ಉತ್ತರ ಪ್ರದೇಶದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ
ಲಕ್ನೋ,ಏಪ್ರಿಲ್ 23: ಅಪ್ರಾಪ್ತ ಬಾಲಕಿಯ ಮೇಲೆ ಇಬ್ಬರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯಲ್ಲಿ ನಡೆದಿದೆ.
Recommended Video
ಅತ್ಯಾಚಾರ ಮಾಡುತ್ತಿರುವುದನ್ನು ನಾಲ್ವರು ವಿಡಿಯೋ ಮಾಡಿದ್ದರು. ಒಟ್ಟು ಆರು ಮಂದಿಯನ್ನು ಬಂಧಿಸಲಾಗಿದೆ.ಬುಧವಾರ ಮಧ್ಯಾಹ್ನ 2 ಗಂಟೆಯ ವೇಳೆಗೆ ಬಾಲಕಿ ಬಹಿರ್ದೆಸೆಗೆ ಹೋಗಿ ಮನೆಗೆ ವಾಪಸಾಗುತ್ತಿದ್ದಾಗ ಈ ಕೃತ್ಯ ನಡೆದಿದೆ.
ಯಾರಿಗೂ ಕೂಡ ಮಾಹಿತಿ ನೀಡಬಾರದು ಎಂದು ಸಂತ್ರಸ್ತೆಗೆ ಬೆದರಿಕೆ ಹಾಕಿದ್ದರು. ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆರೋಪಿಗಳಲ್ಲಿ ಇಬ್ಬರು ಸಂತ್ರಸ್ತೆಯ ಊರಿನವರೇ ಆಗಿದ್ದಾರೆ. ಇತರ ನಾಲ್ವರು ಅತ್ಯಾಚಾರ ಕೃತ್ಯವನ್ನು ಚಿತ್ರೀಕರಿಸಿದ್ದರು. ಆರು ಮಂದಿಯನ್ನು ಬಂಧಿಸಿ ವಿಚಾರಣೆಗೊಳಪಡಿಸಲಾಗಿದೆ. ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಆರು ಮಂದಿ ಯುವಕರು ಬಲವಂತವಾಗಿ ಆಕೆಯನ್ನು ಶಾಲಾ ಕಟ್ಟಡವೊಂದರ ಬಳಿಗೆ ಎಳೆದೊಯ್ದಿದ್ದಾರೆ. ಬಳಿಕ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸ್ ಅಧಿಕಾರಿ ಎಲ್‌ಆರ್ ಕುಮಾರ್ ಮಾಹಿತಿ ನೀಡಿದ್ದಾರೆ.












Click it and Unblock the Notifications