ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಸವಣ್ಣ ಜಗತ್ತಿನ ಮೊಟ್ಟಮೊದಲ ಪ್ರಜಾಪ್ರಭುತ್ವವಾದಿ: ಸಚಿವ ಅಶ್ವತ್ಥ ನಾರಾಯಣ

|
Google Oneindia Kannada News

ಲಂಡನ್, ಮೇ 22: ನಗರದ ಲ್ಯಾಂಬೆತ್‌ನ ಥೇಮ್ಸ್ ನದಿಯ ತಟದಲ್ಲಿರುವ ಬಸವೇಶ್ವರರ ಪ್ರತಿಮೆಗೆ ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಭಾನುವಾರ ಭೇಟಿ ನೀಡಿ, ಗೌರವ ನಮನ ಸಲ್ಲಿಸಿದರು.

ನಮನ ಸಲ್ಲಿಸಿದ ನಂತರ ಮಾತನಾಡಿದ ಅವರು, "ಬಸವಣ್ಣನವರ ತತ್ತ್ವ-ಚಿಂತನೆಗಳಿಂದ ಪ್ರೇರಣೆ ಪಡೆದುಕೊಂಡಿರುವ ಕರ್ನಾಟಕವು ಇನ್ನು 25 ವರ್ಷಗಳಲ್ಲಿ ಸಾಮಾಜಿಕ, ರಾಜಕೀಯ, ಶೈಕ್ಷಣಿಕ ಮತ್ತು ಆರ್ಥಿಕ ಕ್ಷೇತ್ರಗಳಲ್ಲಿ ಜಾಗತಿಕವಾಗಿ ನಾಯಕ ಸ್ಥಾನದಲ್ಲಿ ಪ್ರತಿಷ್ಠಾಪಿತವಾಗಲಿದೆ" ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಲ್ಯಾಪ್‌ಟಾಪ್ ವಿತರಣೆಯಲ್ಲಿ ಅಕ್ರಮ: ಅಶ್ವತ್ಥ ನಾರಾಯಣ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹಲ್ಯಾಪ್‌ಟಾಪ್ ವಿತರಣೆಯಲ್ಲಿ ಅಕ್ರಮ: ಅಶ್ವತ್ಥ ನಾರಾಯಣ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

"2014ರಲ್ಲಿ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ ಈ ಪ್ರತಿಮೆಯು ಇಡೀ ವಿಶ್ವಕ್ಕೇ ಒಂದು ಅಮೂಲ್ಯ ಸಂದೇಶ ಸಾರುತ್ತಿದೆ. ಪ್ರಧಾನಿ ಮೋದಿ ಕೂಡ ಪ್ರಜಾಪ್ರಭುತ್ವದ ಪ್ರಸ್ತಾಪ ಬಂದಾಗಲೆಲ್ಲ ಬಸವಣ್ಣನವರ ಪ್ರಜಾಸತ್ತಾತ್ಮಕ ಪರಿಕಲ್ಪನೆಯಾದ ಅನುಭವ ಮಂಟಪದ ಉಲ್ಲೇಖ ಮಾಡುತ್ತಲೇ ಇರುತ್ತಾರೆ. ಈ ದೃಷ್ಟಿಯಿಂದ ನೋಡಿದರೆ, ಬಸವಣ್ಣನವರು ಜಗತ್ತಿನ ಮೊಟ್ಟಮೊದಲ ಪ್ರಜಾಪ್ರಭುತ್ವವಾದಿ" ಎಂದು ಹೇಳಿದರು.

Minister Ashwath Narayan Paid Tribute to Basaveshwara Statue In London

ಸಮಾಜ ಸುಧಾರಣೆಯ ಹರಿಕಾರ

ಯಾವುದೇ ಸಮಾಜವು ಆರ್ಥಿಕವಾಗಿ ಪ್ರಗತಿ ಸಾಧಿಸಿದರೆ ಸಾಲದು. ಅದರ ಜತೆಯಲ್ಲೇ ಲಿಂಗ ಸಮಾನತೆ, ಸಾಮಾಜಿಕ ಸಮಾನತೆ ಮತ್ತು ನೈತಿಕತೆ ಹಾಗೂ ಮೌಲ್ಯಗಳನ್ನೂ ಸಾಧಿಸಬೇಕು. ಆಗ ಮಾತ್ರ ಮಾನವೀಯ ಸಂಸ್ಕೃತಿ ನೆಲೆಗೊಳ್ಳುತ್ತದೆ ಎನ್ನುವುದು ಬಸವಣ್ಣನವರ ಚಿಂತನೆಯಾಗಿತ್ತು ಎಂದರು.

Minister Ashwath Narayan Paid Tribute to Basaveshwara Statue In London

ಕಾಯಕ, ಜ್ಞಾನ ಮತ್ತು ದಾಸೋಹಗಳಿಗೆ ಪ್ರಾಶಸ್ತ್ಯ ಕೊಡುವ ಮೂಲಕ ಬಸವಣ್ಣನವರು 12ನೇ ಶತಮಾನದಲ್ಲೇ ಉದ್ಯೋಗ, ಶಿಕ್ಷಣ ಮತ್ತು ಆಹಾರ ಭದ್ರತೆಗಳ ಬಗ್ಗೆ ಗಾಢವಾಗಿ ಚಿಂತನೆ ಮಾಡಿದ್ದರು. ಜತೆಗೆ ಸಮಾಜವನ್ನು ಅನಪೇಕ್ಷಿತ ನಿರ್ಬಂಧಗಳಿಂದ ಮುಕ್ತಗೊಳಿಸಲು ಅವರು ಪ್ರಾಮಾಣಿಕವಾಗಿ ಶ್ರಮಿಸಿದವರಾಗಿದ್ದಾರೆ ಎಂದು ಅಶ್ವತ್ಥ ನಾರಾಯಣ ಅಭಿಪ್ರಾಯಪಟ್ಟರು.

ಅಶ್ವತ್ಥ ನಾರಾಯಣ-ಎಂಬಿ ಪಾಟೀಲ್ ಭೇಟಿ: ಬಳಿಕ ಮಾತಿನ ಚಾಟಿ!ಅಶ್ವತ್ಥ ನಾರಾಯಣ-ಎಂಬಿ ಪಾಟೀಲ್ ಭೇಟಿ: ಬಳಿಕ ಮಾತಿನ ಚಾಟಿ!

ಸರಳವಾಗಿ ನಡೆದ ಈ ಕಾರ್ಯಕ್ರಮದಲ್ಲಿ ಲ್ಯಾಂಬೆತ್ ಬಸವೇಶ್ವರ ಪ್ರತಿಷ್ಠಾನದ ಕಾರ್ಯಕಾರಿ ಸಮಿತಿ ಸದಸ್ಯ ಅಭಿಜಿತ್ ಸಾಲೀಮಠ ಮತ್ತು 'ಯುಕೆ ಕನ್ನಡಿಗರು' ಸಂಘಟನೆಯ ಅಧ್ಯಕ್ಷ ಗಣಪತಿ ಭಟ್ ಮುಂತಾದವರು ಹಾಜರಿದ್ದರು.

(ಒನ್ಇಂಡಿಯಾ ಸುದ್ದಿ)

English summary
Karnataka Higher Education Minister Ashwath Narayan paid tribute to Basaveshwara on the banks of the River Thames on Sunday as part of his ongoing UK tour.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X