ಮ್ಯಾಂಚೆಸ್ಟರ್ ಶಾಪಿಂಗ್ ಸೆಂಟರ್ ನಲ್ಲಿ ಐವರಿಗೆ ಇರಿತ, ಒಬ್ಬನ ಬಂಧನ
ಲಂಡನ್, ಅಕ್ಟೋಬರ್ 11: ಮ್ಯಾಂಚೆಸ್ಟರ್ ನ ಜನ ನಿಬಿಡ ಶಾಪಿಂಗ್ ಸೆಂಟರ್ ನಲ್ಲಿ ಶುಕ್ರವಾರ ಹಲವರಿಗೆ ಚಾಕುವಿನಿಂದ ಇರಿಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತುರ್ತು ಸೇವೆಗಳ ಮಾಹಿತಿ ಪ್ರಕಾರ, ಈ ಘಟನೆಯಲ್ಲಿ ಕನಿಷ್ಠ ಐದು ಮಂದಿ ಗಾಯಗೊಂಡಿದ್ದಾರೆ. ಈ ಘಟನೆಯಲ್ಲಿ ಯಾವುದೇ ಸಾವು ಸಂಭವಿಸಿಲ್ಲ ಎಂದು ವರದಿಯಾಗಿದೆ.
ಗ್ರೇಟರ್ ಮ್ಯಾಂಚೆಸ್ಟರ್ ಪೊಲೀಸ್ (ಜಿಎಂಪಿ) ಇಲಾಖೆಯಿಂದ ಮಾತನಾಡಿ, ಗಂಭೀರ ಸ್ವರೂಪದ ಹಲ್ಲೆ ನಡೆಸಿದ ಶಂಕೆಯಲ್ಲಿ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಆದರೆ ವಿಚಾರಣೆ ಪ್ರಗತಿಯಲ್ಲಿದೆ ಎಂದು ತಿಳಿಸಿದ್ದಾರೆ. ಮ್ಯಾಂಚೆಸ್ಟರ್ ನಗರದಲ್ಲಿ ಇರುವ ಅರ್ನ್ ಡೇಲ್ ಶಾಪಿಂಗ್ ಸೆಂಟರ್ ನಲ್ಲಿ ನಡೆದ ಈ ದಾಳಿಗೆ ಭಯೋತ್ಪಾದನೆ ನಂಟಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಹಲವು ಅಧಿಕಾರಿಗಳು ಈ ಪ್ರಕರಣದ ವಿಚಾರಣೆ ನಡೆಸುತ್ತಿದ್ದಾರೆ. ಪ್ರಾಥಮಿಕ ತನಿಖೆ ಪ್ರಕಾರ ಗಂಭೀರ ಸ್ವರೂಪದ ಹಲ್ಲೆ ನಡೆಸಲಾಗಿದೆ. ಈ ಹಲ್ಲೆ ವಿಚಾರದಲ್ಲಿ ನಲವತ್ತರ ಹರೆಯದ ಶಂಕಿತನನ್ನು ಬಂಧಿಸಲಾಗಿದೆ. ವಿಚಾರಣೆಗಾಗಿ ಆತನನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.












Click it and Unblock the Notifications