ಮುತ್ತುಕೊಟ್ಟ ಕುಷ್ಟಗಿ ತಹಶೀಲ್ದಾರ್ ವಿರುದ್ಧ ದೂರು
ಕೊಪ್ಪಳ, ಆಗಸ್ಟ್ 28 : ಸರ್ಕಾರಿ ಕಚೇರಿಯಲ್ಲೇ ಮಹಿಳೆಗೆ ಮುತ್ತು ಕೊಟ್ಟಿದ್ದ ಕುಷ್ಟಗಿ ತಹಶೀಲ್ದಾರ್ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಮುತ್ತು ಕೊಟ್ಟಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
Recommended Video
ಕೊಪ್ಪಳ ಜಿಲ್ಲೆಯ ಕುಷ್ಟಗಿ ತಹಶೀಲ್ದಾರ್ ಗುರು ಬಸವರಾಜ್ ವಿರುದ್ಧ ನೊಂದ ಮಹಿಳೆ ಕುಷ್ಟಗಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಗ್ರಾಮ ಲೆಕ್ಕಾಧಿಕಾರಿಯಾಗಿರುವ ಮಹಿಳೆ ಹಲವು ಆರೋಪಗಳನ್ನು ದೂರಿನಲ್ಲಿ ಮಾಡಿದ್ದಾಳೆ.
ಗುರು ಬಸವರಾಜ್ ಕುಷ್ಟಗಿಗೆ ಬಂದ ದಿನದಿಂದ ನನ್ನ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ. ಪ್ರತಿನಿತ್ಯ ಫೋನ್ ಮಾಡಿ ಕಿರುಕುಳ ನೀಡುತ್ತಿದ್ದರು. ತನಗೆ ನ್ಯಾಯ ಕೊಡಿಸಿ ಎಂದು ದೂರಿನಲ್ಲಿ ಮನವಿ ಮಾಡಿದ್ದಾರೆ.

ದೂರು ದಾಖಲು ಮಾಡಿಕೊಂಡಿರುವ ಪೊಲೀಸರು ಐಪಿಸಿ ಸೆಕ್ಷನ್ 354 (ಮಹಿಳೆಯರಿಗೆ ಕಿರಿಕಿರಿ ಮಾಡುವುದು), 354 (ಬಿ), 506ರ ಅಡಿಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ತಹಶೀಲ್ದಾರ್‌ಗೆ ನೋಟಿಸ್ ನೀಡುವ ಸಾಧ್ಯತೆ ಇದೆ.
ಎರಡು ತಿಂಗಳ ಹಿಂದೆ ಗುರು ಬವಸರಾಜ್ ಕಚೇರಿಯಲ್ಲಿಯೇ ಗ್ರಾಮ ಲೆಕ್ಕಾಧಿಕಾರಿಯಾಗಿರುವ ಮಹಿಳೆಗೆ ಮುತ್ತು ಕೊಟ್ಟಿದ್ದರು. ಮಂಗಳವಾರ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಬಸವರಾಜ್ ಅವರು ಈಗ ಕುಷ್ಟಗಿಯಿಂದ ವರ್ಗಾವಣೆಗೊಂಡಿದ್ದಾರೆ. ಕೊಪ್ಪಳದ ನಗರಾಭಿವೃದ್ಧಿ ಕೋಶದಲ್ಲಿ ಅವರು ಈಗ ತಹಶೀಲ್ದಾರ್ ಆಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ.












Click it and Unblock the Notifications