ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇನ್ಫೋಸಿಸ್ ನಾರಾಯಣ ಮೂರ್ತಿ ಅಳಿಯ ಬ್ರಿಟನ್‌ನ ಮುಂದಿನ ಪ್ರಧಾನಿ?

By ಒನ್ಇಂಡಿಯಾ ಡೆಸ್ಕ್‌
|
Google Oneindia Kannada News

ಲಂಡನ್, ಜನವರಿ 15: ಇನ್ಫೋಸಿಸ್ ಅಧ್ಯಕ್ಷ ನಾರಾಯಣ ಮೂರ್ತಿ ಅವರ ಅಳಿಯ ರಿಷಿ ಸುನಕ್ ಅವರು ಬ್ರಿಟನ್‌ನ ಮುಂದಿನ ಪ್ರಧಾನಿಯಾಲಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿದೆ.

ಬ್ರಿಟನ್ ನಲ್ಲಿ ಕೊರೊನಾ ಮೊದಲ ಅಲೆಯ ಲಾಕ್ ಡೌನ್ ಜಾರಿಯಲ್ಲಿದ್ದಾಗ 2020 ಮೇನಲ್ಲಿ ಪ್ರಧಾನ ಮಂತ್ರಿ ಬೋರಿಸ್ ಜಾನ್ಸನ್ ನೀಡಿದ್ದ ಮದ್ಯದ ಪಾರ್ಟಿ ವಿವಾದ ಸೃಷ್ಟಿಸಿದೆ.

ಬ್ರಿಟನ್ ಪ್ರಧಾನ ಮಂತ್ರಿ ಹುದ್ದೆ ಭಾರತೀಯ ಮೂಲದ ವ್ಯಕ್ತಿಗೆ ಲಭಿಸಲಿದೆಯೇ? ಬ್ರಿಟನ್ ಹಣಕಾಸು ಸಚಿವ ರಿಷಿ ಸುನಕ್ ಅವರು ಪ್ರಧಾನ ಮಂತ್ರಿ ಹುದ್ದೆಗೆ ನಡೆಯುತ್ತಿರುವ ಪೈಪೋಟಿಯಲ್ಲಿ ಮುಂದಿದ್ದಾರೆಯೇ? ಇನ್ಫೋಸಿಸ್ ನಾರಾಯಣ ಮೂರ್ತಿ ಅಳಿಯ ರಿಷಿ ಇತಿಹಾಸ ಸೃಷ್ಟಿಸಲಿದ್ದಾರೆಯೇ? ಈ ಪ್ರಶ್ನೆಗಳು ಬ್ರಿಟನ್‌ನಲ್ಲಿ ಹರಿದಾಡುತ್ತಿವೆ.

Will Narayana Murthy’s Son-In-Law Be The Next UK PM?


ಕೋವಿಡ್ ನಿಯಮ ಉಲ್ಲಂಘಿಸಿ, ಬೋರಿಸ್ ಜಾನ್ಸನ್ ನೀಡಿದ್ದ ಮದ್ಯ ಪಾರ್ಟಿ ವಿಡಿಯೋವೊಂದು ಇತ್ತೀಚಿಗೆ ಬೆಳಕಿಗೆ ಬರುವ ಮೂಲಕ ವಿರೋಧ ಪಕ್ಷ ಲೇಬರ್ ಪಾರ್ಟಿ, ಸ್ವಂತ ಪಕ್ಷ ಕನ್ಸರ್ವೇಟಿವ್ಸ್ ನಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಹಣಕಾಸು ಸಚಿವರಾದಾಗಿನಿಂದ ರಿಷಿ ಪ್ರಧಾನಿ ಹುದ್ದೆ ಬಗ್ಗೆ ತೀವ್ರ ಉತ್ಸುಕರಾಗಿದ್ದಾರೆ. ಹಾಗಾಗಿ ಪಾರ್ಟಿಗೇಟ್ ವಿವಾದದಿಂದ ದೂರ ಇರಬೇಕೆಂಬ ಉದ್ದೇಶದಿಂದ ಹೌಸ್ ಗೆ ಹಾಜರಾಗಲಿಲ್ಲ ಎಂದು ಬೋರಿಸ್ ಆಪ್ತರು ಹೇಳುತ್ತಾರೆ. ಈ ಹೇಳಿಕೆಯನ್ನು ತಳ್ಳಿ ಹಾಕಿರುವ ರಿಷಿ, ತಮ್ಮ ಇಲಾಖೆಗೆ ಸಂಬಂಧಿಸಿದ ಕೆಲಸದಲ್ಲಿ ನಿರತರಾಗಿರುವ ಕಾರಣ ಹೌಸ್ ಗೆ ಹಾಜರಾಗಲು ಸಾಧ್ಯವಾಗಲಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

