• search
  • Live TV
ಲಕ್ನೋ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರಸ್ತೆಯಲ್ಲಿ ಸಾಗುತ್ತಿದ್ದ ಕಾರ್ಮಿಕರಿಗೆ ಬಸ್ ಡಿಕ್ಕಿ, 6 ಮಂದಿ ಸಾವು

|

ಲಕ್ನೌ, ಮೇ 14: ಕೊರೊನಾ ವೈರಸ್‌ ಲಾಕ್‌ಡೌನ್‌ ಹಿನ್ನೆಲೆ ವಲಸೆ ಕಾರ್ಮಿಕರ ಅಪಘಾತ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೆ ಇದೆ. ಹೆದ್ದಾರಿಗಳಲ್ಲಿ ನಡೆದುಕೊಂಡು ಹೋಗುತ್ತಿರುವ ಅಮಾಯಕ ಜನರು ಅಪಘಾತಕ್ಕೆ ಬಲಿಯಾಗುತ್ತಿದ್ದಾರೆ.

ಕಳೆದ ರಾತ್ರಿ ಉತ್ತರ ಪ್ರದೇಶದ ಕೊಟ್ವಾಲಿ ಪ್ರದೇಶದ ಸಹರಾನ್‌ಪುರ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಒಟ್ಟು 6 ಜನ ಕಾರ್ಮಿಕರು ತಮ್ಮ ಜೀವ ಕಳೆದುಕೊಂಡಿದ್ದಾರೆ. ನಾಲ್ಕು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.

ಉತ್ತರ ಪ್ರದೇಶದ ಮುಜಫರ್ನಗರ-ಸಹರಾನ್‌ಪುರ ಹೆದ್ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ 6 ವಲಸೆ ಕಾರ್ಮಿಕರಿಗೆ ತಡರಾತ್ರಿ ಘಲೌಲಿ ಚೆಕ್‌ಪೋಸ್ಟ್ ಬಳಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದಿದೆ. ಚಾಲಕನ ವಿರುದ್ಧ ಕೇಸ್ ದಾಖಲಿಸಲಾಗಿದೆ.

ಈ ಅಪಘಾತದಲ್ಲಿ ಆರು ವಲಸೆ ಕಾರ್ಮಿಕರು ಸಾವನ್ನಪ್ಪಿದ್ದು, ನಾಲ್ಕು ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ಮೀರತ್ ವಲಯದ ಎಡಿಜಿ ಪ್ರಶಾಂತ್ ಕುಮಾರ್ ಖಚಿತಪಡಿಸಿದ್ದಾರೆ. ಇವರೆಲ್ಲರೂ ಪಂಜಾಬ್‌ನಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು ಎಂದು ಹೇಳಿದ್ದಾರೆ.

ಹರ್ಯಾಣದಲ್ಲಿ ವಲಸೆ ಕಾರ್ಮಿಕರಿಗೆ ಕಾರು ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಕಳೆದ ವಾರ ರಾಷ್ಟ್ರವನ್ನು ಬೆಚ್ಚಿಬೀಳಿಸಿದ ಘಟನೆ ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯಲ್ಲಿ ನಡೆದಿತ್ತು. 16 ವಲಸೆ ಕಾರ್ಮಿಕರನ್ನು ಸರಕು ಸಾಗಣಿಕೆ ರೈಲು ಡಿಕ್ಕಿ ಹೊಡೆದ ಘಟನೆ ವರದಿಯಾಗಿತ್ತು. ಅವರೂ ಸಹ ಮಧ್ಯಪ್ರದೇಶದ ತಮ್ಮ ಮನೆಗಳಿಗೆ ವಾಕಿಂಗ್ ಹೋಗುತ್ತಿದ್ದರು.

English summary
Accident - 6 migrant workers died at Muzaffarnagar-Saharanpur highway Ghalauli check-post. 8 labourers dead at Cantt PS area in Guna last night.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X