ಅಧಿಕಾರ ಶಾಶ್ವತವಲ್ಲ, ಅವಶ್ಯಕತೆ ಬಿದ್ದರೆ ರಾಜೀನಾಮೆಗೂ ಸಿದ್ಧ: ಶಾಸಕ ಪರಣ್ಣ ಮುನವಳ್ಳಿ
ಕೊಪ್ಪಳ, ಜುಲೈ 28: ಭಾರತೀಯ ಜನತಾ ಪಕ್ಷದ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಮಾಡಿರುವುದು ನಮಗೆಲ್ಲಾ ಆಘಾತ ತಂದಿದೆ. ಸಾಮಾನ್ಯ ಕಾರ್ಯಕರ್ತನಾಗಿ ಅವರು ಯಾರೊಂದಿಗೆ ದ್ವೇಷ ಸಾಧಿಸದೇ ಎಲ್ಲರೊಂದಿಗೆ ಅನ್ಯೋನ್ಯವಾಗಿದ್ದರು. ಆದರೆ ಅವರನ್ನು ಕೊಲೆ ಮಾಡುವ ಮೂಲಕ ಹಿಂದೂ ಮನೋಭಾವನೆಯನ್ನು ಹತ್ತಿಕ್ಕುವಂತಹ ಕೆಲಸ ದುಷ್ಕರ್ಮಿಗಳು ಮಾಡುತ್ತಿದ್ದಾರೆ ಎಂದು ಗಂಗಾವತಿ ಬಿಜೆಪಿ ಶಾಸಕ ಪರಣ್ಣ ಮುನವಳ್ಳಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಹಿಂದೆ ಹರ್ಷ, ಈಗ ಪ್ರವೀಣ ಹತ್ಯೆಯಾಗಿದೆ, ಆದರೆ ಮುಂದಿನ ದಿನಗಳಲ್ಲಿ ಇಂತಹ ಅನೇಕ ಪ್ರವೀಣರನ್ನು ನಾವು ಕಳೆದುಕೊಳ್ಳಬಾರದು. ನಮ್ಮಲ್ಲಿ ಇಂಥಹ ಅನೇಕ ಕಾರ್ಯಕರ್ತರಿದ್ದಾರೆ. ಪ್ರವೀಣ್ ಪತ್ನಿ, ತಂದೆ-ತಾಯಿ ಆಕ್ರೋಶ ಹೊರ ಹಾಕಿದ್ದಾರೆ. ನಮ್ಮ ಮನೆಯಲ್ಲಿ ಆದಂತಹ ಘಟನೆ ಬೇರೆ ಮನೆಯಲ್ಲಿ ಹಾಗಬಾರದು ಎಂಬ ಕಳಕಳಿಯಿಂದ ಅವರು ಹೇಳಿದ್ದಾರೆ. ಆದಷ್ಟು ಬೇಗ ಮುಖ್ಯಮಂತ್ರಿಗಳು, ಗೃಹ ಸಚಿವರು ಆರೋಪಿಗಳನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆ ಕೊಡಿಸಬೇಕು ಎಂದು ಮನವಿ ಮಾಡಿಕೊಳ್ಳುತ್ತೇನೆ ಎಂದರು.
ಗಂಗಾವತಿ ಕೂಡ ತುಂಬಾ ಸೂಕ್ಷ್ಮವಾದ ಕ್ಷೇತ್ರವಾಗಿದೆ, ನಾನು ಎರಡು ಬಾರಿ ಶಾಸಕನಾಗಿರುವುದಕ್ಕೆ ಹಿಂದೂ ಮತದಾರರಿಂದಲೇ ಎಂದು ಒತ್ತಿ ಹೇಳುತ್ತೇನೆ . ಇಲ್ಲೂ ನಮ್ಮ ಕಾರ್ಯಕರ್ತರ ಮೇಲೆ ಹಲವಾರು ಪ್ರಕರಣಗಳಿವೆ. ಆದರೆ ಪಕ್ಷದ ಕಾರ್ಯಕರ್ತರಿಗೆ ಏನೇ ತೊಂದರೆಯಾದರೆ ನಮಗೂ ತಡೆದುಕೊಳ್ಳುವ ಶಕ್ತಿಯಿಲ್ಲ. ಆದ್ದರಿಂದ ಅಧಿಕಾರ ಶಾಶ್ವತವಲ್ಲ. ನಮಗೆ ಸಂಘದ ಕಾರ್ಯಕರ್ತರು, ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕಾಗಿರುವುದು ನಮ್ಮ ಕರ್ತವ್ಯ, ಇದಕ್ಕಾಗಿ ಬೇಕಾದರೆ ರಾಜೀನಾಮೆ ನೀಡುವುದಕ್ಕೆ ಸಿದ್ಧನಾಗಿದ್ದೇನೆ ಎಂದು ಹೇಳಲು ಬಯಸುತ್ತೇನೆ ಎಂದು ತಿಳಿಸಿದ್ದಾರೆ.

