ಯುಪಿಯಲ್ಲಿ ಬಸ್ ಅಪಘಾತ: 5 ಜನ ಸಾವು, ಹಲವರಿಗೆ ಗಾಯ
ಕಾನ್ಪುರ, ಜನವರಿ 31: ಕಾನ್ಪುರದ ಟಾಟ್ ಮಿಲ್ ಕ್ರಾಸ್‌ರೋಡ್ ಬಳಿ ಎಲೆಕ್ಟ್ರಿಕ್ ಬಸ್ ನಿಯಂತ್ರಣ ಕಳೆದುಕೊಂಡಿದೆ.ಈ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ ಮೂರು ಕಾರುಗಳು ಹಾಗೂ ಹಲವು ಬೈಕ್‌ಗಳು ಬಸ್‌ನಿಂದ ಹಾನಿಗೊಳಗಾಗಿವೆ. ಬಸ್ಸಿನ ಚಾಲಕ ಪರಾರಿಯಾಗಿದ್ದು ನಾವು ಅವನನ್ನು ಹುಡುಕುತ್ತಿದ್ದೇವೆ ಎಂದು ಪೂರ್ವ ಕಾನ್ಪುರದ ಉಪ ಪೊಲೀಸ್ ಆಯುಕ್ತ ಪ್ರಮೋದ್ ಕುಮಾರ್ ಭಾನುವಾರ ತಡರಾತ್ರಿ ತಿಳಿಸಿದ್ದಾರೆ.
Uttar Pradesh | At least five people killed and several injured in an electric bus accident in Kanpur. The incident took place near Tat Mill cross road: Pramod Kumar, DCP East Kanpur pic.twitter.com/ZzVsKMOYuZ
— ANI UP/Uttarakhand (@ANINewsUP) January 30, 2022
ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣದ ತನಿಖೆಯನ್ನು ಆರಂಭಿಸಲಾಗಿದೆ ಎಂದು ಡಿಸಿಪಿ ತಿಳಿಸಿದ್ದಾರೆ. ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿ ಟ್ವಿಟ್ ಮಾಡಿದ್ದಾರೆ. "ಕಾನ್ಪುರದಲ್ಲಿ ರಸ್ತೆ ಅಪಘಾತದ ದುರದೃಷ್ಟಕರ ಸುದ್ದಿಯಾಗಿದೆ. ಮೃತರಿಗೆ ನನ್ನ ಸಂತಾಪ ಸೂಚಿಸುತ್ತೇನೆ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲು ನಾನು ದೇವರನ್ನು ಪ್ರಾರ್ಥಿಸುತ್ತೇನೆ" ಎಂದು ಪ್ರಿಯಾಂಕಾ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

Recommended Video
Rohit Sharma ತಂಡಕ್ಕೆ ಫ್ಲೈಟ್ ವ್ಯವಸ್ಥೆ ಮಾಡದ BCCI | Oneindia Kannada












Click it and Unblock the Notifications