ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇಂಗ್ಲೆಂಡ್‌ನ ಬರ್ಮಿಂಗ್‌ಹ್ಯಾಮ್‌ನಲ್ಲಿ ಸ್ಫೋಟ, ಹಲವರಿಗೆ ಗಾಯ

|
Google Oneindia Kannada News

ಲಂಡನ್ ಜೂನ್ 27: ಇಂಗ್ಲೆಂಡ್‌ನ ಬರ್ಮಿಂಗ್‌ಹ್ಯಾಮ್‌ನಲ್ಲಿ ಮಹಾಸ್ಫೋಟದ ಸುದ್ದಿ ಬಂದಿದೆ. ಇಲ್ಲಿ ಸ್ಫೋಟದಿಂದ ಒಂದು ಮನೆ ಸಂಪೂರ್ಣ ಧ್ವಂಸಗೊಂಡಿದ್ದು, ಈ ಸ್ಫೋಟದಲ್ಲಿ ಹಲವು ಮನೆಗಳಿಗೆ ಹಾನಿಯಾಗಿದೆ. ಸ್ಫೋಟದ ವೇಳೆ ಮನೆಯಲ್ಲಿ ಕೆಲವರು ಇದ್ದರು ಎನ್ನಲಾಗುತ್ತಿದೆ. ವರದಿಗಳ ಪ್ರಕಾರ, ಸ್ಫೋಟದಲ್ಲಿ ಹಲವಾರು ಜನರು ಸಾವನ್ನಪ್ಪಿದ್ದಾರೆ, ಕೆಲವರು ಗಾಯಗೊಂಡಿದ್ದಾರೆ. ಘಟನೆಯ ನಂತರ ತುರ್ತು ಸೇವೆಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ. ಕಿಂಗ್ಸ್‌ಸ್ಟಾಂಡಿಂಗ್ ಬರ್ಮಿಂಗ್‌ಹ್ಯಾಮ್‌ನ ದುಲ್ವಿಚ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಘಟನೆಯ ನಂತರ ಪರಿಹಾರ ಮತ್ತು ರಕ್ಷಣಾ ಕಾರ್ಯ ನಡೆಯುತ್ತಿದೆ. ಇದು ಅನಿಲ ಸ್ಪೋಟ ಎಂದು ಹೇಳಲಾಗುತ್ತಿದ್ದು ಇದಕ್ಕೆ ನಿಕರ ಕಾರಣ ತಿಳಿದುಬಂದಿಲ್ಲ.

Birmingham explosion: Man suffers life-threatening injuries- many houses damaged

Recommended Video

Kapil Dev ನಂತರ ಟೀಮ್ ಇಂಡಿಯಾಗೆ ಜಸ್ಪ್ರೀತ್ ಬುಮ್ರಾ ನಾಯಕ | *Cricket | OneIndia Kannada

ಸ್ಫೋಟದ ಸದ್ದು ಎಷ್ಟು ಪ್ರಬಲವಾಗಿದೆಯೆಂದರೆ ಅದು ಹಲವಾರು ಕಿಲೋಮೀಟರ್ ದೂರಕ್ಕೆ ಕೇಳಿಸಿದೆ. ದುಲ್ವಿಚ್ ರಸ್ತೆಯಲ್ಲಿರುವ ಮನೆಯೊಂದರಲ್ಲಿ ಸ್ಫೋಟ ಸಂಭವಿಸಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಗ್ನಿಶಾಮಕ ದಳದ ಹಲವಾರು ವಾಹನಗಳು ಸ್ಥಳದಲ್ಲಿವೆ. ಎಲ್ಲಾ ತುರ್ತು ಸೇವೆಗಳನ್ನು ಘಟನಾ ಸ್ಥಳಕ್ಕೆ ರವಾನಿಸಲಾಗಿದೆ ಎಂದು ವೆಸ್ಟ್ ಮಿಡ್‌ಲ್ಯಾಂಡ್ ಪೊಲೀಸರು ಹೇಳಿಕೆ ನೀಡಿದ್ದಾರೆ. ಆದರೆ, ಸ್ಫೋಟದಲ್ಲಿ ಎಷ್ಟು ಮಂದಿ ಸಾವನ್ನಪ್ಪಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

English summary
News of the explosion has been reported in Birmingham, England. One house was completely destroyed by the explosion and many houses were damaged in the blast.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X