ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲಕ್ನೋದ ಆಮ್ಲಜನಕ ಘಟಕದಲ್ಲಿ ಸಿಲಿಂಡರ್ ಸ್ಫೋಟ: ಮೂವರು ಸಾವು

|
Google Oneindia Kannada News

ಲಕ್ನೋ, ಮೇ 10: ಲಕ್ನೋದ ಆಮ್ಲಜನಕ ಘಟಕದಲ್ಲಿ ಸಿಲಿಂಡರ್ ಸ್ಫೋಟಗೊಂಡು ಮೂವರು ಮೃತಪಟ್ಟಿರುವ ಘಟನೆ ವರದಿಯಾಗಿದೆ.

ಘಟನೆಯಲ್ಲಿ ಐವರಿಗೆ ಗಂಭೀರ ಗಾಯವಾಗಿರುವುದು ಬೆಳಕಿಗೆ ಬಂದಿದೆ, ಘಟಕದಲ್ಲಿ ಒಟ್ಟು ಎರೆಡು ಸಿಲಿಂಡರ್‌ಗಳು ಸ್ಫೋಟಗೊಂಡಿತ್ತು. ಚಿನ್‌ಹಟ್ ಪ್ರದೇಶದ ಆಮ್ಲಜನಕ ಘಟಕದಲ್ಲಿ ಸಿಲಿಂಡರ್‌ಗೆ ಮರುಪೂರಣ ಸಂದರ್ಭದಲ್ಲಿ ಅವಘಡ ಸಂಭವಿಸಿದೆ. ಆಮ್ಲಜನಕ ಸಿಲಿಂಡರ್ ಸ್ಪೋಟದಲ್ಲಿ ಮೃತಪಟ್ಟವರ ಗುರುತು ಹಚ್ಚುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಉತ್ತರ ಪ್ರದೇಶದಲ್ಲಿ ಮೇ 10ರವರೆಗೂ ಲಾಕ್‌ಡೌನ್ ಮುಂದುವರಿಕೆ ಉತ್ತರ ಪ್ರದೇಶದಲ್ಲಿ ಮೇ 10ರವರೆಗೂ ಲಾಕ್‌ಡೌನ್ ಮುಂದುವರಿಕೆ

ಕೊರೊನಾ ಸೋಂಕಿತ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಸರ್ಕಾರವು ಮೇ 10ರವರೆಗೆ ಲಾಕ್‌ಡೌನ್ ವಿಸ್ತರಿಸಿದೆ. ಕೊರೊನಾ ವೈರಸ್ ಪ್ರಕರಣಗಳು ಮತ್ತಷ್ಟು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಾರಾಂತ್ಯದ ಲಾಕ್‌ಡೌನ್ ಅವಧಿಯನ್ನು ಮೇ 10 ರಂದು ಬೆಳಗ್ಗೆ 7 ಗಂಟೆಯವರೆಗೆ ವಿಸ್ತರಿಸಲು ಉತ್ತರ ಪ್ರದೇಶ ಸರ್ಕಾರ ಬುಧವಾರ ನಿರ್ಧರಿಸಿದೆ ಎಂದು ಅಧಿಕೃತ ವಕ್ತಾರರು ತಿಳಿಸಿದ್ದಾರೆ.

3 Killed, Six Injured In Blast At Oxygen Plant In Lucknow

ಕೊರೊನಾ ಕರ್ಫ್ಯೂ ವೇಳೆ ಎಲ್ಲಾ ಅಂಗಡಿಗಳು ಮತ್ತು ಸಂಸ್ಥೆಗಳು ಸೋಮವಾರ ಬೆಳಗ್ಗೆ 7 ರವರೆಗೆ ಮುಚ್ಚಲ್ಪಡುತ್ತವೆ. ಕರ್ಫ್ಯೂ ಮತ್ತೆ ವಿಸ್ತರಿಸುವ ಬಗ್ಗೆ ಮುಂದೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅಧಿಕಾರಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಕೊರೊನಾ ಕರ್ಫ್ಯೂ ಅನ್ನು ಮೇ 10ರ ಬೆಳಗ್ಗೆ 7 ರವರೆಗೆ ವಿಸ್ತರಿಸಲಾಗಿದೆ ಎಂದು ಅಧಿಕೃತ ವಕ್ತಾರರು ತಿಳಿಸಿದ್ದಾರೆ. ಕೊರೊನಾ ಕರ್ಫ್ಯೂ ವೇಳೆ ಎಲ್ಲಾ ಅಗತ್ಯ ಸೇವೆಗಳಿಗೆ ಮತ್ತು ಲಸಿಕೆ ಅಭಿಯಾನಕ್ಕೆ ಅವಕಾಶ ನೀಡಲಾಗಿದೆ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ. ಆದರೆ ಲಾಕ್ ಡೌನ್ ಪದ ಬಳಸಲು ಅವರು ನಿರಾಕರಿಸಿದರು.

English summary
Three people died and six others got seriously injured after an oxygen cylinder exploded during the refilling process here on Wednesday, police said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X