಾಳ್ ನಾಗರಾಜ್ ತಿಳಿಸಿದರು.
ಮರಾಠ ಅಭಿವೃದ್ಧಿ ನಿಗಮ ಆದೇಶ ವಾಸಪ್ ಪಡೆಯಬೇಕು ಎಂದು ಒತ್ತಾಯಿಸಿ ಡಿಸೆಂಬರ್ 5ರಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಒಕ್ಕೂಟ ಬಂದ್ ಬಗ್ಗೆ ಈಗಾಗಲೇ ಸಭೆ ನಡೆಸಿದೆ.
ಡಿಸೆಂಬರ್ 5ರಂದು ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯ ತನಕ ಬಂದ್ ನಡೆಸಲಾಗುತ್ತದೆ ಎಂದು ಕನ್ನಡ ಒಕ್ಕೂಟ ಹೇಳಿದೆ. ಬಲವಂತದ ಬಂದ್ ಮಾಡಿದರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿಗಳು ಸಹ ಎಚ್ಚರಿಕೆ ಕೊಟ್ಟಿದ್ದಾರೆ.
-
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ












Click it and Unblock the Notifications