ಕೋವಿಡ್ ನಿಂದಾಗಿ ನಿರಂತರ ಲಾಕ್ ಡೌನ್ ಗಳಿಂದ ಬಳಲುತ್ತಿರುವ ದೇಶದ ಆರ್ಥಿಕತೆಯನ್ನು ಸದೃಢಗೊಳಿಸಲು ರಿಷಿ ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಬ್ರಿಟನ್ ನಲ್ಲಿ ಹುಟ್ಟಿ ಬೆಳೆದ ರಿಷಿ, ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಅವರ ಪುತ್ರಿ ಅಕ್ಷತ ಅರನ್ನು ವಿವಾಹವಾಗಿದ್ದಾರೆ. ಅವರಿಗೆ ಕೃಷ್ಣ ಮತ್ತು ಅನುಷ್ಕಾ ಎಂಬ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.

ಬ್ರಿಟನ್ ಪ್ರಿನ್ಸ್ ಫಿಲಿಪ್ ಅಂತ್ಯಕ್ರಿಯೆ ನಡೆದ ಕಳೆದ ವರ್ಷ ಏಪ್ರಿಲ್ 17ರ ಹಿಂದಿನ ದಿನ ಡೌನಿಂಗ್ ಸ್ಟ್ರೀಟ್ ನಲ್ಲಿ 30 ಮಂದಿ ಡ್ರಗ್ಸ್ ಹಾಗೂ ಮದ್ಯದ ಪಾರ್ಟಿ ನಡೆಸಿದ್ದರು ಎಂಬ ಆರೋಪ ಬಂದಿದೆ. ಫಿಲಿಪ್ ಅವರ ಪಾರ್ಥಿವ ಶರೀರ ಇನ್ನೂ ಇರುವಾಗಲೇ ಮೋಜಿನ ಪಾರ್ಟಿ ನಡೆಸಿರುವ ಬಗ್ಗೆ ತೀವ್ರ ಆಕ್ಷೇಪಣೆಗಳು ವ್ಯಕ್ತವಾಗಿವೆ.

ಪಾರ್ಟಿ ಗೇವ್ ವಿವಾದದ ಬಗ್ಗೆ ಬೋರಿಸ್ ಬ್ರಿಟಿಷ್ ಸಂಸತ್ತಿನಲ್ಲಿ ಕ್ಷಮೆಯಾಚಿಸಿದ ಹೊರತಾಗಿಯೂ ಪ್ರಧಾನ ಮಂತ್ರಿ ಹುದ್ದೆಯಿಂದ ಕೆಳಗಿಳಿಯಬೇಕು ಎಂಬ ಬೇಡಿಕೆಗಳು ಹೆಚ್ಚುತ್ತಿವೆ.

ಬೋರಿಸ್ ಜಾನ್ಸನ್ ರಾಜೀನಾಮೆ ನೀಡುವ ಪರಿಸ್ಥಿತಿ ಬಂದರೆ ಅವರ ಸ್ಥಾನಕ್ಕೆ ಭಾರತೀಯ ಮೂಲದ ರಿಷಿ ಪ್ರಧಾನಿಯಾಗುವ ಸಾಧ್ಯತೆಯನ್ನು ತಳ್ಳಿ ಹಾಕಲು ಸಾಧ್ಯವಿಲ್ಲ ಎಂದು ಬ್ರಿಟಿಷ್ ಮಾಧ್ಯಮ ವರದಿ ಮಾಡಿದೆ.

ಈ ಸಂಬಂಧ ಬೆಟ್ಟಿಂಗ್‌ಗಳು ನಡೆಯುತ್ತಿವೆ. ಬೋರಿಸ್ ಹೌಸ್ ಆಫ್ ಕಾಮನ್ಸ್ ನಲ್ಲಿ ಕ್ಷಮೆಯಾಚಿಸುವ ಸಮಯದಲ್ಲಿ ರಿಷಿ ಹೌಸ್‌ನಲ್ಲಿ ಇಲ್ಲದಿರುವುದು ಈ ಪ್ರಚಾರಕ್ಕೆ ಮತ್ತಷ್ಟು ಇಂಬು ನೀಡುತ್ತದೆ.

English summary
If international media reports are to go by, the next British Prime Minister might be the Indian-origin Chancellor of the Exchequer Rishi Sunak, the son-in-law of Infosys co-founder NR Narayana Murthy.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X