ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉತ್ತರ ಪ್ರದೇಶ ಚುನಾವಣೆ: 2,097 ಸರ್ಕಾರಿ ನೌಕರರು ಕೊರೊನಾದಿಂದ ಸಾವು

|
Google Oneindia Kannada News

ಲಕ್ನೋ, ಸೆಪ್ಟೆಂಬರ್ 13: ಉತ್ತರ ಪ್ರದೇಶದಲ್ಲಿ ಏಪ್ರಿಲ್‌ನಲ್ಲಿ ನಡೆದ ಪಂಚಾಯಿತಿ ಚುನಾವಣೆಗಳಲ್ಲಿ ಕರ್ತವ್ಯನಿರತರಾಗಿದ್ದ 2,097 ಮಂದಿ ಸರ್ಕಾರಿ ನೌಕರರು ಕೊರೊನಾದಿಂದ ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಕೊರೊನಾದಿಂದ ಸಾವಿಗೀಡಾದ ಸರ್ಕಾರಿ ನೌಕರರ ಕುರಿತ ವಿವರವನ್ನು ಪಂಚಾಯಿತ್ ರಾಜ್‌ನ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮನೋಜ್ ಕುಮಾರ್ ಸಿಂಗ್ ಅವರು ರಾಜ್ಯ ಚುನಾವಣಾ ಆಯೋಗದ ಕಾರ್ಯದರ್ಶಿಯೊಂದಿಗೆ ಹಂಚಿಕೊಂಡಿದ್ದಾರೆ.

ಉತ್ತರ ಪ್ರದೇಶ ಚುನಾವಣೆ 2022: ಕಾಂಗ್ರೆಸ್‌ಗೆ ಪ್ರಿಯಾಂಕಾ ನಾಯಕತ್ವಉತ್ತರ ಪ್ರದೇಶ ಚುನಾವಣೆ 2022: ಕಾಂಗ್ರೆಸ್‌ಗೆ ಪ್ರಿಯಾಂಕಾ ನಾಯಕತ್ವ

ಮೃತರ ಕುಟುಂಬಗಳಿಗೆ 30 ಲಕ್ಷ ರೂ. ಪರಿಹಾರವನ್ನು ತಲುಪಿಸಲು ಪತ್ರ ಬರೆಯಲಾಗಿದೆ. ಚುನಾವಣಾ ಕರ್ತವ್ಯದ ವೇಳೆ 2128 ಸರ್ಕಾರಿ ನೌಕರರು ಸಾವಿಗೀಡಾಗಿದ್ದು, 2097 ಮಂದಿ ಕೊರೊನಾದಿಂದ ಹಾಗೂ 31 ಮಂದಿ ಇತರೆ ಕಾರಣಗಳಿಂದ ಮೃತಪಟ್ಟಿರುವುದಾಗಿ ಪತ್ರದಲ್ಲಿ ಉಲ್ಲೇಖಿಸಿರುವುದಾಗಿ ವರದಿಯಾಗಿದೆ.

 2,097 Govt Personnel Died Of Covid During Election Duty In UP

ಪಂಚಾಯಿತಿಗಳಿಗೆ ಏಪ್ರಿಲ್ 15 ರಿಂದ 29ರವರೆಗೂ ನಾಲ್ಕು ಹಂತಗಳಲ್ಲಿ ಚುನಾವಣೆ ನಡೆದಿತ್ತು. ಮೇ 2ರಂದು ಮತ ಎಣಿಕೆ ಕಾರ್ಯ ನಡೆದಿತ್ತು. ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ 2022ರಲ್ಲಿ ನಡೆಯಲಿದೆ.

ಮುಂಬರಲಿರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪ್ರಿಯಾಂಕಾ ಗಾಂಧಿ ನೇತೃತ್ವದಲ್ಲಿ ಸ್ಪರ್ಧೆ ನಡೆಸಲಿದೆ ಎಂದು ಮಾಜಿ ಸಚಿವ ಸಲ್ಮಾನ್ ಖುರ್ಷಿದ್ ಹೇಳಿದ್ದಾರೆ.

ಕಾಂಗ್ರೆಸ್ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಇನ್ನೂ ನಿರ್ಧರಿಸಿಲ್ಲ ಆದರೆ ಉತ್ತರ ಪ್ರದೇಶದ ಎಲ್ಲಾ 403 ವಿಧಾನಸಭಾ ಸ್ಥಾನಗಳಿಗೆ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಾಗಿ ಸಲ್ಮಾನ್ ತಿಳಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಪ್ರಿಯಾಂಕಾ ಗಾಂಧಿ ವಾದ್ರಾ ನೇತೃತ್ವದಲ್ಲಿ ಚುನಾವಣೆ ಎದುರಿಸಲಿದ್ದೇವೆ ಎಂದು ಹೇಳಿದ್ದಾರೆ. ಪ್ರಣಾಳಿಕೆ ಬಗ್ಗೆ ಮಾಹಿತಿ ನೀಡಿದ ಸಲ್ಮಾನ್, ಉತ್ತರ ಪ್ರದೇಶ ಚುನಾವಣೆಗೆ ಕಾಂಗ್ರೆಸ್ ಪ್ರಣಾಳಿಕೆಯನ್ನು ತಜ್ಞರ ಶಿಫಾರಸಿನ ಮೇರೆಗೆ ತಯಾರಿಸಲಾಗುವುದಿಲ್ಲ.

