ಕೊಪ್ಪಳ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮರಾಠ ಅಭಿವೃದ್ಧಿ ನಿಗಮ ಏಕೆ; ಯಡಿಯೂರಪ್ಪಗೆ ವಾಟಾಳ್ ಪ್ರಶ್ನೆ

|
Google Oneindia Kannada News

ಕೊಪ್ಪಳ, ನವೆಂಬರ್ 24 : "ಮರಾಠ ಅಭಿವೃದ್ಧಿ ನಿಗಮ ರಚನೆಗೆ ಕಾರಣವೇನು? ಎಂದು ಸರ್ಕಾರ ಸ್ಪಷ್ಟಪಡಿಸಬೇಕು" ಎಂದು ಕನ್ನಡದ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಕರ್ನಾಟಕ ಸರ್ಕಾರವನ್ನು ಪ್ರಶ್ನಿಸಿದರು.

ಮಂಗಳವಾರ ವಾಟಾಳ್ ನಾಗರಾಜ್ ಕೊಪ್ಪಳ ರಾಷ್ಟ್ರೀಯ ಹೆದ್ದಾರಿ ಹಿಟ್ನಾಳ್ ಟೋಲ್ ಬಳಿ ಹೆದ್ದಾರಿ ತಡೆದು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ಕನ್ನಡದ ಒಕ್ಕೂಟದ ಸಾ. ರಾ. ಗೋವಿಂದು, ಕೊಪ್ಪಳ ವಿಜಯ, ವಿರೂಪಾಕ್ಷ ಗೌಡ ಮುಂತಾದವರು ಜೊತೆಗಿದ್ದರು.

ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಖಂಡಿಸಿ ಕರ್ನಾಟಕ ಬಂದ್ ಕರೆ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಖಂಡಿಸಿ ಕರ್ನಾಟಕ ಬಂದ್ ಕರೆ

ಮಾಧ್ಯಮಗಳ ಜೊತೆ ಮಾತನಾಡಿದ ವಾಟಾಳ್ ನಾಗರಾಜ್, "ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ಈಗ ನಿಗಮ ಎಂದು ಮಾಡಿದ್ದೀರಿ. ನಿಗಮ ರಚನೆ ಮಾಡುವ ಉದ್ದೇಶವೇನು ಎಂದು ಸರ್ಕಾರ ಸ್ಪಷ್ಟಪಡಿಸಬೇಕು" ಎಂದು ಒತ್ತಾಯಿಸಿದರು.

ಡಿಸೆಂಬರ್ 5ಕ್ಕೆ ಕರ್ನಾಟಕ ಬಂದ್: ಏನಿರುತ್ತೆ, ಏನಿರಲ್ಲ? ಡಿಸೆಂಬರ್ 5ಕ್ಕೆ ಕರ್ನಾಟಕ ಬಂದ್: ಏನಿರುತ್ತೆ, ಏನಿರಲ್ಲ?

Why Maratha Development Board Asked Vatal Nagaraj

"ಒಂದು ಕಡೆ ಎಂಇಎಸ್ ಬೆಳಗಾವಿಯಲ್ಲಿ ಪ್ರತಿನಿತ್ಯ ಗೂಂಡಾಗಿರಿ ಮಾಡುತ್ತಿದ್ದಾರೆ. ಶಿವಸೇವೆ ಅವರು ಕಾರವಾರ, ನಿಪ್ಪಾಣಿ ನಮಗೆ ಸೇರಬೇಕು ಎಂದು ಹೇಳುತ್ತಿದ್ದಾರೆ. ನಿಗಮ ರಚನೆಯಿಂದಾಗಿ ಮುಂದಿನ ದಿನಗಳಲ್ಲಿ ನಾವು ಭಾರಿ ಏಟು ತಿನ್ನಬೇಕಾಗುತ್ತದೆ" ಎಂದು ವಾಟಾಳ್ ನಾಗರಾಜ್ ಹೇಳಿದರು.

ಮರಾಠ ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ ರು ಘೋಷಣೆ ಮರಾಠ ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ ರು ಘೋಷಣೆ

"ಯಡಿಯೂರಪ್ಪ ಅವರಿಗೆ ಹೊರನಾಡು ಗೊತ್ತಿಲ್ಲ. ಗಡಿನಾಡು ಗೊತ್ತಿಲ್ಲ. ಸಾಂಸ್ಕೃತಿಕವಾದ ಚಿಂತನೆ ಇಲ್ಲ. ಬಹುಸಂಖ್ಯಾತರಿದ್ದಾರೆ ಎಂದು ನಿಗಮ ಮಾಡಲು ಹೊರಟಿದ್ದಾರೆ. ನಾಳೆ ತಮಿಳರು, ಮಾರ್ವಾಡಿಗಳಿಗೂ ಕೊಡಬೇಕಾಗುತ್ತದೆ" ಎಂದು ಆತಂಕ ವ್ಯಕ್ತಪಡಿಸಿದರು.

"ಡಿಸೆಂಬರ್ 5ರಂದು ಕರೆ ಕೊಟ್ಟಿರುವ ಕರ್ನಾಟಕ ಬಂದ್‌ಗೆ ಸಾವಿರಾರು ಸಂಘಟನೆಗಳು ಬೆಂಬಲ ಘೋಷಣೆ ಮಾಡಿವೆ. ಕನ್ನಡಿಗರು ಬಂದ್‌ಗೆ ಬೆಂಬಲ ನೀಡುತ್ತಾರೆ. ನಾವು ಬಂದ್ ಮಾಡುತ್ತೇವೆ" ಎಂದು ವಾಟಾಳ್ ನಾಗರಾಜ್ ತಿಳಿಸಿದರು.

ಮರಾಠ ಅಭಿವೃದ್ಧಿ ನಿಗಮ ಆದೇಶ ವಾಸಪ್ ಪಡೆಯಬೇಕು ಎಂದು ಒತ್ತಾಯಿಸಿ ಡಿಸೆಂಬರ್ 5ರಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಒಕ್ಕೂಟ ಬಂದ್ ಬಗ್ಗೆ ಈಗಾಗಲೇ ಸಭೆ ನಡೆಸಿದೆ.

ಡಿಸೆಂಬರ್ 5ರಂದು ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯ ತನಕ ಬಂದ್ ನಡೆಸಲಾಗುತ್ತದೆ ಎಂದು ಕನ್ನಡ ಒಕ್ಕೂಟ ಹೇಳಿದೆ. ಬಲವಂತದ ಬಂದ್ ಮಾಡಿದರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿಗಳು ಸಹ ಎಚ್ಚರಿಕೆ ಕೊಟ್ಟಿದ್ದಾರೆ.

English summary
Kannada Okkuta president Vatal Nagaraj asked Karnataka CM B. S. Yediyurappa why he is setting up Maratha Development Board.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X