• search
 • Live TV
ಲಕ್ನೋ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೊರೊನಾದಿಂದ ಗುಣಮುಖರಾದ 150 ಪೊಲೀಸರಿಂದ ಮೋದಿಗೆ ಭದ್ರತೆ

|
Google Oneindia Kannada News

ಲಕ್ನೌ, ಆಗಸ್ಟ್ 5: ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ಭೂಮಿ ಪೂಜೆ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಮುಖ್ಯ ಅತಿಥಿಯಾಗಿ ಆಗಮಿಸುತ್ತಿದ್ದು, ಇಂದು ಮಧ್ಯಾಹ್ನ 12.30ರ ಶುಭ ಮುಹೂರ್ತದಲ್ಲಿ ಮಂದಿರ ನಿರ್ಮಾಣಕ್ಕೆ ಅಡಿಪಾಯ ಹಾಕಲಿದ್ದಾರೆ.

   Ayodhya ರಾಮನ ದೇವಸ್ಥಾನ ನಿರ್ಮಾಣಕ್ಕೆ ಮೊದಲ ಇಟ್ಟಿಗೆ ಇಟ್ಟ ಮೋದಿ. | Oneindia Kannada

   ರಾಮ ಮಂದಿರ ಭೂಮಿ ಪೂಜೆ ಹಿನ್ನೆಲೆ ಪ್ರಧಾನಿ ಮೋದಿ ಇಂದು ಬೆಳಗ್ಗೆ 11.30ಕ್ಕೆ ಸಾಕೇತ್ ಕಾಲೋನಿಗೆ ವಿಶೇಷ ವಿಮಾನದ ಮೂಲಕ ಬಂದು ತಲುಪಲಿದ್ದಾರೆ. ಈ ವೇಳೆ 150 ಸ್ಥಳಿಯ ಪೊಲೀಸರು ವಿಶೇಷ ಭದ್ರತೆ ಒದಗಿಸಲಿದ್ದಾರೆ ಎಂದು ಉತ್ತರ ಪ್ರದೇಶ ಡಿಐಜಿ ಮಾಹಿತಿ ನೀಡಿದ್ದಾರೆ.

   ರಾಮ ಮಂದಿರ ಭೂಮಿ ಪೂಜೆ: ಅಯೋಧ್ಯೆಯಲ್ಲಿ ಮೋದಿಯ ವೇಳಾಪಟ್ಟಿರಾಮ ಮಂದಿರ ಭೂಮಿ ಪೂಜೆ: ಅಯೋಧ್ಯೆಯಲ್ಲಿ ಮೋದಿಯ ವೇಳಾಪಟ್ಟಿ

   ಕೊರೊನಾ ವೈರಸ್‌ನಿಂದ ಗುಣಮುಖರಾಗಿರುವ 150 ಜನ ಪೊಲೀಸ್ ಸಿಬ್ಬಂದಿಗಳು ಮೋದಿಯ ಸುತ್ತು ರಕ್ಷಣೆಗೆ ನಿಯೋಜನೆಯಾಗಿದ್ದಾರೆ. ಇವರು ಮೋದಿಯ ಸುತ್ತ ಭದ್ರತೆಗೆ ಆಯೋಜನೆಯಾಗಿರುತ್ತಾರೆ.

   ಕೊರೊನಾದಿಂದ ಚೇತರಿಸಿಕೊಂಡ ಪೊಲೀಸರನ್ನು ಭದ್ರತೆಗೆ ನೇಮಿಸುವುದರ ಹಿಂದೆ ನಿರ್ದಿಷ್ಟ ಕಾರಣ ಅಡಗಿದೆ. ತಜ್ಞರು ಹೇಳಿರುವ ಪ್ರಕಾರ, ಅದಾಗಲೇ ಸೋಂಕಿಗೆ ಒಳಗಾಗಿರುವ ಈ ಪೊಲೀಸರ ದೇಹದಲ್ಲಿ ಅಗತ್ಯ ಮಟ್ಟದ ರೋಗನಿರೋಧಕ ಶಕ್ತಿ ಇದೆ. ಇನ್ನು ಎರಡು ಅಥವಾ ಮೂರು ತಿಂಗಳು ಕಾಲ ಇವರಿಗೆ ಮತ್ತೆ ಕೊರೊನಾ ಬರುವ ಸಾಧ್ಯತೆ ಇಲ್ಲ. ಹಾಗಾಗಿ, ಪ್ರಧಾನಿ ಅವರಿಗೆ ಇವರಿಂದು ಸೋಂಕು ತಗುಲುವ ಸಾಧ್ಯತೆ ಇಲ್ಲ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

   ಸಾಕೇತ್ ಕಾಲೋನಿಯಲ್ಲಿ ಇದುವರೆಗೂ 16 ಜನರು ಕೊರೊನಾಗೆ ಬಲಿಯಾಗಿದ್ದು, ಇನ್ನು 604 ಕೇಸ್‌ಗಳು ಸಕ್ರಿಯವಾಗಿದೆ. ಹಾಗಾಗಿ, ಈ ನಗರದಲ್ಲಿ ಮೋದಿ ಅವರ ಭದ್ರತೆಗೆ ಸೋಂಕಿನಿಂದ ಚೇತರಿಸಿಕೊಂಡ ಪೊಲೀಸರು ನಿಯೋಜನೆಯಾಗಿದ್ದಾರೆ.

   ಸಾಕೇತ್ ಕಾಲೋನಿಗೆ ಬಂದ ಬಳಿಕ ಮೋದಿ ಮೊದಲು ಹನುಮನ್ ಗರ್ಹಿಗೆ ಭೇಟಿ ನೀಡುತ್ತಾರೆ. ಅಲ್ಲಿಂದ ರಾಮ ಮಂದಿರ ಶಿಲಾನ್ಯಾಸ ನಡೆಯುವ ಸ್ಥಳಕ್ಕೆ ಆಗಮಿಸಲಿದ್ದಾರೆ.

   English summary
   150 Police, who recovered from coronavirus will giving Security to Prime minister modi in Ayodhya.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X