ಇದು ಸ್ಥಳೀಯ ಜನರ ಸಾಮಾನ್ಯ ಸಮಸ್ಯೆಗಳನ್ನು ಒಳಗೊಂಡಿರುತ್ತದೆ. ಈ ಪ್ರಣಾಳಿಕೆ ತಮ್ಮದೇ ಎಂದು ಅವರು ಹೇಳಬಹುದು ಎಂದರು. ಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ಪರ್ಧೆಯ ಕಾರಣದಿಂದ ರಂಗೇರಿರುವ ಭವಾನಿಪುರ ವಿಧಾನಸಭಾ ಕ್ಷೇತ್ರ ಉಪ ಚುನಾವಣೆಯಲ್ಲಿ ಕಣದಿಂದ ಹಿಂದೆ ಸರಿಯುವ ಮೂಲಕ ಕಾಂಗ್ರೆಸ್ ಮತ್ತೆ ಮೂಕಪ್ರೇಕ್ಷಕನಾಗುತ್ತಿದೆ.

ಅಯೋಧ್ಯೆಯನ್ನೇ ಚುನಾವಣಾ ಪ್ರಚಾರದ ಆರಂಭದ ಸ್ಥಳವನ್ನಾಗಿ ಮಾಡಿಕೊಂಡಿವೆ. ಬಿಜೆಪಿ, ಸಮಾಜವಾದಿ ಪಕ್ಷ, ಬಿಎಸ್‌ಪಿ ಈಗಾಗಲೇ ಮುಂದಿನ ಚುನಾವಣೆಗಾಗಿ ಪ್ರಚಾರವನ್ನು ಆರಂಭಿಸಿವೆ.

ಇಷ್ಟು ಮಾತ್ರವಲ್ಲದೇ, ರಾಜ್ಯ ಚುನಾವಣೆಯಲ್ಲಿ ಮೊದಲ ಬಾರಿಗೆ ಸ್ಪರ್ಧಿಸಲಿರುವ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷ, ಕುಂದಾ ಕ್ಷೇತ್ರದ ಶಾಸಕ ರಘುರಾಜ್ ಪ್ರತಾಪ್ ಸಿಂಗ್ ನೇತೃತ್ವದ ಜನಸತ್ತಾ ಲೋಕತಾಂತ್ರಿಕ ದಳ ಕೂಡ ಅಲ್ಲಿಂದಲೇ ಪ್ರಚಾರ ನಡೆಸಲು ಮುದಾಗಿದೆ.

ಪ್ರಧಾನಿ ನರೇಂದ್ರ ಮೋದಿ 2020 ಆ.5ರಂದು ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದ ಬಳಿಕ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಪದೇ ಪದೆ ಅಯೋಧ್ಯೆಗೆ ಭೇಟಿ ನೀಡಿ, ದೇಗುಲ ಕಾಮಗಾರಿ ಮತ್ತು ಇತರೆಅಂಶಗಳ ಬಗ್ಗೆ ಖುದ್ದಾಗಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದರ ಜತೆಗೆ ಬಿಜೆಪಿ ಸೆ.5ರಂದು ಪ್ರಬುದ್ಧ ಸಮ್ಮೇಳನ ಎಂಬ ಶೀರ್ಷಿಕೆಯೊಂದಿಗೆ ಬುದ್ಧಿಜೀವಿಗಳ ಸಮಾವೇಶ ಏರ್ಪಡಿಸಿತ್ತು.ಮುಂದಿನ ವರ್ಷ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಎಸ್‌ಪಿ ಯಾವುದೇ ಪಕ್ಷಗಳ ಜತೆ ಮೈತ್ರಿ ಮಾಡಿಕೊಳ್ಳುವುದಿಲ್ಲ, ಆದರೆ, ವಿಪಕ್ಷಗಳು ರಚಿಸಲು ಉದ್ದೇಶಿಸಿರುವ ಒಕ್ಕೂಟಕ್ಕೆ ಷರತ್ತುಗಳನ್ನು ಮುಂದಿಟ್ಟಿಕೊಂಡು ಬೆಂಬಲ ಸೂಚಿಸಲಿದೆ ಎಂದು ಬಿಎಸ್‌ಪಿಯ ರಾಜ್ಯಸಭಾ ಸದಸ್ಯ ಸತೀಶ್‌ಚಂದ್ರ ಮಿಶ್ರಾ ಹೇಳಿದ್ದಾರೆ.

ಸಂಸತ್ ಅಧಿವೇಶನದಲ್ಲಿ ಕೆಲವೊಂದು ಮಸೂದೆಗಳ ಬಗ್ಗೆ ಸರ್ಕಾರದ ಪರವಾಗಿ ಬೆಂಬಲ ನೀಡಿದ್ದರ ಬಗ್ಗೆ ಸಮಜಾಯಿಶಿ ನೀಡಿದ ಸತೀಶ್‌ಚಂದ್ರ ದೇಶದ ಮತ್ತು ಜನರ ಹಿತಾಸಕ್ತಿಗಳನ್ನು ಆಮೂಲಾಗ್ರವಾಗಿ ಅಧ್ಯಯನ ನಡೆಸಿದ ಬಳಿಕ ಸಂಸತ್‌ನಲ್ಲಿ ಮಸೂದೆಗಳಿಗೆ ಬೆಂಬಲ ನೀಡಿದ್ದೇವೆ ಎಂದು ಹೇಳಿದ್ದರು.

English summary
A fresh tabulation by the Uttar Pradesh government has revealed that 2,097 government personnel died of Covid-19 infections while on duty in the three-tier panchayat election in April in the state, and a large number of them were teachers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X