2022ರ ವಿಧಾನಸಭಾ ಚುನಾವಣೆ: 10 ದಿನಗಳಲ್ಲಿ 4 ಬಾರಿ ಯುಪಿಗೆ ಮೋದಿ ಭೇಟಿ

ಲಕ್ನೋ ಡಿಸೆಂಬರ್ 19: ಉತ್ತರ ಪ್ರದೇಶದಲ್ಲಿ 2022ರ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಂತೆಯೇ ಎಲ್ಲ ರಾಜಕೀಯ ಪಕ್ಷಗಳು ಸಕ್ರಿಯವಾಗಿವೆ. ಯುಪಿಯಲ್ಲಿ ಬಿಜೆಪಿಯ ಪ್ರಚಾರವನ್ನು ಮುನ್ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಕೆಲವು ಸಮಯದಿಂದ ರಾಜ್ಯದಲ್ಲಿ ರಾಜಕೀಯ ರಂಗದಲ್ಲಿ ಪೂರ್ವಭಾವಿ ಪಾತ್ರದಲ್ಲಿದ್ದಾರೆ. ಮಾಹಿತಿಯ ಪ್ರಕಾರ, ಪ್ರಧಾನಿ ಮೋದಿ ಅವರು ಡಿಸೆಂಬರ್ 18 ರಿಂದ 28 ರವರೆಗೆ ಮುಂದಿನ 10 ದಿನಗಳಲ್ಲಿ 4 ಬಾರಿ ಉತ್ತರಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ.

ಉತ್ತರ ಪ್ರದೇಶಕ್ಕೆ ಮೋದಿ ಭೇಟಿ: ಮುಂದಿನ ವರ್ಷ ಉತ್ತರ ಪ್ರದೇಶದಲ್ಲಿ ಸಾರ್ವತ್ರಿಕ ವಿಧಾನಸಭೆ ಚುನಾವಣೆ ನಡೆಯಲಿದ್ದು, ರಾಜ್ಯದಲ್ಲಿ ಮತ್ತೆ ಅಧಿಕಾರ ಪಡೆಯಲು ಆಡಳಿತರೂಢ ಬಿಜೆಪಿ ಸರ್ಕಾರ ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ. ಉತ್ತರ ಪ್ರದೇಶದಲ್ಲಿ ಮುಂಬರುವ ವಿಧಾನಸಭೆ ಚುನಾವಣೆ ಹಿನ್ನಲೆ ಪ್ರಧಾನಿ ನರೇಂದ್ರ ಮೋದಿ ಕಳೆದ ಒಂದು ತಿಂಗಳಿನಲ್ಲಿ ಹಲವು ಬಾರಿ ಭೇಟಿ ನೀಡಿದ್ದಾರೆ. ತರಾತುರಿಯಲ್ಲಿ ಒಂದಾದರ ಮೇಲೆ ಒಂದರಂತೆ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡುತ್ತಿದ್ದಾರೆ.

ಸರಯೂ ನಾಲೆ ರಾಷ್ಟ್ರೀಯ ಯೋಜನೆ

ಸರಯೂ ನಾಲೆ ರಾಷ್ಟ್ರೀಯ ಯೋಜನೆ

ಇತ್ತೀಚೆಗೆ ಗೋರಖ್​ಪುರ್​ನಲ್ಲಿ ರಾಸಾಯನಿಕ ಗೊಬ್ಬರ ಕಾರ್ಖಾನೆ ಸೇರಿ ಮೂರು ಬೃಹತ್​ ಯೋಜನೆಗಳನ್ನು ಲೋಕಾರ್ಪಣೆ ಮಾಡಿದ್ದ ಪ್ರಧಾನಿ ಮೋದಿ, ಮತ್ತೆ ಡಿ.11ರಂದು ಉತ್ತರಪ್ರದೇಶದ ಬಲರಾಂಪುರ ಜಿಲ್ಲೆಯಲ್ಲಿ 9802 ಕೋಟಿ ರೂಪಾಯಿ ವೆಚ್ಚದ ಸರಯೂ ನಾಲೆ ರಾಷ್ಟ್ರೀಯ ಯೋಜನೆಯನ್ನು ಉದ್ಘಾಟನೆ ಮಾಡಿದ್ದರು. ಕೆಲ ದಿನಗಳ ಹಿಂದೆ ಪ್ರಧಾನಿ ಮೋದಿಯವರು ತಾವು ಪ್ರತಿನಿಧಿಸುವ ಹಿಂದೂಗಳ ಪವಿತ್ರ ಕ್ಷೇತ್ರ, ವಾರಣಾಸಿಯ ಕಾಶಿ ವಿಶ್ವನಾಥ್ ಕಾರಿಡಾರ್ ಅನ್ನು ಉದ್ಘಾಟಿಸಿದರು.