ಅವಶ್ಯಕತೆಬಿದ್ದರೆ ರಾಜೀನಾಮೆ
ಪಕ್ಷದ ಕಾರ್ಯಕರ್ತರು, ಸಾರ್ವಜನಿಕರಿಗೋಸ್ಕರ ಅವಶ್ಯಕತೆ ಬಿದ್ದರೆ ರಾಜೀನಾಮೆಗೆ ಸಿದ್ಧನಿದ್ದೇನೆ. ಅಧಿಕಾರ ಬರುತ್ತೆ, ಹೋಗುತ್ತೆ, ಅದೇನು ಶಾಶ್ವತವಲ್ಲ. ಗಂಗಾವತಿ ಕೂಡ ಸೂಕ್ಷ್ಮವಾದ ಕ್ಷೇತ್ರ, ಎಲ್ಲಾ ಹಿಂದೂಗಳು ಸೇರಿ ನನ್ನನ್ನು 2 ಬಾರಿ ಗೆಲ್ಲಿಸಿದ್ದಾರೆ. ಇಂತಹ ಘಟನೆಗಳಿಂದ ಪೋಷಕರು ತಮ್ಮ ಮಕ್ಕಳನ್ನು ಹೊರಗೆ ಕಳುಹಿಸುವುದಕ್ಕೆ ಆತಂಕ ವ್ಯಕ್ತಪಡಿಸಿದ್ದಾರೆ. ನಮಗೆ ರಕ್ಷಣೆ ಸಿಗುತ್ತಿಲ್ಲ ಎನ್ನುವ ಭಾವನೆಯಿದೆ, ಈ ಭಯವನ್ನೂ ಹೋಗಲಾಡಿಸಬೇಕಾಗಿರುವುದು ನಮ್ಮಕರ್ತವ್ಯ. ಇದಕ್ಕಾಗಿ ಅಧಿಕಾರ ಹೋದರೂ ಪರವಾಗಿಲ್ಲ ಎಂದು ತಿಳಿಸಿದ್ದಾರೆ.
ಕಂಡಲ್ಲಿ ಗುಂಡಿಟ್ಟುಕೊಲ್ಲಿ
ಪ್ರವೀಣ್ ನೆಟ್ಟಾರು ಹತ್ಯೆ ಮಾಡಿದವರನ್ನು ಕಂಡಲ್ಲಿ ಗುಂಡಿಡಬೇಕು ಎಂದು ಕೊಪ್ಪಳ ಜಿಲ್ಲೆ ಕುಷ್ಟಗಿ ಯುವ ಮೋರ್ಚಾ ತಾಲೂಕು ಅಧ್ಯಕ್ಷ ಉಮೇಶ್ ಯಾದವ ಆಗ್ರಹಿಸಿದ್ದಾರೆ.

ಪ್ರವೀಣ್ ಹತ್ಯೆ ಪ್ರಕರಣದಲ್ಲಿ ಸರಕಾರದ ಮೃದು ಧೋರಣೆ ನನಗೆ ಬಹಳ ನೋವಾಗಿದೆ. ಹಲವಾರು ಕಾರ್ಯಕರ್ತರ ಕೊಲೆಯಾಗಿದೆ. ಅರೋಪಿಗಳನ್ನ ಬಂಧಿಸಿ ಜೈಲಿನಲ್ಲಿ ಇಟ್ರೆ ಸಾಲದು. ಅವರನ್ನು ಕಂಡಲ್ಲಿ ಗುಂಡಿಟ್ಟು ಕೊಲ್ಲಬೇಕು. ಇಲ್ಲದಿದ್ದರೆ ಈಗ ರಾಜೀನಾಮೆ ನೀಡಿರುವ ಬಿಜೆಪಿಯ 800 ಕಾರ್ಯಕರ್ತರು ರಾಜಕೀಯ ನಿವೃತ್ತಿಯಾಗಿ,ಯಾವುದಾದರೂ ಉದ್ಯೋಗ ನೋಡಿಕೊಳ್ಳುತ್ತೇವೆ ಯಾದವ್ ತಿಳಿಸಿದ್ದಾರೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications