• search
  • Live TV
ಲಕ್ನೋ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಹತ್ರಾಸ್: ಸಂಬಂಧಿಯಿಂದ ಅತ್ಯಾಚಾರಕ್ಕೊಳಗಾಗಿದ್ದ 4 ವರ್ಷದ ಬಾಲಕಿ ಸಾವು

|

ಅಲಿಗಢ, ಅಕ್ಟೋಬರ್ 06: ಸಂಬಂಧಿಯಿಂದಲೇ ಅತ್ಯಾಚಾರಕ್ಕೊಳಗಾಗಿದ್ದ 4 ವರ್ಷದ ಹತ್ರಾಸ್ ಬಾಲಕಿ ದೆಹಲಿಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ.

ಹತ್ರಾಸ್‌ನಲ್ಲಿ 20 ವರ್ಷದ ದಲಿತ ಬಾಲಕಿ ಮೇಲೆ ಅತ್ಯಾಚಾರ ನಡೆದ ಪ್ರಕರಣ ಮಾಸುವ ಮುನ್ನ ಏನೂ ಅರಿಯದ 4 ವರ್ಷದ ಮುಗ್ದ ಕಂದಮ್ಮನ ಮೇಲೆ ಅತ್ಯಾಚಾರ ನಡೆದಿದ್ದು, ಬಾಲಕಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.

ಉತ್ತರ ಪ್ರದೇಶದಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಮಹಿಳೆ ಸಾವು

ಸಂಬಂಧಿ ಮನೆಯಲ್ಲಿರುವಾಗ ಸೆಪ್ಟೆಂಬರ್ 17 ರಂದು ಈ ಘಟನೆ ನಡೆದಿದೆ ಎಂದು ಎಸ್‌ಪಿ ಮುನಿರಾಜ್ ಹೇಳಿದ್ದಾರೆ.ದೂರು ಬಂದ ಬಳಿಕ ಮನೆಯ ಮೇಲೆ ದಾಳಿ ನಡೆಸಲಾಗಿತ್ತು. ಅದೇ ಮನೆಯಲ್ಲಿಬಾಲಕಿ ಕೂಡ ಸಿಕ್ಕಿದ್ದಳು, ಆಕೆಯನ್ನು ಆಸ್ಪತ್ರೆಗೆ ರವಾನಿಸಲಾಗಿತ್ತು.

ಜವಾಹರ್‌ಲಾಲ್ ನೆಹರೂ ಮೆಡಿಕಲ್ ಕಾಲೇಜಿನಲ್ಲಿ ನಾಲ್ಕು ದಿನ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಆಕೆಯನ್ನು ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಗೆ ಸೇರಿಸಲಾಗಿತ್ತು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.

ವೈದ್ಯಕೀಯ ಪರೀಕ್ಷೆ ಬಳಿಕ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವುದು ಹೌದು ಎಂಬುದು ದೃಢಪಟ್ಟಿದೆ. ಸಪ್ಟೆಂಬರ್ 21 ರಂದು ಎಫ್‌ಐಆರ್‌ ದಾಖಲಿಸಲಾಗಿತ್ತು. ಈ ಪ್ರಕರಣದಲ್ಲಿ 15 ವರ್ಷದ ಬಾಲಕನನ್ನು ಬಂಧಿಸಲಾಗಿದೆ.

ಬಾಲಕಿಯ ದೇಹವನ್ನು ರಸ್ತೆಯಲ್ಲಿ ಇರಿಸಿದ್ದ ಪೋಷಕರು ಪ್ರತಿಭಟನೆ ನಡೆಸಿದರು. ಹತ್ರಾಸ್‌ನಲ್ಲಿ ನಡೆದ ದಲಿತ ಯುವತಿ ಮೇಲೆ ಅತ್ಯಾಚಾರ ಸಂಬಂಧ ನಡೆಯುತ್ತಿರುವ ಪ್ರತಿಭಟನೆ ವೇಳೆ ಈ ವಿಚಾರ ಬೆಳಕಿಗೆ ಬಂದಿದೆ.

ಪೊಲೀಸರು ಯುವತಿಯ ಅಂತ್ಯಕ್ರಿಯೆಗೆ ಪೋಷಕರಿಗೆ ಅವಕಾಶವನ್ನು ಮಾಡಿಕೊಡದೆ ಮಧ್ಯರಾತ್ರಿ 2.30ಕ್ಕೆ ಅಂತ್ಯಸಂಸ್ಕಾರ ನೆರವೇರಿಸಿದ್ದರು.

English summary
Even before the outrage over the gang rape-murder case of a Dalit woman in Hathras settled, a four-year-old girl from the district, who was allegedly raped by her relative, died during treatment at a hospital in Delhi, police said Tuesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X