ಗಂಗಾ ಎಕ್ಸ್‌ಪ್ರೆಸ್‌ವೇಗೆ ಶಂಕುಸ್ಥಾಪನೆ

ಗಂಗಾ ಎಕ್ಸ್‌ಪ್ರೆಸ್‌ವೇಗೆ ಶಂಕುಸ್ಥಾಪನೆ

ಜೊತೆಗೆ ಡಿಸೆಂಬರ್ 18 ರಂದು ಪ್ರಧಾನಿಯವರು ಷಹಜಹಾನ್‌ಪುರದಲ್ಲಿ ಗಂಗಾ ಎಕ್ಸ್‌ಪ್ರೆಸ್‌ವೇಗೆ ಶಂಕುಸ್ಥಾಪನೆ ಮಾಡಿದ್ದಾರೆ. ಇದು ಯೋಗಿ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ 'ಗಂಗಾ ಎಕ್ಸ್‌ಪ್ರೆಸ್‌ವೇ' 6-ಲೇನ್ ಹೆದ್ದಾರಿಯಾಗಲಿದೆ ಎಂಬುದನ್ನು ಗಮನಾರ್ಹ. ಮೀರತ್‌ನ ಬಿಜೋಲಿಯಿಂದ ಆರಂಭಗೊಂಡು ಹಾಪುರ್, ಬುಲಂದ್‌ಶಹರ್, ಅಮ್ರೋಹಾ, ಸಂಭಾಲ್, ಬದೌನ್, ಷಹಜಹಾನ್‌ಪುರ್, ಹರ್ದೋಯಿ, ಉನ್ನಾವೋ, ರಾಯ್ ಬರೇಲಿ, ಪ್ರತಾಪ್‌ಗಢ ಮೂಲಕ ಪ್ರಯಾಗ್‌ರಾಜ್‌ನ ಜುದಾಪುರ್‌ನಲ್ಲಿ ಹಾದುಹೋಗುವ 594 ಕಿ.ಮೀ. ಉದ್ದದ ಹೆದ್ದಾರಿ ಇದಾಗಿದೆ.ಇನ್ನು 594 ಕಿಮೀ ಉದ್ದದ ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ, ವಾಯುಪಡೆಯ ವಿಮಾನಗಳನ್ನು ತುರ್ತು ಲ್ಯಾಂಡಿಂಗ್ ಮತ್ತು ಟೇಕ್-ಆಫ್ ಮಾಡಲು ಶಹಜಹಾನ್‌ಪುರ ಜಿಲ್ಲೆಯಲ್ಲಿ ಏರ್‌ಸ್ಟ್ರಿಪ್ ಅನ್ನು ಸಹ ನಿರ್ಮಿಸಲಾಗುತ್ತದೆ. ಗಂಗಾ ಎಕ್ಸ್‌ಪ್ರೆಸ್‌ವೇ ಯೋಜನೆಯ ರಸ್ತೆಯು ಪೂರ್ವ ಉತ್ತರಪ್ರದೇಶದಿಂದ ಪಶ್ಚಿಮ ಉತ್ತರಪ್ರದೇಶವನ್ನು ಸಂಪರ್ಕಿಸುತ್ತದೆ. ಅಲ್ಲದೇ ಇದು ನೇರವಾಗಿ ರಾಷ್ಟ್ರೀಯ ರಾಜಧಾನಿ ಪ್ರದೇಶ ನವದೆಹಲಿ (ಎನ್‌ಸಿಆರ್) ಯೊಂದಿಗೆ ಸಂಪರ್ಕ ಕಲ್ಪಿಸುತ್ತದೆ. ಗಂಗಾ ಎಕ್ಸ್‌ಪ್ರೆಸ್‌ವೇಗಾಗಿ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳುವಾಗ, ಇಡೀ ದೇಶದಲ್ಲಿ ಕೊರೊನಾ ಅಲೆಯು ಉತ್ತುಂಗದಲ್ಲಿತ್ತು. ಇದರ ಹೊರತಾಗಿಯೂ, ಕೇವಲ ಒಂದು ವರ್ಷದಲ್ಲಿ ಗಂಗಾ ಎಕ್ಸ್‌ಪ್ರೆಸ್‌ವೇಗಾಗಿ 83 ಸಾವಿರ ರೈತರಿಂದ ಶೇಕಡಾ 94ರಷ್ಟು ಭೂಮಿಯನ್ನು ಖರೀದಿಸಲಾಗಿದೆ.

