ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಟ್ರಕ್-ಬಸ್ ಡಿಕ್ಕಿಯಾಗಿ ಬೆಂಕಿ: 20 ಮಂದಿ ಸಾವು, ಪ್ರಧಾನಿ ಸಂತಾಪ

|
Google Oneindia Kannada News

ಲಕ್ನೋ, ಜನವರಿ 11: ಟ್ರಕ್ ಮತ್ತು ಬಸ್‌ ನಡುವೆ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಬಸ್ಸಿನಲ್ಲಿದ್ದ 20 ಪ್ರಯಾಣಿಕರು ಮೃತಪಟ್ಟಿದ್ದಾರೆ.

ಶುಕ್ರವಾರ ರಾತ್ರಿ ಉತ್ತರ ಪ್ರದೇಶದ ಕನೌಜ್ ಜಿಲ್ಲೆಯ ಘೊನೊಐ ಎಂಬ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ.

ಜೈಪುರ ಕಡೆ ತೆರಳುತ್ತಿದ್ದ ಖಾಸಗಿ ಸ್ಲೀಪರ್​ ಕೋಚ್​​ ಬಸ್​ ಮತ್ತು ಟ್ರಕ್​ ನಡುವೆ ಡಿಕ್ಕಿ ಉಂಟಾದ ಬೆನ್ನಲ್ಲೇ ಬಸ್​ಗೆ ಬೆಂಕಿ ತಗುಲಿ ದುರ್ಘಟನೆ ಘಟಿಸಿದೆ. ಘಟನೆಯಲ್ಲಿ ಟ್ರಕ್​ಗೂ ಬೆಂಕಿ ತಗುಲಿದೆ.

ನೆಲಮಂಗಲದಲ್ಲಿ ಮಾಜಿ ಶಾಸಕರ ಕಾರು ಸೇರಿದಂತೆ ಸರಣಿ ಅಪಘಾತನೆಲಮಂಗಲದಲ್ಲಿ ಮಾಜಿ ಶಾಸಕರ ಕಾರು ಸೇರಿದಂತೆ ಸರಣಿ ಅಪಘಾತ

ಶುಕ್ರವಾರ ರಾತ್ರಿ ಸುಮಾರು 9.30ಕ್ಕೆ ಅವಘಡ ಸಂಭವಿಸಿದೆ ಎಂದು ಅಂದಾಜಿಸಲಾಗಿದ್ದು, ಬಸ್​ನಲ್ಲಿ ಒಟ್ಟು 46 ಪ್ರಯಾಣಿಕರಿದ್ದರು. ಇದರಲ್ಲಿ ನಿನ್ನೆಯೇ 20 ಮಂದಿಯನ್ನು ರಕ್ಷಿಸಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಉತ್ತರ ಪ್ರದೇಶ ಪೊಲೀಸರು ಮಾಹಿತಿ ನೀಡಿದ್ದಾರೆ.

20 Feared Dead After Bus Catches Fire Near Kannauj

ಘಟನೆ ಬಗ್ಗೆ ಟ್ವೀಟ್​ ಮಾಡಿ ಕಳವಳ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ, ಉತ್ತರ ಪ್ರದೇಶದ ಕನೌಜ್ ಎಂಬಲ್ಲಿ ಭೀಕರ ರಸ್ತೆ ಅಪಘಾತ ನಡೆದಿದ್ದನ್ನು ಕೇಳಿ ದುಃಖವಾಯಿತು.​ ಅನೇಕ ಜನರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ.

ಸಾವಿಗೀಡಾದವರ ಕುಟುಂಬಕ್ಕೆ ಸಂತಾಪ ಸೂಚಿಸುತ್ತಾ, ಗಾಯಗೊಂಡವರು ಬೇಗ ಗುಣಮುಖರಾಗಲು ಬಯಸುತ್ತೇನೆಂದು ಇಂದು ಬೆಳಗ್ಗೆ ಹಿಂದಿಯಲ್ಲಿ ಪ್ರಧಾನಿ ಟ್ವೀಟ್​ ಮಾಡಿದ್ದಾರೆ.

ದುರಂತದಲ್ಲಿ ಮೃತಪಟ್ಟ ಕುಟುಂಬಕ್ಕೆ ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ರವೀಂದ್ರ ಕುಮಾರ್​ ತಿಳಿಸಿದ್ದಾರೆ.

English summary
Twenty people are feared dead after a bus carrying 46 passengers collided with a truck in Uttar Pradesh's Kannauj district and caught fire on Friday evening.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X