2.5 ಲಕ್ಷ ಮಹಿಳೆಯರನ್ನು ಆಹ್ವಾನಿಸಲಾಗಿದೆ

2.5 ಲಕ್ಷ ಮಹಿಳೆಯರನ್ನು ಆಹ್ವಾನಿಸಲಾಗಿದೆ

ಡಿಸೆಂಬರ್ 21 ರಂದು ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಯಾಗ್ರಾಜ್‌ಗೆ ಭೇಟಿ ನೀಡಲಿದ್ದಾರೆ. ಆದಾಗ್ಯೂ, ಯಾವುದೇ ಕಾರ್ಯಕ್ರಮದಲ್ಲಿ ಅವರ ಉಪಸ್ಥಿತಿಯ ಬಗ್ಗೆ ಇನ್ನೂ ಯಾವುದೇ ದೃಢೀಕರಣವಿಲ್ಲ. ಮೂಲಗಳ ಪ್ರಕಾರ, ಪ್ರಯಾಗ್‌ರಾಜ್‌ನಲ್ಲಿ ನಡೆದ ಕಾರ್ಯಕ್ರಮಕ್ಕೆ 2.5 ಲಕ್ಷ ಮಹಿಳೆಯರನ್ನು ಆಹ್ವಾನಿಸಲಾಗಿದೆ.

ಮತ್ತೊಮ್ಮೆ ಕಾಶಿಗೆ ಭೇಟಿ ನೀಡಲಿದ್ದಾರೆ

ಮತ್ತೊಮ್ಮೆ ಕಾಶಿಗೆ ಭೇಟಿ ನೀಡಲಿದ್ದಾರೆ

ಡಿಸೆಂಬರ್ 23 ರಂದು ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಕಾಶಿಗೆ ಭೇಟಿ ನೀಡಲಿದ್ದಾರೆ. ಇದೇ ದಿನ ಲಹರ್ತಾರಾದಿಂದ ಮೋಹನ್‌ಸರೈವರೆಗಿನ ಚತುಷ್ಪಥ ರಸ್ತೆ ಹಾಗೂ ಆರು ವಾರ್ಡ್‌ಗಳಲ್ಲಿ ಆಗಬೇಕಿರುವ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಅದೇ ದಿನ ಕಾಶಿ ಜನತೆಗೆ ಪ್ರಧಾನಿ 1500 ಕೋಟಿ ಉಡುಗೊರೆ ನೀಡಲಿದ್ದಾರೆ. ಇದಲ್ಲದೆ, ಪ್ರಧಾನಿ ಮೋದಿ ಅವರು ಡಿಸೆಂಬರ್ 28 ರಂದು ಕಾನ್ಪುರದಲ್ಲಿರಲಿದ್ದು, ಅಲ್ಲಿ ಅವರು ಕಾನ್ಪುರ ಮೆಟ್ರೋವನ್ನು ಉದ್ಘಾಟಿಸಲಿದ್ದಾರೆ.

Recommended Video

      ಅಗ್ನಿ-ಪಿ ಯಶಸ್ವಿ ಪರೀಕ್ಷೆ ಮೂಲಕ ಮೈಲಿಗಲ್ಲು ಸ್ಥಾಪಿಸಿದ DRDO | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+